AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡೋದು ಯಾವಾಗ?

ನಟ ರಾಮ್ ಚರಣ್ ಅವರ ಹೊಸ ಸಿನಿಮಾ ‘ಪೆದ್ದಿ’ ಈಗಾಗಲೇ ಚಿತ್ರಮಂದಿರದಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟಿಟಿ ಬಿಡುಗಡೆಗೆ ಫ್ಯಾನ್ಸ್ ಕಾಯುತ್ತಿದ್ದಾರೆ. ವರದಿಗಳ ಪ್ರಕಾರ, ಜುಲೈ 2ರಿಂದ ‘ಪೆದ್ದಿ’ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗುವ ಸಾಧ್ಯತೆ ಇದೆ.

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡೋದು ಯಾವಾಗ?
Ram Charan
ಮದನ್​ ಕುಮಾರ್​
|

Updated on: Jun 22, 2026 | 7:35 PM

Share

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ, ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ ನಂತರ, ಈಗ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಬುಚ್ಚಿ ಬಾಬು ಸನಾ ನಿರ್ದೇಶನದ ಈ ಚಿತ್ರ ಈಗಾಗಲೇ ವಿಶ್ವಾದ್ಯಂತ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಯಶಸ್ವಿ ಪ್ರದರ್ಶನ ಕಂಡಿದೆ. ಇದರ ಬೆನ್ನಲ್ಲೇ ಒಟಿಟಿ ಬಿಡುಗಡೆ ಕುರಿತಾದ ಬಿಸಿಬಿಸಿ ಚರ್ಚೆಗಳು ಶುರುವಾಗಿವೆ. ‘ಪೆದ್ದಿ’ (Peddi) ಸಿನಿಮಾ ಯಾವಾಗ ಒಟಿಟಿಗೆ ಬರಬಹುದು ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ.

ಚಿತ್ರರಂಗದ ಲೇಟೆಸ್ಟ್ ಮಾಹಿತಿಗಳ ಪ್ರಕಾರ, ‘ಪೆದ್ದಿ’ ಚಿತ್ರದ ಡಿಜಿಟಲ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ (Netflix) ಒಟಿಟಿ ಸಂಸ್ಥೆ ಭಾರಿ ಮೊತ್ತಕ್ಕೆ ಖರೀದಿಸಿದೆ. ಈ ಸಿನಿಮಾ ಜುಲೈ 2ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ತೆಲುಗು ಮಾತ್ರವಲ್ಲದೆ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ಏಕಕಾಲಕ್ಕೆ ಸಿನಿಮಾ ಲಭ್ಯವಿರಲಿದ್ದು, ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳಲಿದೆ.

ಈ ಚಿತ್ರದಲ್ಲಿ ರಾಮ್ ಚರಣ್ ಜೋಡಿಯಾಗಿ ಬಾಲಿವುಡ್ ನಟಿ ಜಾನ್ವಿ ಕಪೂರ್ ಕಾಣಿಸಿಕೊಂಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಉಳಿದಂತೆ ಜಗಪತಿ ಬಾಬು, ಬೋಮನ್ ಇರಾನಿ ಹಾಗೂ ದಿವ್ಯೇಂದು ಶರ್ಮಾ ಕೂಡ ಪಾತ್ರವರ್ಗದಲ್ಲಿದ್ದಾರೆ. ‘ವೃದ್ಧಿ ಸಿನಿಮಾಸ್ ಸಂಸ್ಥೆ’ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನಿರ್ದೇಶನವಿದ್ದು, ರತ್ನವೇಲು ಅವರ ಛಾಯಾಗ್ರಹಣವಿದೆ.

‘ಉಪ್ಪೇನಾ’ ಚಿತ್ರದ ನಂತರ ‘ಪೆದ್ದಿ’ ಮೂಲಕ ಮತ್ತೊಂದು ಯಶಸ್ಸು ಕಂಡಿರುವ ನಿರ್ದೇಶಕ ಬುಚ್ಚಿ ಬಾಬು ಅವರ ಮೇಕಿಂಗ್ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ಆದರೆ ಕೆಲವು ಟೀಕೆಗಳು ಕೂಡ ಬಂದಿವೆ. ಈ ಹಿಂದೆ ಚಿತ್ರದಿಂದ ಚಿತ್ರಕ್ಕೆ ದೀರ್ಘ ಗ್ಯಾಪ್ ತೆಗೆದುಕೊಳ್ಳುತ್ತಿದ್ದ ಬುಚ್ಚಿ ಬಾಬು ಸನಾ ಅವರು ಈ ಬಾರಿ ಹೆಚ್ಚು ತಡ ಮಾಡದೆ ಮುಂದಿನ ಸ್ಕ್ರಿಪ್ಟ್ ಕೆಲಸವನ್ನು ಬೇಗನೆ ಆರಂಭಿಸಲು ನಿರ್ಧರಿಸಿದ್ದಾರಂತೆ.

ಇದನ್ನೂ ಓದಿ: ಕೊನೆಗೂ ಮಗಳ ಮುಖ ತೋರಿಸಿದ ರಾಮ್ ಚರಣ್, ಉಪಾಸನಾ; ಕ್ಲಿನ್ ಕಾರಾ ಯಾರ ರೀತಿ ಇದ್ದಾಳೆ ನೋಡಿ..

ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ಗಾಸಿಪ್​ಗಳ ಪ್ರಕಾರ, ಬುಚ್ಚಿ ಬಾಬು ಸನಾ ಅವರು ತಮ್ಮ ಮುಂದಿನ ಸಿನಿಮಾವನ್ನು ಸೂಪರ್‌ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸದ್ಯ ಮಹೇಶ್ ಬಾಬು ಅವರು ‘ವಾರಣಾಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ