Kantara: ‘ಕಾಂತಾರ’ ಚಿತ್ರದ ಒಟಿಟಿ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದಕ್ಕೆ ಇಲ್ಲಿದೆ ಕಾರಣ

| Updated By: ಮದನ್​ ಕುಮಾರ್​

Updated on: Nov 08, 2022 | 2:52 PM

Kantara Movie OTT | Rishab Shetty: ಎಲ್ಲ ಭಾಷೆಯ ಪ್ರೇಕ್ಷಕರು ‘ಕಾಂತಾರ’ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಎಲ್ಲ ಕಡೆಗಳಿಂದ ಈ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಪರಭಾಷೆಯ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ.

Kantara: ‘ಕಾಂತಾರ’ ಚಿತ್ರದ ಒಟಿಟಿ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದಕ್ಕೆ ಇಲ್ಲಿದೆ ಕಾರಣ
ರಿಷಬ್ ಶೆಟ್ಟಿ
Follow us on

ಕನ್ನಡದ ಕಾಂತಾರ’ (Kantara Movie) ಸಿನಿಮಾ ದೇಶಾದ್ಯಂತ ಉತ್ತಮ ಪ್ರದರ್ಶನ ಕಂಡಿದೆ. ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಶೋ ನಡೆಯುತ್ತಿದೆ. ಈ ಸಿನಿಮಾವನ್ನು ಒಟಿಟಿಯಲ್ಲಿ (OTT) ನೋಡಬೇಕು ಎಂದು ಪ್ರೇಕ್ಷಕರು ಕಾದಿದ್ದಾರೆ. ಮೊದಲ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ​ ನವೆಂಬರ್​ 18ರಂದು ಈ ಚಿತ್ರ ಒಟಿಟಿಗೆ ಕಾಲಿಡಬೇಕಿತ್ತು. ಆದರೆ ಈಗ ಒಟಿಟಿ ರಿಲೀಸ್​ ದಿನಾಂಕ (Kantara OTT release Date) ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಹರಿದಾಡುತ್ತಿದೆ. ನವೆಂಬರ್​ ಕೊನೇ ವಾರದಲ್ಲಿ ಈ ಚಿತ್ರ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಬಹುದು ಎನ್ನಲಾಗುತ್ತಿದೆ. ಅದಕ್ಕೆ ಕಾರಣ ಕೂಡ ಇದೆ. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವುದರಿಂದ ಈಗಲೇ ಒಟಿಟಿಯಲ್ಲಿ ರಿಲೀಸ್​ ಮಾಡುವುದು ಬೇಡ ಎಂದು ನಿರ್ಮಾಪಕರು ನಿರ್ಧಾರಿಸಿದ್ದಾರೆ ಎಂಬ ಮಾತು ಕೇಳಿಬಂದಿದೆ.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಬತ್ತಳಿಕೆಯಿಂದ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆ ಇದಕ್ಕೆ ಬಂಡವಾಳ ಹೂಡಿದೆ. ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ತೋರಿಸುವ ಈ ಚಿತ್ರವನ್ನು ಇಡೀ ದೇಶದ ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಎಲ್ಲ ಕಡೆಗಳಿಂದ ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದೆ. ಪರಭಾಷೆ ಮಂದಿ ಕೂಡ ಫಿದಾ ಆಗಿದ್ದಾರೆ.

ಸೆಪ್ಟೆಂಬರ್​ 30ರಂದು ಈ ಸಿನಿಮಾ ಕನ್ನಡದಲ್ಲಿ ರಿಲೀಸ್​ ಆಯಿತು. ಪರಭಾಷೆ ಪ್ರೇಕ್ಷಕರಿಂದಲೂ ಡಿಮ್ಯಾಂಡ್​ ಬಂದಿದ್ದರಿಂದ ನಂತರ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗಿಗೆ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ಹಿಂದಿ ಪ್ರೇಕ್ಷಕರಂತೂ ಈ ಚಿತ್ರವನ್ನು ಮುಗಿಬಿದ್ದು ನೋಡಿದ್ದಾರೆ. ಇಂದಿಗೂ ಉತ್ತಮ ಕಲೆಕ್ಷನ್​ ಮಾಡುತ್ತಿದೆ. ಹಿಂದಿಯಲ್ಲಿ ಈವರೆಗೂ 60 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿ ಮುನ್ನುಗ್ಗುತ್ತಿದೆ.

ಇದನ್ನೂ ಓದಿ
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಎಲ್ಲ ಭಾಷೆಗಳಿಂದ ‘ಕಾಂತಾರ’ ಸಿನಿಮಾದ ಕಲೆಕ್ಷನ್​ 300 ಕೋಟಿ ರೂಪಾಯಿ ದಾಡಿದೆ. ಆ ಮೂಲಕ ಕನ್ನಡದ ಬ್ಲಾಕ್​ ಬಸ್ಟರ್​ ಸಿನಿಮಾಗಳ ಸಾಲಿನಲ್ಲಿ ‘ಕಾಂತಾರ’ ಕೂಡ ಸ್ಥಾನ ಪಡೆದುಕೊಂಡಿದೆ. ಸದ್ಯಕ್ಕೆ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಆಗುತ್ತಿರುವುದರಿಂದ ಒಂದಷ್ಟು ದಿನಗಳ ಕಾಲ ಒಟಿಟಿ ರಿಲೀಸ್​ ಮುಂದೂಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಬಿಡುಗಡೆಗೂ ಮುನ್ನವೇ ‘ಅಮೇಜಾನ್​ ಪ್ರೈಂ ವಿಡಿಯೋ’ ಜೊತೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಒಟಿಟಿ ವ್ಯವಹಾರ ಮಾಡಿಕೊಂಡಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಒಟಿಟಿ ರಿಲೀಸ್​ ದಿನಾಂಕ ಬಹಿರಂಗ ಆಗಲಿದೆ. ವಿವೇಕ್​ ಅಗ್ನಿಹೋತ್ರಿ, ಪ್ರಭಾಸ್​, ಕಂಗನಾ ರಣಾವತ್​, ರಜನಿಕಾಂತ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಚಿತ್ರವನ್ನು ಕೊಂಡಾಡಿದ್ದಾರೆ. ರಿಷಬ್​ ಶೆಟ್ಟಿ ಪ್ರಯತ್ನಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.