Kantara Movie: ‘ಕಾಂತಾರ’ ಚಿತ್ರ ಯಾವ ಒಟಿಟಿಯಲ್ಲಿ ರಿಲೀಸ್​ ಆಗ್ತಿದೆ? ಪ್ರೇಕ್ಷಕರಿಗೆ ಇಲ್ಲಿದೆ ಸಿಹಿ ಸುದ್ದಿ

Kantara OTT Release: ರಿಷಬ್​ ಶೆಟ್ಟಿ ನಟನೆ/ನಿರ್ದೇಶನದ ‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಚಿತ್ರ ರಿಲೀಸ್​ ಆಗುವುದಕ್ಕೂ ಮುನ್ನವೇ ಒಟಿಟಿ ವ್ಯವಹಾರ ನಡೆದಿತ್ತು.

Kantara Movie: ‘ಕಾಂತಾರ’ ಚಿತ್ರ ಯಾವ ಒಟಿಟಿಯಲ್ಲಿ ರಿಲೀಸ್​ ಆಗ್ತಿದೆ? ಪ್ರೇಕ್ಷಕರಿಗೆ ಇಲ್ಲಿದೆ ಸಿಹಿ ಸುದ್ದಿ
ರಿಷಬ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:Nov 03, 2022 | 3:06 PM

ದೇಶಾದ್ಯಂತ ಧೂಳ್ಳೆಬ್ಬಿಸಿದ ‘ಕಾಂತಾರ’ (Kantara) ಚಿತ್ರದ ಬಗ್ಗೆ ದಿನದಿನವೂ ಹೊಸ ಹೊಸ ಅಪ್​ಡೇಟ್ಸ್​ ಕೇಳಿಬರುತ್ತಿವೆ. ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದ್ದರೂ ಈ ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ರಿಷಬ್​ ಶೆಟ್ಟಿ (Rishab Shetty) ಅವರಿಗೆ ಮೆಚ್ಚುಗೆಯ ಮಳೆ ಸುರಿಸಲಾಗುತ್ತಿದೆ. ತುಳುನಾಡಿನ ಸಂಪ್ರದಾಯವನ್ನು ಸಾರುವ ಈ ಚಿತ್ರಕ್ಕೆ ಇಡೀ ದೇಶವೇ ಮನಸೋತಿದೆ. ಪ್ರಭಾಸ್​, ಅನುಷ್ಕಾ ಶೆಟ್ಟಿ, ರಜನಿಕಾಂತ್​, ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ ಮುಂತಾದ ಸೆಲೆಬ್ರಿಟಿಗಳು ಈ ಚಿತ್ರವನ್ನು ಕೊಂಡಾಡಿದ್ದಾರೆ. ಇಷ್ಟೆಲ್ಲ ಪ್ರಶಂಸೆ ಪಡೆದ ಸಿನಿಮಾವನ್ನು ಮನೆಯಲ್ಲೇ ಕುಳಿತು ಎಂಜಾಯ್​ ಮಾಡಬೇಕು ಎಂಬ ಆಸೆ ಎಲ್ಲ ಪ್ರೇಕ್ಷರಿಗೂ ಇದೆ. ಈಗಾಗಲೇ ಚಿತ್ರಮಂದಿರದಲ್ಲಿ ನೋಡಿರುವವರು ಕೂಡ ಈ ಚಿತ್ರದ ಒಟಿಟಿ ರಿಲೀಸ್​ಗಾಗಿ ಕಾದಿದ್ದಾರೆ. ಯಾವ ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ‘ಕಾಂತಾರ’ ವೀಕ್ಷಣೆಗೆ ಲಭ್ಯವಾಗಲಿದೆ? ಅದಕ್ಕೆ ಉತ್ತರ ಇಲ್ಲಿದೆ. ‘ಅಮೇಜಾನ್​ ಪ್ರೈಮ್​ ವಿಡಿಯೋ’ (Amazon Prime Video) ಮೂಲಕ ಈ ಚಿತ್ರ ಪ್ರಸಾರ ಆಗಲಿದೆ.

ದಕ್ಷಿಣ ಭಾರತದಲ್ಲಿ ‘ಅಮೇಜಾನ್​ ಪ್ರೈಂ ವಿಡಿಯೋ’ ಹೆಚ್ಚು ಪ್ರಾಬಲ್ಯ ಹೊಂದಿದೆ. ನೆಟ್​ಫ್ಲಿಕ್ಸ್​ಗೆ ಹೋಲಿಸಿದರೆ ದಕ್ಷಿಣದ ಸಿನಿಮಾಗಳು ಹೆಚ್ಚಾಗಿ ಸಿಗುವುದು ಅಮೇಜಾನ್​ ಪ್ರೈಂ ವಿಡಿಯೋದಲ್ಲಿ. ಹಾಗಾಗಿ ದಕ್ಷಿಣದ ಮಂದಿ ಹೆಚ್ಚಾಗಿ ಈ ಒಟಿಟಿಗೆ ಚಂದಾದಾರರಾಗಿದ್ದಾರೆ. ‘ಕಾಂತಾರ’ ಕೂಡ ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕವೇ ವೀಕ್ಷಣೆಗೆ ಲಭ್ಯವಾಗಲಿದೆ ಎಂಬ ಸುದ್ದಿ ಕೇಳಿ ಸೌತ್​ ಪ್ರೇಕ್ಷಕರು ಖುಷಿಪಟ್ಟಿದ್ದಾರೆ.

‘ಕಾಂತಾರ’ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನವೇ ಒಟಿಟಿ ವ್ಯವಹಾರ ನಡೆದಿತ್ತು. ಆದರೆ ಈ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಹಿಟ್​ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಬೇರೆ ಭಾಷೆಗಳಿಗೆ ಡಬ್​ ಮಾಡುವ ಪ್ಲ್ಯಾನ್​ ಕೂಡ ಇರಲಿಲ್ಲ. ಆದರೆ ನಂತರದಲ್ಲಿ ಎಲ್ಲವೂ ಬದಲಾಯಿತು. ತಮಿಳು, ಮಲಯಾಳಂ, ಹಿಂದಿ, ತೆಲುಗು ಭಾಷೆಗಳಿಗೆ ಡಬ್​ ಆಗಿ ಈ ಚಿತ್ರ ಸಖತ್​ ಕಮಾಯಿ ಮಾಡಿತು.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಈಗಲೂ ಅನೇಕ ಚಿತ್ರಮಂದಿರದಲ್ಲಿ ‘ಕಾಂತಾರ’ ಉತ್ತಮ ರೀತಿಯಲ್ಲಿ ಪ್ರದರ್ಶನ ಕಾಣುತ್ತಿರುವುದರಿಂದ ಒಟಿಟಿ ರಿಲೀಸ್​ ಕೊಂಚ ತಡವಾಗಿದೆ. ಹಾಗಿದ್ದರೂ ಕೂಡ ನವೆಂಬರ್​ ತಿಂಗಳಲ್ಲೇ ಈ ಚಿತ್ರ ಒಟಿಟಿಗೆ ಕಾಲಿಡಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಕೆಜಿಎಫ್​: ಚಾಪ್ಟರ್​ 2’ ನಂತರ ‘ಕಾಂತಾರ’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಗೆ ಸಖತ್​ ಲಾಭ ಆಗಿದೆ. ರಿಷಬ್​ ಶೆಟ್ಟಿ ಮಾಡಲಿರುವ ಮುಂದಿನ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚುವಂತಾಗಿದೆ. ‘ಕಾಂತಾರ 2’ ಬರಲಿ ಎಂದು ಕೂಡ ಅನೇಕರು ಆಸೆ ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:06 pm, Thu, 3 November 22

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ