AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Shetty: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಟಾಪರ್​ ಆದ ರೂಪೇಶ್​ ಶೆಟ್ಟಿಗೆ 5 ಲಕ್ಷ ರೂ. ಬಹುಮಾನ

Bigg Boss Kannada OTT Winner: ರೂಪೇಶ್​ ಶೆಟ್ಟಿ 5 ಲಕ್ಷ ರೂಪಾಯಿ ನಗದು ಬಹುಮಾನ ಪಡೆದಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಟಾಪರ್​ ಆದ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Roopesh Shetty: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಟಾಪರ್​ ಆದ ರೂಪೇಶ್​ ಶೆಟ್ಟಿಗೆ 5 ಲಕ್ಷ ರೂ. ಬಹುಮಾನ
ರೂಪೇಶ್ ಶೆಟ್ಟಿ
TV9 Web
| Updated By: Digi Tech Desk|

Updated on:Sep 17, 2022 | 9:39 AM

Share

‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಶೋ ಅಂತ್ಯವಾಗಿದೆ. ಶುಕ್ರವಾರ (ಸೆ.16) ಅದ್ದೂರಿಯಾಗಿ ಫಿನಾಲೆ ನಡೆಯಿತು. 42 ದಿನಗಳ ಕಾಲ ಎಲ್ಲರ ನಡುವೆ ಸಖತ್​ ಪೈಪೋಟಿ ಇತ್ತು. ಕಡೆಗೂ ನಾಲ್ಕು ಜನರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದಿದ್ದಾರೆ. ಆ ಪೈಕಿ ರೂಪೇಶ್​ ಶೆಟ್ಟಿ (Roopesh Shetty) ಅವರು ಟಾಪರ್​ ಆಗಿದ್ದಾರೆ. ಅವರಿಗೆ ಫಿನಾಲೆ ವೇದಿಕೆಯಲ್ಲಿ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು. ಕೊನೇ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ಪರ್ಫಾರ್ಮೆನ್ಸ್​ ನೀಡುವ ಮೂಲಕ ರೂಪೇಶ್​ ಶೆಟ್ಟಿ ಅವರು ಈ ಬಹುಮಾನದ ಮೊತ್ತ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಅವರ ಜೊತೆಗೆ ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್​ ಹಾಗೂ ಆರ್ಯವರ್ಧನ್​ ಗುರೂಜಿ ಕೂಡ ಟಿವಿ ಸೀಸನ್​ಗೆ (BBK9) ನೇರ ಟಿಕೆಟ್​ ಪಡೆದುಕೊಂಡಿದ್ದಾರೆ.

ತಮ್ಮದೇ ರೀತಿಯಲ್ಲಿ ರೂಪೇಶ್​ ಶೆಟ್ಟಿ ಅವರು ಗುರುತಿಸಿಕೊಂಡಿದ್ದರು. ಸಾನ್ಯಾ ಐಯ್ಯರ್​ ಜೊತೆಗೆ ಅವರು ಹೆಚ್ಚು ಆಪ್ತವಾಗಿದ್ದರು. ದೊಡ್ಮನೆಯಲ್ಲಿ ಅವರು ಕಿರಿಕ್​ ಮಾಡಿಕೊಂಡಿದ್ದು ಕಡಿಮೆ. ಸಾಧ್ಯವಾದಷ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುಣ ಅವರದ್ದಾಗಿತ್ತು. ಈ ಎಲ್ಲ ಕಾರಣದಿಂದಾಗಿ ಅವರು ಜನಮನ ಗೆದ್ದಿದ್ದಾರೆ. ಹೆಚ್ಚು ವೋಟ್​ ಪಡೆಯುವ ಮೂಲಕ ಟಾಪರ್​ ಸ್ಥಾನ ಗಳಿಸಿದ್ದಾರೆ.

ಇದನ್ನೂ ಓದಿ
Image
BBK9 ಶೋನಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದ ರಾಕೇಶ್​, ರೂಪೇಶ್​, ಆರ್ಯವರ್ಧನ್​, ಸಾನ್ಯಾ ಐಯ್ಯರ್​
Image
Aryavardhan Guruji: ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗೆ ಎಂಟ್ರಿ ಪಡೆದ ಮೊದಲ ಸ್ಪರ್ಧಿ ಆರ್ಯವರ್ಧನ್​ ಗುರೂಜಿ
Image
Bigg Boss Kannada OTT Finale: ಸಾನ್ಯಾ ಅಯ್ಯರ್​ಗೆ ಸಾನ್ಯಾ ಶೆಟ್ಟಿ ಅಂತ ಕರೆದರೆ ಆಹಾ ಎಷ್ಟೊಂದು ಖುಷಿ; ಇಲ್ಲಿದೆ ವಿಡಿಯೋ ಸಾಕ್ಷಿ
Image
Bigg Boss Kannada OTT: ಕೊನೇ ದಿನಕ್ಕಾಗಿ ಸಾನ್ಯಾ ಐಯ್ಯರ್​-ಸೋನು​ ಗೌಡ ನಡುವೆ ಮೇಕಪ್​ ಪೈಪೋಟಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ಸೆಪ್ಟೆಂಬರ್​ 24ರಿಂದ ಆರಂಭ ಆಗಲಿದೆ. ಅದನ್ನು ಕೂಡ ಕಿಚ್ಚ ಸುದೀಪ್​ ಅವರು ನಡೆಸಿಕೊಡಲಿದ್ದಾರೆ. ಬಿಗ್​ ಬಾಸ್​ ಕನ್ನಡ ಒಟಿಟಿ ಫಿನಾಲೆಯಲ್ಲಿ ಗೆದ್ದ ರೂಪೇಶ್​ ಶೆಟ್ಟಿ, ಸಾನ್ಯಾ ಐಯ್ಯರ್​, ಆರ್ಯವರ್ಧನ್​ ಗುರೂಜಿ ಹಾಗೂ ರಾಕೇಶ್​ ಅಡಿಗ ಜೊತೆಯಲ್ಲಿ ಹಳೇ ಸೀಸನ್​ನ 5 ಸ್ಪರ್ಧಿಗಳು ಕೂಡ 9ನೇ ಸೀಸನ್​ಗೆ ಎಂಟ್ರಿ ನೀಡಲಿದ್ದಾರೆ. ಅವರ ಜೊತೆ 9 ಹೊಸ ಸ್ಪರ್ಧಿಗಳಿಗೆ ಅವಕಾಶ ಸಿಗುತ್ತಿದೆ. ಅವರೆಲ್ಲರ ನಡುವೆ ರೂಪೇಶ್​ ಶೆಟ್ಟಿ ಅವರು ಯಾವ ರೀತಿ ಗುರುತಿಸಿಕೊಳ್ಳಲಿದ್ದಾರೆ ಎಂಬ ಕೌತುಕ ಮೂಡಿದೆ.

ನಟನಾಗಿ, ಆರ್​ಜೆ ಆಗಿ ರೂಪೇಶ್​ ಶೆಟ್ಟಿ ಫೇಮಸ್​. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋಗೆ ಬಂದ ಬಳಿಕ ಅವರಿಗೆ ಇನ್ನಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು 5 ಲಕ್ಷ ರೂಪಾಯಿ ಬಹುಮಾನ ಮೊತ್ತ ಪಡೆದು ಬೀಗಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:55 pm, Fri, 16 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?