Saanya Iyer: ಬಿಗ್ ಬಾಸ್ ಕನ್ನಡ ಓಟಿಟಿ ಶೋಗೆ ಪುಟ್ಟಗೌರಿ ಮದುವೆ ಖ್ಯಾತಿಯ ಸಾನ್ಯಾ ಅಯ್ಯರ್ ಎಂಟ್ರಿ

Bigg Boss OTT kannada: ಈಗಾಗಲೇ ಆರ್ಯವರ್ಧನ್​ ಗುರೂಜಿ (Aryavardhan Guruji), ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ ಅವರು ಬಿಗ್​ ಬಾಸ್ ಮನೆ ಸೇರಿದ್ದಾರೆ. ಇದೀಗ ಪುಟ್ಟಗೌರಿ ಮದುವೆ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ (Saanya Iyer) ನಾಲ್ಕನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ.

Saanya Iyer: ಬಿಗ್ ಬಾಸ್ ಕನ್ನಡ ಓಟಿಟಿ ಶೋಗೆ ಪುಟ್ಟಗೌರಿ ಮದುವೆ ಖ್ಯಾತಿಯ ಸಾನ್ಯಾ ಅಯ್ಯರ್ ಎಂಟ್ರಿ
sanya iyer
TV9kannada Web Team

| Edited By: Vinay Bhat

Aug 06, 2022 | 8:36 PM

Bigg Boss OTT Kannada Season 1: ‘ಬಿಗ್ ಬಾಸ್​ ಒಟಿಟಿ’ಗೆ (Bigg Boss OTT) ಇಂದು (ಆಗಸ್ಟ್ 6) ಸಂಜೆ 7 ಗಂಟೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಈಗಾಗಲೇ ಆರ್ಯವರ್ಧನ್​ ಗುರೂಜಿ (Aryavardhan Guruji), ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ ಹಾಗೂ ಸ್ಪೂರ್ಥಿ ಗೌಡ ಅವರು ಬಿಗ್​ ಬಾಸ್ ಮನೆ ಸೇರಿದ್ದಾರೆ. ಇದೀಗ ಪುಟ್ಟಗೌರಿ ಮದುವೆ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ (Saanya Iyer) ಐದನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿದ್ದಾರೆ. ಡ್ಯಾನ್ಸಿಂಗ್ ಚಾಂಪಿಯನ್‌ ಶೋ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮುಂದೆ ಬಂದಿದ್ದ ಸಾನ್ಯಾಗೆ ದೊಡ್ಡ ಅಭಿಮಾನಿ ಬಳಗವೇ ಇದೆ.

ಬೆಂಗಳೂರಿನಲ್ಲೇ ಹುಟ್ಟಿಬೆಳೆದಿರುವ ಸಾನ್ಯಾ ಅಯ್ಯರ್ ಅವರ ತಂದೆತಾಯಿ, ಚಿಕ್ಕಮ್ಮಂದಿರು ಕೂಡ ಕಲಾವಿದರು. ಇವರೆಲ್ಲ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. 8ನೇ ತರಗತಿವರೆಗೆ ಓದಿನ ಜೊತೆ ನಟನೆಯಲ್ಲೂ ಸಕ್ರಿಯರಾಗಿದ್ದ ಸಾನ್ಯಾ ನಂತರ ಬಣ್ಣದ ಲೋಕದಿಂದ ಬ್ರೇಕ್ ಪಡೆದು ಶಿಕ್ಷಣದತ್ತ ಮುಖ ಮಾಡಿದರು. ಪ್ರಸ್ತುತ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಕ್ರೀಡೆಯಲ್ಲಿ ಕೂಡ ಸೈ ಎನಿಸಿಕೊಂಡಿರುವ ಇವರು ಇದೀಗ ದೊಡ್ಮನೆ ಪ್ರವೇಶಿಸಿದ್ದಾರೆ.

ಪುಟ್ಟ ಗೌರಿ ಮದುವೆ ಧಾರಾವಾಹಿ ಮೂಲಕ ಪುಟ್ಟ ಗೌರಿ ಆಗಿ ಮನಗೆದ್ದ ಸಾನ್ಯಾಗೆ ಒಂದಿಷ್ಟು ಶಾರ್ಟ್ ಮೂವಿ, ಆಲ್ಬಂ ಸಾಂಗ್, ಡ್ಯಾನ್ಸ್ ರಿಯಾಲಿಟಿ ಶೋ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು. ಪುಟ್ಟಗೌರಿ ಮದುವೆ ಧಾರಾವಾಹಿ ಕನ್ನಡ ಕಿರುತೆರೆ ಲೋಕದಲ್ಲಿ ದೊಡ್ಡ ದಾಖಲೆ ಸೃಷ್ಟಿ ಮಾಡಿತ್ತು. ಬಾಲ್ಯದಲ್ಲಿ ಗೌರಿ ಪಾತ್ರದಲ್ಲಿ ನಟಿ ಸಾನ್ಯಾ ಅಯ್ಯರ್ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ

ಈ ಬಾರಿ ‘ಬಿಗ್ ಬಾಸ್​’ ಅನ್ನು ಒಟಿಟಿಯಲ್ಲಿ ಮಾತ್ರ ವೀಕ್ಷಿಸಬಹುದು. ವೂಟ್ ಆ್ಯಪ್​​ನ ಚಂದಾದಾರರಾದರೆ ಮಾತ್ರ ‘ಬಿಗ್ ಬಾಸ್ ಒಟಿಟಿ’ ವೀಕ್ಷಣೆ ಸಾಧ್ಯ. ಇಲ್ಲವಾದರೆ, ನೀವು ‘ಬಿಗ್ ಬಾಸ್’ ನೋಡಲು ಆಗುವುದಿಲ್ಲ. ಇಲ್ಲಿ ಕೂಡ ವಾರಾಂತ್ಯದಲ್ಲಿ ಸುದೀಪ್ ಅವರು ಆಗಮಿಸಿ ‘ಬಿಗ್ ಬಾಸ್’ನಲ್ಲಿ ಪಂಚಾಯ್ತಿ ಮಾಡಲಿದ್ದಾರೆ. ಅಲ್ಲದೆ ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada