Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?

Sai Pallavi | Rana Daggubati: ಜೂನ್​ 17ರಂದು ‘ವಿರಾಟ ಪರ್ವಂ’ ಸಿನಿಮಾ ತೆರೆಕಂಡಿತ್ತು. ಒಂದು ತಿಂಗಳು ಕಳೆಯೋದರೊಳಗೆ ಈ ಚಿತ್ರ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ.

Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
ರಾಣಾ ದಗ್ಗುಬಾಟಿ, ಸಾಯಿ ಪಲ್ಲವಿ
Follow us
TV9 Web
| Updated By: ಮದನ್​ ಕುಮಾರ್​

Updated on:Jun 30, 2022 | 10:33 AM

ನಟಿ ಸಾಯಿ ಪಲ್ಲವಿ (Sai Pallavi) ಅವರ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅವರ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಮಿನಿಮಮ್​​ ಬಿಸ್ನೆಸ್​ ಮಾಡುತ್ತವೆ ಎಂಬ ಭರವಸೆ ನಿರ್ಮಾಪಕರಲ್ಲಿ ಇತ್ತು. ಆದರೆ ‘ವಿರಾಟ ಪರ್ವಂ’  (Virata Parvam) ಸಿನಿಮಾ ವಿಚಾರದಲ್ಲಿ ಅದು ಸುಳ್ಳಾಯಿತು. ಹಲವು ಕಾರಣಗಳಿಂದಾಗಿ ಈ ಸಿನಿಮಾ ಗೆಲ್ಲಲೇ ಇಲ್ಲ. ‘ವಿರಾಟ ಪರ್ವಂ’ ಬಿಡುಗಡೆಯ ಸಂದರ್ಭದಲ್ಲಿ ಸಾಯಿ ಪಲ್ಲವಿ ಅವರ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದ್ದು ಕೂಡ ಈ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಹೀರೋ ಆಗಿ ನಟಿಸಿದ್ದಾರೆ. ಥಿಯೇಟರ್​ನಲ್ಲಿ ಸೋತ ‘ವಿರಾಟ ಪರ್ವಂ’ ಸಿನಿಮಾಗೆ ಈಗ ಉಳಿದಿರುವುದು ಒಟಿಟಿ (OTT) ಆಯ್ಕೆ ಮಾತ್ರ. ಜುಲೈ 1ರಿಂದ ನೆಟ್​ಫಿಕ್ಸ್​ ಮೂಲಕ ಈ ಸಿನಿಮಾದ ಸ್ಟ್ರೀಮಿಂಗ್ ಆರಂಭ​ ಆಗಲಿದೆ.

ಜೂನ್ 17ರಂದು ‘ವಿರಾಟ ಪರ್ವಂ’ ಚಿತ್ರ ಬಿಡುಗಡೆ ಆಯಿತು. ನಕ್ಸಲೈಟ್​ ಪಾತ್ರದಲ್ಲಿ ರಾಣಾ ದಗ್ಗುಬಾಟಿ ಕಾಣಿಸಿಕೊಂಡರೆ, ಅವರ ಪ್ರೇಯಸಿಯಾಗಿ ಸಾಯಿ ಪಲ್ಲವಿ ನಟಿಸಿದರು. ಟ್ರೇಲರ್​ನಲ್ಲಿ ಸಾಯಿ ಪಲ್ಲವಿ ಪಾತ್ರವೇ ಹೆಚ್ಚು ಹೈಲೈಟ್​ ಆಗಿತ್ತು. ನಿರೀಕ್ಷೆಯಂತೆ ಸಿನಿಮಾದಲ್ಲಿಯೂ ಅವರು ಆವರಿಸಿಕೊಂಡಿದ್ದರು. ಆದರೂ ಕೂಡ ಅವರ ಅಭಿಮಾನಿಗಳಿಗೆ ಈ ಸಿನಿಮಾ ಇಷ್ಟ ಆಗಲಿಲ್ಲ.

1990ರ ಸಮಯದಲ್ಲಿ ತೆಲಂಗಾಣದಲ್ಲಿ ನಡೆದ ಕೆಲವು ಸತ್ಯ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಮೂಡಿಬಂದಿದೆ. ವೇಣು ಉಡುಗುಲ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಣಾ ದಗ್ಗುಬಾಟಿ ಅವರ ಹೋಮ್​ ಬ್ಯಾನರ್​ ಮೂಲಕವೇ ಈ ಸಿನಿಮಾ ನಿರ್ಮಾಣ ಆಗಿದೆ. ಪ್ರಿಯಾಮಣಿ, ನಂದಿತಾ ದಾಸ್​, ಈಶ್ವರಿ ರಾವ್​ ಮುಂತಾದ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಮಂದಿರದಲ್ಲಿ ಸೋತ ಈ ಚಿತ್ರವನ್ನು ಒಟಿಟಿಯಲ್ಲಾದರೂ ಪ್ರೇಕ್ಷಕರು ಕೈ ಹಿಡಿಯುತ್ತಾರಾ ಎಂಬ ಕೌತುಕ ಈಗ ಮೂಡಿದೆ.

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಒಂದು ಸಿನಿಮಾ ಸೋತರೇನಂತೆ? ಸಾಯಿ ಪಲ್ಲವಿ ಅವರ ಉತ್ಸಾಹ ಕಡಿಮೆ ಆಗಿಲ್ಲ. ಈಗಾಗಲೇ ಅವರು ಹೊಸ ಚಿತ್ರದತ್ತ ತಮ್ಮ ಗಮನ ಹರಿಸಿದ್ದಾರೆ. ಅವರ ಮುಂದಿನ ಸಿನಿಮಾ ‘ಗಾರ್ಗಿ’ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಈ ಸಿನಿಮಾವನ್ನು ರಿಲೀಸ್​ ಮಾಡಲು ಕಾಲಿವುಡ್​ನ ಖ್ಯಾತ ನಟ ಸೂರ್ಯ ಹಾಗೂ ಅವರ ಪತ್ನಿ ಜ್ಯೋತಿಕಾ ಮುಂದೆ ಬಂದಿದ್ದಾರೆ. ಇದರಿಂದ ಸಾಯಿ ಪಲ್ಲವಿ ಅವರ ಬಲ ಹೆಚ್ಚಿದಂತಾಗಿದೆ. ಕನ್ನಡದಲ್ಲೂ ‘ಗಾರ್ಗಿ’ ಚಿತ್ರ ಮೂಡಿಬರುತ್ತಿದೆ.

ಇದನ್ನೂ ಓದಿ: Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?

Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?

Published On - 8:31 am, Thu, 30 June 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ