Sai Pallavi: ‘ಗಾರ್ಗಿ’ ಒಟಿಟಿ ರಿಲೀಸ್​ ಬಗ್ಗೆ ಕೇಳಿಬಂತು ಸುದ್ದಿ; ಹೆಚ್ಚಿತು ಸಾಯಿ ಪಲ್ಲವಿ ಅಭಿಮಾನಿಗಳ ಕಾತರ

Gargi Movie OTT: ಸಾಯಿ ಪಲ್ಲವಿ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಸೋತರೂ ಒಟಿಟಿಯಲ್ಲಿ ಮಿಂಚುತ್ತವೆ ಎಂಬುದು ಈಗಾಗಲೇ ಸಾಬೀತಾಗಿದೆ. ‘ಗಾರ್ಗಿ’ ಚಿತ್ರದ ಒಟಿಟಿ ರಿಲೀಸ್​ ಬಗ್ಗೆ ಸುದ್ದಿ ಕೇಳಿಬಂದಿದೆ.

Sai Pallavi: ‘ಗಾರ್ಗಿ’ ಒಟಿಟಿ ರಿಲೀಸ್​ ಬಗ್ಗೆ ಕೇಳಿಬಂತು ಸುದ್ದಿ; ಹೆಚ್ಚಿತು ಸಾಯಿ ಪಲ್ಲವಿ ಅಭಿಮಾನಿಗಳ ಕಾತರ
ಸಾಯಿ ಪಲ್ಲವಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 28, 2022 | 7:15 AM

ನಟಿ ಸಾಯಿ ಪಲ್ಲವಿ (Sai Pallavi) ಅವರು ಸಿನಿಮಾ ವಿಚಾರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಬರೀ ಹೀರೋ ಜತೆ ಮರ ಸುತ್ತುವ ಪಾತ್ರವನ್ನು ಅವರು ಆಯ್ಕೆ ಮಾಡಿಕೊಳ್ಳುವುದಿಲ್ಲ.  ತಮ್ಮ ಪಾತ್ರಕ್ಕೆ ಮಹತ್ವ ಇದ್ದರೆ ಮಾತ್ರ ಅವರು ಸಿನಿಮಾಗೆ ಸಹಿ ಮಾಡುತ್ತಾರೆ. ಆದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಸಾಯಿ ಪಲ್ಲವಿ ಅವರಿಗೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಗುತ್ತಿಲ್ಲ ಎಂಬುದು ಬೇಸರದ ಸಂಗತಿ. ಹಾಗಂತ ಅವರು ಅದರಿಂದ ನಿರಾಶರಾಗಿಲ್ಲ. ಸಾಯಿ ಪಲ್ಲವಿ ನಟನೆಯ ಚಿತ್ರಗಳು ಥಿಯೇಟರ್​ನಲ್ಲಿ ಗೆಲ್ಲದಿದ್ದರೂ ಒಟಿಟಿಯಲ್ಲಿ (OTT platform) ಧೂಳೆಬ್ಬಿಸುತ್ತವೆ ಎಂಬುದು ಸಾಬೀತಾಗಿದೆ. ‘ವಿರಾಟ ಪರ್ವಂ’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್​ ಆಗಿತ್ತು. ಅದರ ಬೆನ್ನಲೇ ‘ಗಾರ್ಗಿ’ (Gargi Movie) ಚಿತ್ರ ಕೂಡ ಒಟಿಟಿ ಹಾದಿ ಹಿಡಿಯುತ್ತಿದೆ. ಮೂಲಗಳ ಪ್ರಕಾರ ಆಗಸ್ಟ್​ 2ನೇ ವಾರದಲ್ಲಿ ‘ಸೋನಿ ಲಿವ್​’ ಮೂಲಕ ಈ ಸಿನಿಮಾ ಬಿತ್ತರ ಆಗಲಿದೆ.

‘ಗಾರ್ಗಿ’ ಸಿನಿಮಾ ಮೇಲೆ ಸಾಯಿ ಪಲ್ಲವಿ ಅವರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದರು. ಸದ್ದು ಗದ್ದಲ ಇಲ್ಲದೇ ಶೂಟಿಂಗ್​ ಮುಗಿಸಿದ ನಂತರವೇ ಅವರು ಈ ಚಿತ್ರದ ಬಗ್ಗೆ ಅನೌನ್ಸ್​ ಮಾಡಿದ್ದರು. ತಂದೆ-ಮಗಳ ನಡುವಿನ ಬಾಂಧವ್ಯದ ಕಥೆ ಇರುವ ಈ ಸಿನಿಮಾ ಜುಲೈ 15ರಂದು ತೆರೆಕಂಡಿತು. ಚಿತ್ರಕ್ಕೆ ಉತ್ತಮ ವಿಮರ್ಶೆ ವ್ಯಕ್ತವಾಗಿದ್ದರೂ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಮಾಯಿ ಆಗಲಿಲ್ಲ.

ಮೂಲಗಳ ಪ್ರಕಾರ ‘ಗಾರ್ಗಿ’ ಚಿತ್ರದ ಒಟಿಟಿ ಹಕ್ಕುಗಳನ್ನು ‘ಸೋನಿ ಲಿವ್​’ ಖರೀದಿಸಿದೆ. ಆಗಸ್ಟ್​ ಎರಡನೇ ವಾರದಲ್ಲಿ ಇದರ ಸ್ಟ್ರೀಮಿಂಗ್​ ಆರಂಭಿಸಲಾಗುವುದು ಎಂದು ಕೆಲವೆಡೆ ವರದಿ ಆಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ. ಚಿತ್ರಮಂದಿರದಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡಿದ್ದವರು ಈಗ ಮನೆಯಲ್ಲೇ ಕುಳಿತು ವೀಕ್ಷಿಸಲು ಕಾದಿದ್ದಾರೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಒಟಿಟಿಯಲ್ಲಿ ಮಿಂಚಿದ್ದ ‘ವಿರಾಟ ಪರ್ವಂ’:

ರಾಣಾ ದಗ್ಗುಬಾಟಿ ಜೊತೆ ಸಾಯಿ ಪಲ್ಲವಿ ನಟಿಸಿದ್ದ ‘ವಿರಾಟ ಪರ್ವಂ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೋಲು ಅನುಭವಿಸಿತ್ತು. ಆದರೆ ನೆಟ್​ಫ್ಲಿಕ್ಸ್​​ನಲ್ಲಿ ಪ್ರಸಾರವಾದಾಗ ಅತ್ಯುತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ನಂಬರ್​ ಒನ್​ ಟ್ರೆಂಡಿಂಗ್​ ಆಗುವ ಮಟ್ಟಕ್ಕೆ ಜನರು ಆ ಚಿತ್ರವನ್ನು ಮುಗಿಬಿದ್ದು ನೋಡಿದರು. ‘ಗಾರ್ಗಿ’ ಚಿತ್ರ ಕೂಡ ಅದೇ ರೀತಿ ಧೂಳೆಬ್ಬಿಸುವ ನಿರೀಕ್ಷೆ ಇದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ