AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಫಿ ವಿತ್ ಕರಣ್’ನಲ್ಲಿ ಸಲ್ಮಾನ್ ಖಾನ್, ಕೊನೆ ಸೀಸನ್​​ಗೆ ಮೊದಲ ಅತಿಥಿ

ಬಾಲಿವುಡ್​​ನ ಖ್ಯಾತ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಹಲವು ವರ್ಷಗಳ ಹಿಂದೆ ಪ್ರಾರಂಭಿಸಿದ್ದ ಈ ಟಾಕ್ ಶೋನ ಎಂಟು ಸೀಸನ್ ಈ ವರೆಗೆ ಪ್ರಸಾರ ಆಗಿದ್ದು, ಇದೀಗ ಒಂಬತ್ತನೇ ಸೀಸನ್ ಪ್ರಸಾರ ಆಗಲಿದೆ. ಇದು ‘ಕಾಫಿ ವಿತ್ ಕರಣ್​’ನ ಕೊನೆಯ ಸೀಸನ್ ಆಗಿರಲಿದೆ. ಸೀಸನ್​​ನ ಪ್ರೋಮೊ ಈ ಹಿಂದೆ ರಿಲೀಸ್ ಆಗಿತ್ತು. ಆದರೆ ಅತಿಥಿಗಳು ಯಾರೆಂದು ರಿವೀಲ್ ಮಾಡಿರಲಿಲ್ಲ. ಆದರೆ ಈಗ ಸಲ್ಮಾನ್ ಖಾನ್ ಅವರ ಜೊತೆಗೆ ಕರಣ್ ಜೋಹರ್ ಸಹ ಇರುವ ಪ್ರೋಮೊ ಅನ್ನು ರಿಲೀಸ್ ಮಾಡಲಾಗಿದೆ.

‘ಕಾಫಿ ವಿತ್ ಕರಣ್’ನಲ್ಲಿ ಸಲ್ಮಾನ್ ಖಾನ್, ಕೊನೆ ಸೀಸನ್​​ಗೆ ಮೊದಲ ಅತಿಥಿ
Salman Khan Koffee With Karan
ಮಂಜುನಾಥ ಸಿ.
|

Updated on: Oct 13, 2026 | 2:13 PM

Share

ಮುಖ್ಯಾಂಶಗಳು

  • ಕಾಫಿ ವಿತ್ ಕರಣ್ ಕೊನೆಯ ಸೀಸನ್
  • ಕಾಫಿ ವಿತ್ ಕರಣ್ ಶೋಗೆ ಸಲ್ಮಾನ್ ಖಾನ್ ಅತಿಥಿ
  • ಕಾಫಿ ವಿತ್ ಕರಣ್ ಪ್ರೋಮೊನಲ್ಲಿ ಸಲ್ಮಾನ್ ಖಾನ್

ಬಾಲಿವುಡ್‌ನ ಅತ್ಯಂತ ಜನಪ್ರಿಯ ಹಾಗೂ ವಿವಾದಾತ್ಮಕ ಸೆಲೆಬ್ರಿಟಿ ಟಾಕ್ ಶೋ ‘ಕಾಫಿ ವಿತ್ ಕರಣ್’ನ ಕೊನೆಯ ಸೀಸನ್ ಪ್ರಸಾರಕ್ಕೆ ಸಜ್ಜಾಗಿದೆ. ಬಾಲಿವುಡ್​​ನ ಖ್ಯಾತ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಹಲವು ವರ್ಷಗಳ ಹಿಂದೆ ಪ್ರಾರಂಭಿಸಿದ್ದ ಈ ಟಾಕ್ ಶೋನ ಎಂಟು ಸೀಸನ್ ಈ ವರೆಗೆ ಪ್ರಸಾರ ಆಗಿದ್ದು, ಇದೀಗ ಒಂಬತ್ತನೇ ಸೀಸನ್ ಪ್ರಸಾರ ಆಗಲಿದೆ. ಇದು ‘ಕಾಫಿ ವಿತ್ ಕರಣ್​’ನ ಕೊನೆಯ ಸೀಸನ್ ಆಗಿರಲಿದೆ. ಸೀಸನ್​​ನ ಪ್ರೋಮೊ ಈ ಹಿಂದೆ ರಿಲೀಸ್ ಆಗಿತ್ತು. ಆದರೆ ಅತಿಥಿಗಳು ಯಾರೆಂದು ರಿವೀಲ್ ಮಾಡಿರಲಿಲ್ಲ. ಆದರೆ ಈಗ ಸಲ್ಮಾನ್ ಖಾನ್ ಅವರ ಜೊತೆಗೆ ಕರಣ್ ಜೋಹರ್ ಸಹ ಇರುವ ಪ್ರೋಮೊ ಅನ್ನು ರಿಲೀಸ್ ಮಾಡಲಾಗಿದೆ.

ಸಲ್ಮಾನ್ ಖಾನ್, ‘ಕಾಫಿ ವಿತ್ ಕರಣ್’ ಪ್ರೋಮೊನಲ್ಲಿ ಕರಣ್ ಜೋಹರ್ ಜೊತೆಗೆ ಕಾಣಿಸಿಕೊಂಡಿದ್ದು, ‘ಈ ಶೋನಲ್ಲಿ ನಾನು ಬರುತ್ತಿದ್ದೇನೆ, ಎಲ್ಲರೂ ನೋಡಿ, ಇದು ಕೊನೆಯ ಸೀಸನ್, ಆ ನಂತರ ಈ ಶೋ ಎಲ್ಲಿ ಹೋಗುತ್ತದೆಯೋ ಗೊತ್ತಿಲ್ಲ’ ಎಂದಿದ್ದಾರೆ. ಸಲ್ಮಾನ್ ಖಾನ್ ಜೊತೆಗೆ ಕರಣ್ ಜೋಹರ್ ಸಹ ಇದ್ದು, ಅವರೂ ಸಹ ‘ಹೌದು, ಇದು ಕೊನೆಯ ಸೀಸನ್, ಆಮೇಲೆ ಏನಾಗುತ್ತದೆಯೋ ಗೊತ್ತಿಲ್ಲ’ ಎಂದಿದ್ದಾರೆ. ಅದಕ್ಕೆ ಸಲ್ಮಾನ್ ಖಾನ್, ‘ಆಲ್​​ಡೆರಿ ಹೋಗಿದೆ ಬಿಡಿ’ ಎಂದು ತಮಾಷೆ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರು ಕಪ್ಪು ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟು ಧರಿಸಿ, ಬಲು ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ.

‘ಜಿಯೋ ಹಾಟ್‌ಸ್ಟಾರ್’ ಒಟಿಟಿ ವೇದಿಕೆಯಲ್ಲಿ ಅಕ್ಟೋಬರ್ 14ರಿಂದ ಈ ಹೊಸ ಹಾಗೂ ಅಂತಿಮ ಸೀಸನ್ ಪ್ರಸಾರವಾಗಲಿದೆ. ಕರಣ್ ಜೋಹರ್ ಅವರ ಈ ಜನಪ್ರಿಯ ಕಾರ್ಯಕ್ರಮದ ಕೊನೆಯ ಸೀಸನ್ ಆಗಿರುವುದರಿಂದ, ಬಾಲಿವುಡ್‌ನ ಹಲವು ದಿಗ್ಗಜ ಮತ್ತು ಸ್ಟಾರ್ ನಟ-ನಟಿಯರು ಈ ಸೀಸನ್‌ನಲ್ಲಿ ಅತಿಥಿಗಳಾಗಿ ಭಾಗವಹಿಸಿ ತಮ್ಮ ವೈಯಕ್ತಿಕ ಹಾಗೂ ವೃತ್ತಿಜೀವನದ ರಹಸ್ಯಗಳನ್ನು ಹಂಚಿಕೊಳ್ಳಲಿದ್ದಾರೆ. ಕೊನೆಯ ಸೀಸನ್ನಿನ ಮೊದಲ ಎಪಿಸೋಡಿನಲ್ಲಿ ಸಲ್ಮಾನ್ ಖಾನ್ ಅವರು ಅತಿಥಿ ಆಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಬಾಲಿವುಡ್‌ನಲ್ಲಿ ಹೊಸ ಕಾಂಬಿನೇಷನ್ ಧಮಾಕ; ಮೊದಲ ಬಾರಿಗೆ ಜೊತೆಯಾಗಲಿದ್ದಾರೆ ಪ್ರಿಯಾಂಕಾ-ಸೈಫ್

ಸಲ್ಮಾನ್ ಖಾನ್ ಜೊತೆಗೆ ಬಾಲಿವುಡ್‌ನ ಇತ್ತೀಚಿನ ಯಶಸ್ವಿ ತಾರೆಯರು ಮತ್ತು ಸಿನಿತಾರೆಯರ ದಂಡು ಈ ಕೊನೆಯ ಸೀಸನ್‌ನಲ್ಲಿ ವಿಶೇಷ ಅತಿಥಿಗಳಾಗಿ (Guests) ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜಂಟಿಯಾಗಿ ಈ ಶೋನಲ್ಲಿ ಈಗಾಗಲೇ ಭಾಗಿ ಆಗಿದ್ದಾರೆ. ಆಲಿಯಾ ಭಟ್, ಶರ್ವರಿ ವಾಘ್, ಜಾನ್ಹವಿ ಕಪೂರ, ಅನನ್ಯಾ ಪಾಂಡೆ, ಆಲಿಯಾ ಎಫ್, ಶಾಹಿದ್ ಕಪೂರ್, ಸಂದೀಪ್ ರೆಡ್ಡಿ ವಂಗಾ ಇನ್ನೂ ಹಲವರು ಈ ಸೀಸನ್ನಿನಲ್ಲಿ ಅತಿಥಿಗಳಾಗಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ