ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡಿದ್ದರು. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ. ಆದರೆ, ಯಾವುದೇ ಕಾರಣಕ್ಕೂ ಆ ವಿವಾದದ ಬಗ್ಗೆ ಮಾತನಾಡದಂತೆ ಅಮೇಜಾನ್​ ಪ್ರೈಮ್​ ಸಮಂತಾಗೆ ಎಚ್ಚರಿಕೆ ನೀಡಿತ್ತು

ಅಭಿಮಾನಿಗಳ ಬಳಿ ಬಹಿರಂಗ ಕ್ಷಮೆ ಕೇಳಿ, ನಟನೆಯಿಂದ ಬ್ರೇಕ್​ ಪಡೆದ ಸಮಂತಾ ಅಕ್ಕಿನೇನಿ 
ಸಮಂತಾ ಅಕ್ಕಿನೇನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 26, 2021 | 5:14 PM

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸೀರಿಸ್ ರಿಲೀಸ್​ ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದರ ಜತೆಗೆ ವಿವಾದ ಕೂಡ ಈ ವೆಬ್​ ಸೀರಿಸ್​ಗೆ ಸುತ್ತಿಕೊಂಡಿತ್ತು. ಶ್ರೀಲಂಕಾ ತಮಿಳಿರ ಪಾತ್ರ ಮಾಡಿದ್ದ ಸಮಂತಾ ವಿರುದ್ಧ ಜನರು ಸಿಟ್ಟಿಗೆದ್ದಿದ್ದರು. ಅಲ್ಲದೆ, ತಮಿಳರನ್ನು ಉಗ್ರಗಾಮಿಗಳು ಎಂದು ಬಣ್ಣಿಸಲಾಗಿದೆ ಎನ್ನುವ ಆರೋಪ ಹೊರಿಸಲಾಗಿತ್ತು. ಈ ಎಲ್ಲಾ ವಿಚಾರಗಳಲ್ಲಿ ಸಮಂತಾ ಅಕ್ಕಿನೇನಿ ಈಗ ಮೌನ ಮುರಿದಿದ್ದಾರೆ.

ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್​ ಸೀರಿಸ್​ ಕುರಿತಾಗಿ ಸಂದರ್ಶನ ನೀಡಿದ್ದರು. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ. ಆದರೆ, ಯಾವುದೇ ಕಾರಣಕ್ಕೂ ಆ ವಿವಾದದ ಬಗ್ಗೆ ಮಾತನಾಡದಂತೆ ಅಮೇಜಾನ್​ ಪ್ರೈಮ್​ ಸಮಂತಾಗೆ ಎಚ್ಚರಿಕೆ ನೀಡಿತ್ತು. ಇದನ್ನು ಸಮಂತಾ ಪಾಲಿಸಿದ್ದರು. ಈಗ ಸುಮಾರು ಎರಡು ತಿಂಗಳ ನಂತರದಲ್ಲಿ ಆ ಬಗ್ಗೆ ಅವರು ಮಾತನಾಡಿದ್ದಾರೆ.

‘ವೆಬ್​ ಸೀರಿಸ್​ಗೆ ಸಂಬಂಧಿಸಿದಂತೆ ಕೆಲವರು ಆ ಅಭಿಪ್ರಾಯ ಹೊಂದಿದ್ದರೆ ನಾನು ಅವರ ಬಳಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ ನೋಯಿಸುವುದು ನನ್ನ ಉದ್ದೇಶ ಆಗಿರಲಿಲ್ಲ’ ಎಂದು ಸಮಂತಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ನಿಜವಾಗಿಯೂ ಬೇರೆಯವರಿಗೆ ಹರ್ಟ್​ ಮಾಡಬೇಕು ಎಂಬುದು ನನ್ನ ಉದ್ದೇಶ ಆಗಿರಲಿಲ್ಲ. ನಾನು ಹಾಗೆ ಮಾಡಿದ್ದರೆ ಅವರ ಬಳಿ ಕ್ಷಮೆ ಕೇಳುತ್ತಿದ್ದೇನೆ. ನಾನು ಮುಂದಿನ ಕೆಲ ತಿಂಗಳು ಸಿನಿಮಾ ಕೆಲಸದಿಂದ ಬ್ರೇಕ್​ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಅವರು.  ಇದು ಸಮಂತಾ ಅಭಿಮಾನಿಗಳಿಗೆ ಬೇಸರ ತರಿಸಿದೆ.

‘ಪ್ರಶಸ್ತಿ ಸಿಗುತ್ತದೆ ಎಂದು ಭಾವಿಸಿ ನಾನು ಯಾವ ಪ್ರಾಜೆಕ್ಟ್​ಗೂ ಸಹಿ ಹಾಕುವುದಿಲ್ಲ. ನಾನು ನಂಬುವ ಪಾತ್ರಗಳಿಗೆ ನಾನು ಸಹಿ ಹಾಕುತ್ತೇನೆ. ನಾನು ನಂಬುವ ಪಾತ್ರಗಳು ನನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಪ್ರಶಸ್ತಿಗಳು ಯಾವಾಗಲೂ ಸ್ವಾಗತಾರ್ಹ. ಏಕೆಂದರೆ ಅವುಗಳು ನನಗೆ ಉತ್ತಮ ಕೆಲಸ ಮಾಡಲು ಸ್ಫೂರ್ತಿ ನೀಡಿವೆ. ಆ ರೀತಿಯಲ್ಲಿ, ನಾನು ಪ್ರಶಸ್ತಿಗಳಿಗೆ ಕೃತಜ್ಞನಾಗಿದ್ದೇನೆ’ ಎಂದರು ಅವರು. ‘ದಿ ಫ್ಯಾಮಿಲಿ ಮ್ಯಾನ್​ 2’ ನಟನೆಗೆ ಸಮಂತಾಗೆ ಇತ್ತೀಚೆಗೆ ಪ್ರಶಸ್ತಿ ಬಂದಿತ್ತು.

ಸಮಂತಾ ಸದ್ಯ, ‘ಶಾಕುಂತಲಮ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅಲ್ಲು ಅರ್ಜುನ್​ ಮಗಳು ಅರ್ಹಾ ಕೂಡ ನಟಿಸುತ್ತಿದ್ದಾರೆ. ಇದಲ್ಲದೆ, ತಮಿಳು ಸಿನಿಮಾದಲ್ಲೂ ಸಮಂತಾ ಆ್ಯಕ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಸ್​ನ ಮೆಟ್ಟಿಲ ಮೇಲೆ ನಿಂತು ಪ್ರಯಾಣ ಮಾಡಿದ ನಯನತಾರಾ-ಸಮಂತಾ; ವಿಡಿಯೋ ವೈರಲ್​

Published On - 4:14 pm, Thu, 26 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ