Citadel: ‘ಸಿಟಾಡೆಲ್​’ ಪ್ರೀಮಿಯರ್​ ಶೋನಲ್ಲಿ ಮಿಂಚಿದ ಸಮಂತಾ ರುತ್​ ಪ್ರಭು, ವರುಣ್​ ಧವನ್​

Samantha Ruth Prabhu: ‘ಸಿಟಾಡೆಲ್​’ ವೆಬ್​ ಸೀರಿಸ್​ನ ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಹಾಗೂ ವರುಣ್​ ಧವನ್​ ನಟಿಸಿದ್ದಾರೆ. ಲಂಡನ್​ನಲ್ಲಿ ನಡೆದ ಪ್ರೀಮಿಯರ್​ ಶೋಗೆ ಅವರನ್ನು ಆಹ್ವಾನಿಸಲಾಗಿತ್ತು.

Citadel: ‘ಸಿಟಾಡೆಲ್​’ ಪ್ರೀಮಿಯರ್​ ಶೋನಲ್ಲಿ ಮಿಂಚಿದ ಸಮಂತಾ ರುತ್​ ಪ್ರಭು, ವರುಣ್​ ಧವನ್​
ವರುಣ್ ಧವನ್, ಸಮಂತಾ
Follow us
ಮದನ್​ ಕುಮಾರ್​
|

Updated on: Apr 19, 2023 | 12:12 PM

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅಭಿನಯದ ‘ಶಾಕುಂತಲಂ’ ಸಿನಿಮಾ ಹೀನಾಯವಾಗಿ ಸೋತಿದೆ. ಹಾಗಿದ್ದರೂ ಅವರ ಹವಾ ಕಡಿಮೆ ಆಗಿಲ್ಲ. ‘ಶಾಕುಂತಲಂ’ ಚಿತ್ರದ ಸೋಲನ್ನು ಮರೆತು ಅವರು ಲಂಡನ್​ಗೆ ತೆರಳಿದ್ದಾರೆ. ಅಲ್ಲಿ ಹಾಲಿವುಡ್​ ಸೆಲೆಬ್ರಿಟಿಗಳ ಜೊತೆ ಬೆರೆತು ಬಿಂದಾಸ್​ ಆಗಿ ಕಾಲ ಕಳೆದಿದ್ದಾರೆ. ಅವರಿಗೆ ಬಾಲಿವುಡ್​ ನಟ ವರುಣ್​ ಧವನ್​ (Varun Dhawan) ಕೂಡ ಸಾಥ್​ ನೀಡಿದ್ದಾರೆ. ಅಷ್ಟಕ್ಕೂ ಸಮಂತಾ ಅವರು ಏಕಾಏಕಿ ಲಂಡನ್​ಗೆ ಹಾರಿದ್ದು ಯಾಕೆ? ‘ಸಿಟಾಡೆಲ್​’ (Citadel) ವೆಬ್​ ಸರಣಿಯ ಪ್ರೀಮಿಯರ್​ ಶೋ ಸಲುವಾಗಿ. ಹೌದು, ಏಪ್ರಿಲ್​ 18ರ ರಾತ್ರಿ ಪ್ರಿಮಿಯರ್​ ಮಾಡಲಾಗಿದೆ. ಪ್ರಿಯಾಂಕಾ ಚೋಪ್ರಾ, ರಾಜ್ ನಿಧಿಮೋರು, ಕೃಷ್ಣ ಡಿ.ಕೆ. ಮುಂತಾದವರು ಕೂಡ ಇದರಲ್ಲಿ ಭಾಗಿ ಆಗಿದ್ದರು. ‘ಸಿಟಾಡೆಲ್​’ ಪ್ರೀಮಿಯರ್​ ಶೋ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

ಇಂಗ್ಲಿಷ್​ನ ‘ಸಿಟಾಡೆಲ್​’ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ರಿಚರ್ಡ್​ ಮ್ಯಾಡನ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದರ ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಹಾಗೂ ವರುಣ್​ ಧವನ್​ ನಟಿಸಿದ್ದಾರೆ. ಹಾಗಾಗಿ ಲಂಡನ್​ನಲ್ಲಿ ನಡೆದ ‘ಸಿಟಾಡೆಲ್​’ ಪ್ರೀಮಿಯರ್​ ಶೋಗೆ ಅವರನ್ನು ಆಹ್ವಾನಿಸಲಾಗಿತ್ತು.

ಇದನ್ನೂ ಓದಿ
Image
Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ
Image
Samantha: ಶಾಕುಂತಲಂ ಸಿನಿಮಾ ಚಿತ್ರೀಕರಣದ ಐದು ಕೆಟ್ಟ ಅನುಭವಗಳ ನೆನೆದ ಸಮಂತಾ
Image
ಮಾಜಿ ಗಂಡನ ಕುಟುಂಬದ ಮೇಲೆ ಸಮಂತಾಗೆ ಇನ್ನೂ ಕಡಿಮೆ ಆಗಿಲ್ಲ ಪ್ರೀತಿ; ಇಲ್ಲಿದೆ ಹೊಸ ಸಾಕ್ಷಿ
Image
Samantha: ‘ನಾನು ಇದನ್ನು ಹೇಳಲೇ ಇಲ್ಲ’: ಮಾಜಿ ಗಂಡನ ವಿಷಯಕ್ಕೆ ಸ್ಪಷ್ಟನೆ ನೀಡಿದ ಸಮಂತಾ
View this post on Instagram

A post shared by VarunDhawan (@varundvn)

‘ಸಿಟಾಡೆಲ್​’ ವೆಬ್​ ಸೀರಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಬ್ಯಾಕ್​ಲೆಸ್​ ಆಗಿ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹಾಗಾದರೆ ಭಾರತೀಯ ವರ್ಷನ್​ನಲ್ಲಿ ಸಮಂತಾ ಕೂಡ ಇದೇ ರೀತಿ ನಟಿಸುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ಗ್ಲಾಮರಸ್​ ಪಾತ್ರಗಳನ್ನು ಮಾಡುವಲ್ಲಿ ಸಮಂತಾ ರುತ್​ ಪ್ರಭು ಅವರು ಹಿಂದೇಟು ಹಾಕುವವರಲ್ಲ. ‘ಪುಷ್ಪ’ ಸಿನಿಮಾದ ‘ಉ ಅಂಟಾವಾ ಮಾವ..’ ಹಾಡಿನಲ್ಲಿ ಅವರು ಸಖತ್​ ಹಾಟ್​ ಆಗಿ ನಟಿಸಿದ್ದರು. ಅಲ್ಲದೇ, ‘ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ನಲ್ಲೂ ಅವರ ಪಾತ್ರ ಬೋಲ್ಡ್​ ಆಗಿತ್ತು. ‘ಸಿಟಾಡೆಲ್​’ನಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಶಾಕುಂತಲಂ’ ಸಿನಿಮಾ ಸೋತ ಬಳಿಕ ಸಮಂತಾಗೆ ನೆನಪಾಯ್ತು ಭಗವದ್ಗೀತೆಯ ಶ್ಲೋಕ

ಅನಾರೋಗ್ಯದ ಕಾರಣದಿಂದ ಸಮಂತಾ ಅವರ ವೃತ್ತಿಜೀವನ ಕೊಂಚ ಕುಂಠಿತ ಆಗಿತ್ತು. ಆದರೆ ಈಗ ಅವರು ಸಂಪೂರ್ಣ ಚೇತರಿಸಿಕೊಂಡು ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ವಿಜಯ್​ ದೇವರಕೊಂಡ ಜೊತೆಗಿನ ‘ಖುಷಿ’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ‘ಸಿಟಾಡೆಲ್​’ ಮೇಲೆ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Samantha: ‘ಶಾಕುಂತಲಂ’ ಚಿತ್ರಕ್ಕೆ ಹೀನಾಯ ಸೋಲು; ಎರಡಂಕಿ ಮುಟ್ಟಲು ವಿಫಲವಾಯ್ತು ಸಮಂತಾ ಸಿನಿಮಾ

‘ಸಿಟಾಡೆಲ್​’ ವೆಬ್​ ಸಿರೀಸ್​ನಲ್ಲಿ ಸಮಂತಾ ಅವರು ಸಿಕ್ಕಾಪಟ್ಟೆ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಇದರ ಶೂಟಿಂಗ್​ ವೇಳೆ ಸಮಂತಾ ಕೈಗೆ ಗಾಯಗಳಾಗಿತ್ತು. ಆ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಮೇಜಾನ್​ ಪ್ರೈಮ್ ವಿಡಿಯೋ ಮೂಲಕ ಈ ಸೀರಿಸ್ ರಿಲೀಸ್ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ