AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜತೆ ಸಮಂತಾ ಮತ್ತೊಂದು ವೆಬ್​ ಸೀರಿಸ್​; ಆ್ಯಕ್ಷನ್​ನಲ್ಲಿ ಮಿಂಚಲಿದ್ದಾರೆ ಸ್ಯಾಮ್

‘ಪುಷ್ಪ’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಸಮಂತಾ ಸೊಂಟ ಬಳುಕಿಸಿದ ಪರಿ ಎಲ್ಲರಿಗೂ ಇಷ್ಟವಾಗಿದೆ. ಈಗ ಅವರು ಮತ್ತೊಂದು ವೆಬ್​ ಸರಣಿಯಲ್ಲಿ ನಟಿಸುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ

‘ಫ್ಯಾಮಿಲಿ ಮ್ಯಾನ್​’ ನಿರ್ದೇಶಕರ ಜತೆ ಸಮಂತಾ ಮತ್ತೊಂದು ವೆಬ್​ ಸೀರಿಸ್​; ಆ್ಯಕ್ಷನ್​ನಲ್ಲಿ ಮಿಂಚಲಿದ್ದಾರೆ ಸ್ಯಾಮ್
ರಾಜ್​ ಮತ್ತು ಡಿಕೆ ಜತೆ ಸಮಂತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 24, 2021 | 4:17 PM

ನಿರ್ದೇಶಕರಾದ ರಾಜ್​ ಮತ್ತು ಡಿಕೆ (Raj and DK) ‘ದಿ ಫ್ಯಾಮಿಲಿ ಮ್ಯಾನ್​’  (The Family Man) ವೆಬ್​ ಸರಣಿಯನ್ನು ಅದ್ಭುತವಾಗಿ ಕಟ್ಟಿಕೊಡುವ ಮೂಲಕ ಭೇಷ್​ ಎನಿಸಿಕೊಂಡಿದ್ದಾರೆ. ಈ ಸರಣಿಯ ಎರಡನೇ ಭಾಗದಲ್ಲಿ ಸಮಂತಾ (Samantha) ಕೂಡ ನಟಿಸಿದ್ದರು. ರಾಜಿ ಪಾತ್ರದಲ್ಲಿ ಅವರು ಮಿಂಚಿದ್ದರು. ಈ ಸರಣಿಯಿಂದ ಸಾಕಷ್ಟು ಪ್ರಶಸ್ತಿಗಳು ಹಾಗೂ ಆಫರ್​ಗಳು ಅವರನ್ನು ಹುಡುಕಿಕೊಂಡು ಬಂದಿವೆ. ಈಗ ಮತ್ತೊಮ್ಮೆ ರಾಜ್​ ಮತ್ತು ಡಿಕೆ ಜತೆ ಸಮಂತಾ ಕೈ ಜೋಡಿಸಿದ್ದಾರೆ. ಹಿಂದಿಯ ಈ ವೆಬ್​ ಸೀರಿಸ್​ನಲ್ಲಿ ವರುಣ್​ ಧವನ್​ಗೆ ಜತೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.  

ವಿಚ್ಛೇದನದ ನಂತರ ಸಮಂತಾ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ನಾಗ ಚೈತನ್ಯ ಅವರಿಂದ ದೂರವಾದ ನಂತರ ಹಲವು ಭಿನ್ನ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಅವರು ಸೊಂಟ ಬಳುಕಿಸಿದ ಪರಿ ಎಲ್ಲರಿಗೂ ಇಷ್ಟವಾಗಿದೆ. ಈಗ ಅವರು ಮತ್ತೊಂದು ವೆಬ್​ ಸರಣಿಯಲ್ಲಿ ನಟಿಸುತ್ತಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ

ಪ್ರಿಯಾಂಕಾ ಚೋಪ್ರಾ ನಟನೆಯ ಅಮೆರಿಕದ ಸ್ಪೈ ಸರಣಿ ‘ಸಿಟಾಡೆಲ್​’ಅನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ರಾಜ್​ ಮತ್ತು ಡಿಕೆ ಹೊಸ ವೆಬ್​ ಸೀರಿಸ್​ ಮಾಡುತ್ತಿದ್ದಾರೆ. ಈ ಸರಣಿಯಲ್ಲಿ ವರುಣ್​ ಧವನ್​ ಮುಖ್ಯಭೂಮಿಕೆ ನಿರ್ವಹಿಸಿದರೆ, ಸಮಂತಾ ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ವರುಣ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

2022ರಲ್ಲಿ ಈ ಸರಣಿಯ ಕೆಲಸಗಳು ಆರಂಭವಾಗಲಿದೆ. ಇದೊಂದು ಆ್ಯಕ್ಷನ್​ ಸೀರಿಸ್​ ಆಗಿರಲಿದ್ದು, ಸಮಂತಾ, ವರುಣ್​ ಸೇರಿ ಬಹುತೇಕ ಕಲಾವಿದರು ವಿಶೇಷ ತರಬೇತಿ ಪಡೆದುಕೊಳ್ಳಲಿದ್ದಾರೆ. ಅದಾದ ಬಳಿಕವೇ ಶೂಟಿಂಗ್​ ಆರಂಭಗೊಳ್ಳಲಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ಸರಣಿ ಬಿಡುಗಡೆ ಆಗಲಿದೆ. ಸಮಂತಾ ಈ ಸರಣಿಯಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಹುಟ್ಟಿಕೊಂಡಿದೆ.

ಸಮಂತಾ ಕೈಯಲ್ಲಿ ಈಗ ಅನೇಕ ಆಫರ್​ಗಳಿವೆ. ಫಿಲಿಪ್​ ಜಾನ್​ ನಿರ್ದೇಶನದ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಇಂಗ್ಲಿಷ್​ ಸಿನಿಮಾದಲ್ಲಿ ದ್ವಿಲಿಂಗಿ​ ಮಹಿಳೆಯ ಪಾತ್ರ ಮಾಡುತ್ತಿದ್ದಾರೆ. ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಲೈಂಗಿಕ ಆಸಕ್ತಿ ಇರುವ ತಮಿಳು ಮಹಿಳೆಯಾಗಿ ಸಮಂತಾ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಬಗ್ಗೆ ಅವರು ವಿಶೇಷ ಆಸಕ್ತಿ ಇಟ್ಟುಕೊಂಡಿದ್ದಾರೆ. ಇದರ ಜತೆಗೆ ಈಗ ಅವರು ಆ್ಯಕ್ಷನ್​ ಸಿನಿಮಾದಲ್ಲಿ ಮಿಂಚೋಕೆ ರೆಡಿ ಆಗಿದ್ದಾರೆ.

ಇದನ್ನೂ ಓದಿ: Samantha: ಐಟಂ ಸಾಂಗ್​ನಲ್ಲಿ ಸೆಕ್ಸಿಯಾಗಿ ಕಾಣಿಸಿಕೊಳ್ಳೋಕೆ ಎಷ್ಟು ಶ್ರಮ ಪಡಬೇಕು ಗೊತ್ತಾ?; ಸಮಂತಾ ವಿವರಿಸಿದ್ದು ಹೀಗೆ ವಿಚ್ಛೇದನದಿಂದ ಸಮಂತಾ 50 ಕೋಟಿ ರೂ. ದರೋಡೆ ಮಾಡಿದ್ದಾರೆ ಎಂದ ನೆಟ್ಟಿಗ: ನಟಿಯ ಖಡಕ್​ ಉತ್ತರವೇನು?

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ