ಒಟಿಟಿಯಲ್ಲಿ ಪ್ರಸಾರ ಆರಂಭಿಸಿದ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಸಿನಿಮಾ

ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ಅಭಿನಯದ 'ಮ್ಯಾಂಗೋ ಪಚ್ಚ' ಸಿನಿಮಾ ಇಂದಿನಿಂದ (ಸೆಪ್ಟೆಂಬರ್ 25) ಜಿಯೋ ಹಾಟ್‌ಸ್ಟಾರ್ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ವಿವೇಕ ನಿರ್ದೇಶನದ 90ರ ದಶಕದ ಮೈಸೂರು ಮೂಲದ ಈ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ಪ್ರಿಯಾ ಸುದೀಪ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿದ್ದು, ಐದು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

ಒಟಿಟಿಯಲ್ಲಿ ಪ್ರಸಾರ ಆರಂಭಿಸಿದ ಸಂಚಿತ್ ಸಂಜೀವ್ ನಟನೆಯ ಮ್ಯಾಂಗೋ ಪಚ್ಚ ಸಿನಿಮಾ
ಮ್ಯಾಂಗೋ ಪಚ್ಚ
Edited By:

Updated on: Sep 25, 2026 | 7:44 AM

ಮುಖ್ಯಾಂಶಗಳು

  • ಒಟಿಟಿಗೆ ಕಾಲಿಟ್ಟ 'ಮ್ಯಾಂಗೋ ಪಚ್ಚ'
  • ಮನೆಯಲ್ಲೇ ನೋಡಿ ರೋಚಕ ಆಕ್ಷನ್ ಥ್ರಿಲ್ಲರ್
  • 90ರ ದಶಕದ ಮೈಸೂರು ಬ್ಯಾಕ್‌ಡ್ರಾಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಮ್ಯಾಂಗೋ ಪಚ್ಚ‘ ಸಿನಿಮಾ ಇಂದಿನಿಂದ (ಸೆಪ್ಟೆಂಬರ್ 25) ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ನೇರವಾಗಿ ಪ್ರಸಾರವಾಗಲಿದೆ. ಈ ಮೊದಲು ಥಿಯೇಟರ್​​ನಲ್ಲಿ ಪ್ರಸಾರ ಕಂಡಿದ್ದ ಈ ಸಿನಿಮಾನ ಈಗ ಮನೆಯಲ್ಲೇ ವೀಕ್ಷಿಸಬಹುದು. ಈ ಚಿತ್ರಕ್ಕೆ ಸುದೀಪ್ ಪತ್ನಿ ಕೂಡ ಬಂಡವಾಳ ಹಾಕಿದ್ದಾರೆ.

ವಿವೇಕ ನಿರ್ದೇಶನದ ಈ ರೋಚಕ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ಪ್ರಿಯಾ ಸುದೀಪ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿವೆ. 90ರ ದಶಕದ ಮೈಸೂರಿನ ಹಿನ್ನೆಲೆಯಲ್ಲಿ ಸಾಗುವ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸಂಚಿತ್ ಸಂಜೀವ್ ಸಿಡಿ ಮಾರಾಟಗಾರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅನಿರೀಕ್ಷಿತವಾಗಿ ಕ್ರೈಮ್ ಜಗತ್ತಿಗೆ ಪ್ರವೇಶಿಸುವ ರೋಚಕ ತಿರುವುಗಳನ್ನು ಚಿತ್ರಿಸಲಾಗಿದೆ.

ಚಿತ್ರದಲ್ಲಿ ಸಂಚಿತ್ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿರಲಿದೆ. ಸಂಚಿತ್ ಅವರ ಅಭಿನಯಕ್ಕೆ ಈಗಾಗಲೇ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಒಟಿಟಿ ರಂಗದಲ್ಲೂ ಸಿನಿಮಾ ಹೊಸ ಹವಾ ಸೃಷ್ಟಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಸಂಚಿತ್ ಸಂಜೀವ್ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಮೂಡಿದೆ. ಅವರು ಯಾವ ಸಿನಿಮಾ ಒಪ್ಪಿ ನಟಿಸುತ್ತಾರೆ ಎನ್ನುವ ಕುತೂಹಲ ವೀಕ್ಷಕರಿಗೆ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Loading...
Unable to load recommendations.
Follow Us