ಒಟಿಟಿಗೆ ಬರ್ತಿದೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’; ಏನಿದು ಸುದ್ದಿ?

ಮೂಲಗಳ ಪ್ರಕಾರ  ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್​ ಬಿ’ ಸಿನಿಮಾದ ಹಿಂದಿ ವರ್ಷನ್​ಗೆ ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆಯಂತೆ. ಶೀಘ್ರವೇ ಈ ಚಿತ್ರ ಒಟಿಟಿಗೆ ಬರಲಿದ್ದು ಆ ಬಗ್ಗೆ ಅಮೇಜಾನ್ ಪ್ರೈಮ್ ವಿಡಿಯೋ ಕಡೆಯಿಂದ ಘೋಷಣೆ ಆಗೋ ಸಾಧ್ಯತೆ ಇದೆ. ಇದು ಹಿಂದಿ ಮಂದಿಗೆ ಖುಷಿ ನೀಡಿದೆ.

ಒಟಿಟಿಗೆ ಬರ್ತಿದೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’; ಏನಿದು ಸುದ್ದಿ?
ರಕ್ಷಿತ್
Follow us
ರಾಜೇಶ್ ದುಗ್ಗುಮನೆ
|

Updated on: Mar 14, 2024 | 2:36 PM

ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ನಿರ್ಮಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿ ಎರಡರಲ್ಲೂ ಮೆಚ್ಚುಗೆ ಪಡೆದಿದೆ. ಮೊದಲ ಭಾಗ ಈಗಾಗಲೇ ಐದೂ ಭಾಷೆಗಳಲ್ಲಿ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯದಿದೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ದಕ್ಷಿಣದ ಭಾಷೆಗಳಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಿಂದಿ ವರ್ಷನ್ ಇನ್ನೂ ಒಟಿಟಿಯಲ್ಲಿ ರಿಲೀಸ್ ಆಗಿಲ್ಲ. ಈ ಬಗ್ಗೆ ಹೊಸ ಸುದ್ದಿ ಹರಿದಾಡಿದೆ. ಹಿಂದಿ ಭಾಷಿಗರು ಈ ವಿಚಾರ ಕೇಳಿ ಖುಷಿಯಾಗಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಭಾಗ ಥಿಯೇಟರ್​​ನಲ್ಲಿ ರಿಲೀಸ್ ಆದ ಸ್ವಲ್ಪ ಸಮಯದ ಬಳಿಕ ಒಟಿಟಿಯಲ್ಲಿ ರಿಲೀಸ್ ಆಯಿತು. ಎಲ್ಲಾ ಭಾಷೆಗಳಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಇದಾದ ಬಳಿಕ ‘ಪಾರ್ಟ್ ಬಿ’ ಥಿಯೇಟರ್​ನಲ್ಲಿ ರಿಲೀಸ್ ಆಯಿತು. ನಂತರ ಈ ಸಿನಿಮಾ ಒಟಿಟಿಗೆ ಬರಲು ಹೆಚ್ಚು ಸಮಯ ತೆಗೆದುಕೊಂಡಿತು. ಸದ್ಯ ಈ ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಹಿಂದಿ ವರ್ಷನ್​ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಮೂಲಗಳ ಪ್ರಕಾರ  ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್​ ಬಿ’ ಸಿನಿಮಾದ ಹಿಂದಿ ವರ್ಷನ್​ಗೆ ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆಯಂತೆ. ಶೀಘ್ರವೇ ಈ ಚಿತ್ರ ಒಟಿಟಿಗೆ ಬರಲಿದ್ದು ಆ ಬಗ್ಗೆ ಅಮೇಜಾನ್ ಪ್ರೈಮ್ ವಿಡಿಯೋ ಕಡೆಯಿಂದ ಘೋಷಣೆ ಆಗೋ ಸಾಧ್ಯತೆ ಇದೆ. ಇದು ಹಿಂದಿ ಮಂದಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಅಯೋಧ್ಯೆಗೆ ಭೇಟಿ ನೀಡಿ ಅವರ್ಣನೀಯ ಆಧ್ಯಾತ್ಮಿಕ ಅನುಭೂತಿ ಪಡೆದ ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ ಜೊತೆ, ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ಮುಖ್ಯ ಭೂಮಿಕೆ ನಿರ್ವಹಿಸಿದ್ದಾರೆ. ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರ, ಗೋಪಾಲ್ ಕೃಷ್ಣ ದೇಶಪಾಂಡೆ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?