AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಜತೆ ಡೇಟ್ ಮಾಡಲು ಸಾರಾ-ಜಾನ್ವಿ ನಡುವೆ ಸ್ಪರ್ಧೆ

‘ಕಾಫಿ ವಿತ್ ಕರಣ್​’ ಶೋ ಮತ್ತೆ ಆರಂಭ ಆಗಿದೆ. ಜುಲೈ 7ರಿಂದ ಸೀಸನ್ 7 ಪ್ರಸಾರ ಕಾಣುತ್ತಿದೆ. ಮೊದಲ ಎಪಿಸೋಡ್​ನಲ್ಲಿ ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಆಗಮಿಸಿದ್ದರು. ಎರಡನೇ ಎಪಿಸೋಡ್​ನಲ್ಲಿ ಜಾನ್ವಿ ಕಪೂರ್ ಹಾಗೂ ಸಾರಾ ಅಲಿ ಖಾನ್ ಆಗಮಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಜತೆ ಡೇಟ್ ಮಾಡಲು ಸಾರಾ-ಜಾನ್ವಿ ನಡುವೆ ಸ್ಪರ್ಧೆ
ಜಾನ್ವಿ-ವಿಜಯ್-ಸಾರಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 12, 2022 | 3:53 PM

Share

ಜಾನ್ವಿ ಕಪೂರ್ (Janhvi Kapoor) ಹಾಗೂ ಸಾರಾ ಅಲಿ ಖಾನ್ (Sara Ali Khan) ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ಸ್ಟಾರ್​ ಕುಡಿಗಳು. ಹೀಗಾಗಿ, ಸುಲಭದಲ್ಲಿ ಅವರಿಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಇವರಿಬ್ಬರೂ ಬೆಸ್ಟ್​ ಫ್ರೆಂಡ್ಸ್​. ಈಗ ಇವರು ವಿಜಯ್ ದೇವರಕೊಂಡ ಜತೆ ಡೇಟ್ ಮಾಡುವ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

‘ಕಾಫಿ ವಿತ್ ಕರಣ್​’ ಶೋ ಮತ್ತೆ ಆರಂಭ ಆಗಿದೆ. ಜುಲೈ 7ರಿಂದ ಸೀಸನ್ 7 ಪ್ರಸಾರ ಕಾಣುತ್ತಿದೆ. ಮೊದಲ ಎಪಿಸೋಡ್​ನಲ್ಲಿ ಆಲಿಯಾ ಭಟ್ ಹಾಗೂ ರಣವೀರ್ ಸಿಂಗ್ ಆಗಮಿಸಿದ್ದರು. ಎರಡನೇ ಎಪಿಸೋಡ್​ನಲ್ಲಿ ಜಾನ್ವಿ ಕಪೂರ್ ಹಾಗೂ ಸಾರಾ ಅಲಿ ಖಾನ್ ಆಗಮಿಸುತ್ತಿದ್ದಾರೆ. ಇಬ್ಬರೂ ಬೆಸ್ಟ್​ ಫ್ರೆಂಡ್ಸ್ ಎನ್ನುವ ಕಾರಣಕ್ಕೆ ಇವರನ್ನು ಒಟ್ಟಿಗೆ ಶೋಗೆ ಕರೆತರಲಾಗಿದೆ. ಇದರ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಕರಣ್​ ಜೋಹರ್.

ಇದನ್ನೂ ಓದಿ
Image
ಮೊದಲ ರಾತ್ರಿ ಎಂಬುದೆಲ್ಲ ಇರುವುದಿಲ್ಲ, ಏಕೆಂದರೆ ನೀವು ಸುಸ್ತಾಗಿರುತ್ತೀರಿ ಎಂದ ಆಲಿಯಾ ಭಟ್
Image
ಶಾರುಖ್-ಕರಣ್ ಸಂಬಂಧದ ಬಗ್ಗೆ ಹುಟ್ಟಿತ್ತು ಅನುಮಾನ; ಎಲ್ಲವನ್ನೂ ವಿವರಿಸಿದ್ದ ಜೋಹರ್  
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಸಾರಾ ನೀವು ಯಾರ ಜತೆ ಡೇಟ್ ಮಾಡಬೇಕು ಎಂದುಕೊಂಡಿದ್ದೀರಿ’ ಎನ್ನುವ ಪ್ರಶ್ನೆ ಮಾಡಿದ್ದಾರೆ ಕರಣ್ ಜೋಹರ್. ಇದಕ್ಕೆ ವಿಜಯ್ ದೇವರಕೊಂಡ ಹೆಸರನ್ನು ಹೇಳಿದ್ದಾರೆ ಸಾರಾ. ಅಚ್ಚರಿ ಎಂದರೆ ಜಾನ್ವಿ ಕಪೂರ್​ಗೂ ವಿಜಯ್ ದೇವರಕೊಂಡ ಎಂದರೆ ಇಷ್ಟ. ಇದನ್ನು ಜಾನ್ವಿ ಹೇಳಿಕೊಂಡರು. ‘ಕರಣ್ ಏನಿದು’ ಎಂದು ಜಾನ್ವಿ ಪ್ರಶ್ನೆ ಮಾಡಿದ್ದಾರೆ. ಸದ್ಯ, ಈ ಪ್ರೋಮೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಪ್ರತಿ ದಿನ ಫೋಟೋಶೂಟ್​ ಮಾಡಿಸಿ ಮಿಂಚುತ್ತಿರುವ ಜಾನ್ವಿ ಕಪೂರ್​; ಇಲ್ಲಿವೆ ಹೊಸ ಫೋಟೋಗಳು

ಕರಣ್ ಜೋಹರ್ ಅವರು ಈಗಾಗಲೇ ಯಶಸ್ವಿಯಾಗಿ ‘ಕಾಫಿ ವಿತ್ ಕರಣ್​’ ಶೋನ 6 ಸೀಸನ್​​ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಚಾಟ್ ಚೋನಲ್ಲಿ ಹಲವು ವಿವಾದಗಳು ಹುಟ್ಟಿಕೊಂಡಿದ್ದೂ ಇದೆ. ಈ ಬಾರಿ ಏಳನೇ ಸೀಸನ್ ಆರಂಭ ಆಗಿದೆ. ಈ ಮೊದಲು ‘ಕಾಫಿ ವಿತ್ ಕರಣ್’ ಟಿವಿಯಲ್ಲಿ ಪ್ರಸಾರ ಕಾಣುತ್ತಿತ್ತು. ಈಗ ಡಿಸ್ನಿ+ ಹಾಟ್​ಸ್ಟಾರ್​ನಲ್ಲಿ ಈ ಶೋ ನೇರವಾಗಿ ಪ್ರಸಾರ ಕಾಣುತ್ತಿದೆ. ಮೊದಲ ಎಪಿಸೋಡ್​ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಎರಡನೇ ಎಪಿಸೋಡ್​​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ