ಥಿಯೇಟರ್​ನಲ್ಲಿ ಓಡುತ್ತಿರುವಾಗಲೇ ಒಟಿಟಿಗೆ ಬಂತು ‘ಸರ್ಕಾರು ವಾರಿ ಪಾಟ’; ಮಹೇಶ್ ಬಾಬು ಫ್ಯಾನ್ಸ್ ಆಕ್ರೋಶ

ಎರಡನೇ ವಾರವೂ ಅನೇಕರು ‘ಸರ್ಕಾರು ವಾರಿ ಪಾಟ’ ಚಿತ್ರ ವೀಕ್ಷಿಸಿದರು. ಸಿನಿಮಾ ತೆರೆಕಂಡು 19 ದಿನ ಕಳೆದಿದೆ. ಹೀಗಿರುವಾಗಲೇ ಚಿತ್ರವನ್ನು ಒಟಿಟಿಗೆ ತರಲಾಗಿದೆ.  

ಥಿಯೇಟರ್​ನಲ್ಲಿ ಓಡುತ್ತಿರುವಾಗಲೇ ಒಟಿಟಿಗೆ ಬಂತು ‘ಸರ್ಕಾರು ವಾರಿ ಪಾಟ’; ಮಹೇಶ್ ಬಾಬು ಫ್ಯಾನ್ಸ್ ಆಕ್ರೋಶ
ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 02, 2022 | 3:08 PM

ಮಹೇಶ್ ಬಾಬು (Mahesh Baby) ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ಮಹೇಶ್ ಬಾಬು ಅವರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ. ಸತತ ಸೋಲು ಕಂಡಿದ್ದ ನಟಿ ಕೀರ್ತಿ ಸುರೇಶ್ ಅವರು (Keerthy Suresh) ಈ ಚಿತ್ರದಿಂದ ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾ ಕೆಲವು ಕಡೆಗಳಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಹೀಗಿರುವಾಗಲೇ ಚಿತ್ರ ಅಮೇಜಾನ್ ಪ್ರೈಮ್​ ವಿಡಿಯೋದಲ್ಲಿ (Amazon Prime Video)  ಬಿಡುಗಡೆ ಆಗಿದೆ. ಇದರಿಂದ ಫ್ಯಾನ್ಸ್ ಆಕ್ರೋಶಗೊಂಡಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಕೆಲವರು ಚಿತ್ರಕ್ಕೆ ನೆಗೆಟಿವ್ ವಿಮರ್ಶೆ ಕೊಟ್ಟರು. ಆದರೆ,  ಇದು ಚಿತ್ರದ ಮೇಲೆ ಅಷ್ಟು ಪ್ರಭಾವ ಬೀರಿಲ್ಲ. ಸಿನಿಮಾ ಮೊದಲ ವಾರ ಒಳ್ಳೆಯ ಕಲೆಕ್ಷನ್ ಮಾಡಿತು. ಎರಡನೇ ವಾರವೂ ಅನೇಕರು ಚಿತ್ರ ವೀಕ್ಷಿಸಿದರು. ಸಿನಿಮಾ ತೆರೆಕಂಡು 19 ದಿನ ಕಳೆದಿದೆ. ಹೀಗಿರುವಾಗಲೇ ಚಿತ್ರವನ್ನು ಒಟಿಟಿಗೆ ತರಲಾಗಿದೆ.

‘ಕೆಜಿಎಫ್ 2’ ಚಿತ್ರ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ವೀಕ್ಷಿಸಬೇಕು ಎಂದರೆ ಹೆಚ್ಚಿನ ಹಣ ನೀಡಬೇಕು. ಕೆಲ ಒಟಿಟಿಗಳು ಮಾತ್ರ ಸಿನಿಮಾವನ್ನು ರೆಂಟ್​ಗೆ ಕೊಡುವ ತಂತ್ರ ಉಪಯೋಗಿಸಿದ್ದವು. ಅಮೇಜಾನ್ ಪ್ರೈಮ್​ ವಿಡಿಯೋ ‘ಕೆಜಿಎಫ್ 2’ ಸಿನಿಮಾ ಮೂಲಕ ಈ ಮಾರ್ಗ ಆಯ್ಕೆ ಮಾಡಿಕೊಂಡಿದೆ. ಈಗ ದುಡ್ಡು ಕೊಟ್ಟು ‘ಸರ್ಕಾರು ವಾರಿ ಪಾಟ’ ಚಿತ್ರ ವೀಕ್ಷಿಸುವ ಆಯ್ಕೆಯನ್ನು ನೀಡಲಾಗಿದೆ. ಇದರನ್ವಯ ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಬೇಕು ಎಂದರೆ 199 ರೂಪಾಯಿ ಪಾವತಿಸಬೇಕು. ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಆಗುತ್ತಿರುವಾಗಲೇ ಒಟಿಟಿಗೆ ಬಂದಿದ್ದು ಮಹೇಶ್ ಬಾಬು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
‘ಸರ್ಕಾರು ವಾರಿ ಪಾಟ’ ಬಾಕ್ಸ್​ ಆಫೀಸ್​ ಕಲೆಕ್ಷನ್​: ಮೊದಲ ದಿನ ಮಹೇಶ್​ ಬಾಬು ಸಿನಿಮಾ ಗಳಿಸಿದ್ದು ಎಷ್ಟು?
Image
‘ಒಮ್ಮೆ ನೋಡಬಹುದು, ಹೆಚ್ಚು ಮನರಂಜನೆ ಇಲ್ಲ’: ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಪ್ರೇಕ್ಷಕರ ಪ್ರಾಮಾಣಿಕ ವಿಮರ್ಶೆ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?

ಇದನ್ನೂ ಓದಿ: ‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಸರ್ಕಾರು ವಾರಿ ಪಾಟ’ ಸಿನಿಮಾ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ವೀಕೆಂಡ್​ನಲ್ಲಿ ಜನರು ಈ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಹೀಗಿರುವಾಗಲೇ ಇದು ಒಟಿಟಿಗೆ ರಿಲೀಸ್ ಆಗಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅಭಿಮಾನಿಗಳದ್ದು.

ನೀವು ಅಮೇಜಾನ್ ಪ್ರೈಮ್ ವಿಡಿಯೋ ಚಂದಾದಾರರಾಗಿದ್ದರೂ ‘ಸರ್ಕಾರು ವಾರಿ ಪಾಟ’ ಸಿನಿಮಾ ವೀಕ್ಷಿಸಲು ಸಾಧ್ಯವಿಲ್ಲ. ಕೆಲ ದಿನಗಳು ಕಳೆದ ನಂತರದಲ್ಲಿ ಈ ಚಿತ್ರವನ್ನು ಚಂದಾದಾರರಿಗೆ ಉಚಿತವಾಗಿ ನೋಡಲು ಅವಕಾಶ ಮಾಡಿಕೊಡಲಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ