AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somanna Machimada: ಬಿಗ್ ಬಾಸ್​ನಲ್ಲಿ ಸರ್​ಪ್ರೈಸ್: ಮನೆಯೊಳಗೆ ಎಂಟ್ರಿಕೊಟ್ಟ ಖ್ಯಾತ ಪತ್ರಕರ್ತ ಸೋಮಣ್ಣ ಮಾಚಿಮಾಡ

Bigg Boss OTT kannada: ಈ ಬಾರಿ ಓಟಿಟಿ ಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಇದೀಗ ಕೊನೆಯ ಸ್ಪರ್ಧಿಯಾಗಿ ಪತ್ರಕರ್ತ ಖೋಟಾದಿಂದ ಖಾಸಗಿ ಸುದ್ದಿ ವಾಹಿನಿಯ ಸೋಮಣ್ಣ ಮಾಚಿಮಾಡ (Somanna Machimada) ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.

Somanna Machimada: ಬಿಗ್ ಬಾಸ್​ನಲ್ಲಿ ಸರ್​ಪ್ರೈಸ್: ಮನೆಯೊಳಗೆ ಎಂಟ್ರಿಕೊಟ್ಟ ಖ್ಯಾತ ಪತ್ರಕರ್ತ ಸೋಮಣ್ಣ ಮಾಚಿಮಾಡ
Sudeep and Somanna Machimada
TV9 Web
| Updated By: Vinay Bhat|

Updated on:Aug 06, 2022 | 11:06 PM

Share

ಈ ಬಾರಿ ಓಟಿಟಿ ಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ (Bigg Boss Kannada OTT) ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಒಬ್ಬೊಬ್ಬರೆ ಸ್ಪರ್ಧಿಗಳು ದೊಡ್ಮನೆ ಸೇರಿಕೊಂಡಿದ್ದಾರೆ. ಇದೀಗ ಕೊನೆಯ ಸ್ಪರ್ಧಿಯಾಗಿ ಪತ್ರಕರ್ತ ಖೋಟಾದಿಂದ ಖಾಸಗಿ ಸುದ್ದಿ ವಾಹಿನಿಯ ಸೋಮಣ್ಣ ಮಾಚಿಮಾಡ (Somanna Machimada) ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ. ಸುಮಾರು ಒಂದೂವರೆ ದಶಕಗಳಿಂದ ಕನ್ನಡ ಮಾಧ್ಯಮದಲ್ಲಿ ಚಿರಪರಿಚಿತರಾಗಿರುವ ಕೊಡಗು ಮೂಲದ ಸೋಮಣ್ಣ ಮೈಸೂರಿನಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದ್ದರು. ಬಳಿಕ ಟಿವಿ9 ಕನ್ನಡ ಸೇರಿದ ಅವರು ಇದೀಗ ಮತ್ತೊಂದು ಖಾಸಗಿ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿರುವ ಸೋಮಣ್ಣ ಮಾಚಿಮಾಡ, ಹಲವಾರು ರಾಜಕಾರಣಿಗಳು, ಅನೇಕ ಸಿನಿಮಾ ಸೆಲೆಬ್ರಿಟಿಗಳನ್ನ ಸಂದರ್ಶನ ಮಾಡಿದ್ದಾರೆ. ಸೋಮಣ್ಣ ಮಾಚಿಮಾಡ ಅವರಿಗೆ ಬಹುದೊಡ್ಡ ಫ್ಯಾನ್ಸ್‌ ಬಳಗ ಇದೆ. ಇವರು ಮಾಡುವ ಸಂದರ್ಶನಗಳು ತುಂಬಾ ಪ್ರಖ್ಯಾತಿ ಪಡೆದಿವೆ. ಇವರಿಗೆ ಫೇಸ್‌ಬುಕ್‌ನಲ್ಲಿ 114k ಫಾಲೋವರ್ಸ್ ಇದ್ದರೆ, ಇನ್​ಸ್ಟಾಗ್ರಾಮ್‌ನಲ್ಲಿ 27k ಕ್ಕೂ ಅಧಿಕ ಹಿಂಬಾಲಕರಿದ್ದಾರೆ.

ಬಿಗ್ ಬಾಸ್ ಮನೆಗೆ ಈಗಾಗಲೇ ಆರ್ಯವರ್ಧನ್​ ಗುರೂಜಿ, ಸೋನು ಶ್ರೀನಿವಾಸ್ ಗೌಡ, ರೂಪೇಶ್ ಶೆಟ್ಟಿ, ಸಾನ್ಯಾ ಅಯ್ಯರ್, ಸ್ಪೂರ್ಥಿ ಗೌಡ, ಹಾಸ್ಯ ಕಲಾವಿದ ಲೋಕೇಶ್, ನಟಿ ಅಕ್ಷತಾ ಕುಕ್ಕಿ, ಕಿರಣ್ ಯೋಗೇಶ್ವರ್, ರಾಕೇಶ್ ಅಡಿಗ, ಚೈತ್ರಾ ಹಳ್ಳಿಕೇರಿ, ಉದಯ್ ಸೂರ್ಯ ಅವರು ಎಂಟ್ರಿ ಕೊಟ್ಟಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು ಇವರೇ..!
Image
Roopesh Shetty: ಬಿಗ್ ​ಬಾಸ್ ಮನೆಗೆ ಎಂಟ್ರಿಕೊಟ್ಟ ಕರಾವಳಿಯ ಸೂಪರ್ ಸ್ಟಾರ್: ಯಾರು ಗೊತ್ತಾ ಈ ರೂಪೇಶ್ ಶೆಟ್ಟಿ?
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Sonu Srinivas Gowda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಬಿಗ್​ ಬಾಸ್ ಆರಂಭವಾಗುತ್ತಿದ್ದಂತೆ ಕಿಚ್ಚ ಬಿಗ್​ ಸರ್​ಪ್ರೈಸ್ ಒಂದನ್ನು ನೀಡಿದ್ದಾರೆ. ವೇದಿಕೆ ಮೇಲೆ ಬಂದು ಜನರ ಮನದಲ್ಲಿದ್ದ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಮೊದಲನೆಯದಾಗಿ ಬಿಗ್ ಬಾಸ್ ಓಟಿಟಿ ಒಟ್ಟು ಎಷ್ಟು ದಿನಗಳ ಕಾಲ ನಡೆಯಲಿದೆ ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಸುದೀಪ್ ಒಟ್ಟು 40 ದಿನಗಳ ವರೆಗೆ ನಡೆಯಲಿದೆ ಎಂದು ಹೇಳಿದ್ದಾರೆ. 40 ದಿನಗಳ ಬಳಿಕ ಟಿವಿ ಯಲ್ಲಿ 100 ದಿನಗಳ 9ನೇ ಸೀಸನ್​ನ ಬಿಗ್ ಬಾಸ್ ಕನ್ನಡ ಶುರುವಾಗಲಿದೆ. ಇಲ್ಲಿ ಓಟಿಟಿ ಬಿಗ್ ಬಾಸ್​ನಲ್ಲಿ ಕೊನೆಯ ವರೆಗೂ ಇದ್ದ ಟಾಪ್ ಸ್ಪರ್ಧಿಗಳು ನೇರವಾಗಿ 9ನೇ ಸೀಸನ್ ಬಿಗ್​ ಬಾಸ್​ಗೆ ಅರ್ಹತೆ ಪಡೆದುಕೊಳ್ಳುತ್ತಾರೆ ಎಂದು ಸುದೀಪ್ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಈ ಸೀಸನ್​ನ ವೇಗವಾಗಿ ಸಾಗಲಿದ್ದು 50 ಓವರ್​ಗಳ ಕ್ರಿಕೆಟ್ ಪಂದ್ಯದಂತೆ 20 ಬಾಲ್ ಆಡಿ ಸೆಟಲ್ ಆಗಲು ಸಾಧ್ಯವಿಲ್ಲ, ಟಿ20 ಪಂದ್ಯದಂತೆ ಮೊದಲ ಎಸೆತದಿಂದಲೇ ಆಟ ಶುರು ಮಾಡಬೇಕು ಎಂದು ಸ್ಪರ್ಧಿಗಳಿಗೆ ಕಿವಿ ಮಾತು ಹೇಳಿದ್ದಾರೆ.

Published On - 11:05 pm, Sat, 6 August 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ