Sonu Srinivas Gowda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

Bigg Boss OTT kannada: ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ. ಈ ಮಧ್ಯೆ ಒಂದೊಂದಾಗಿ ಬಿಗ್​ ಬಾಸ್ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.

Sonu Srinivas Gowda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ
sonu
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 06, 2022 | 6:59 PM

Bigg Boss OTT Kannada Season 1: ‘ಬಿಗ್ ಬಾಸ್​ ಒಟಿಟಿ ಕನ್ನಡ’ ಸಾಕಷ್ಟು ಕುತೂಹಲ ಮೂಡಿಸಿದೆ. ಮೊದಲ ಸೀಸನ್ ಆದ್ದರಿಂದ ನಿರೀಕ್ಷೆಗಳು ಕೊಂಚ ಹೆಚ್ಚೇ ಇದೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ (Aryavardhan Guruji) ಅವರು ‘ಬಿಗ್ ಬಾಸ್’ ಮನೆ ಸೇರಿದ್ದರು. ಈಗ ಎರಡನೇ ಸ್ಪರ್ಧಿಯ ಎಂಟ್ರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸೋನು ಶ್ರೀನಿವಾಸ್ ಗೌಡ (Sonu Gowda) ಅವರು ಬಿಗ್ ಬಾಸ್ ಒಟಿಟಿಗೆ ಎಂಟ್ರಿ ನೀಡಿದ್ದಾರೆ.

ಈ ಬಾರಿ ‘ಬಿಗ್ ಬಾಸ್​’ ಅನ್ನು ಒಟಿಟಿಯಲ್ಲಿ ಮಾತ್ರ ವೀಕ್ಷಿಸಬಹುದು. ವೂಟ್ ಆ್ಯಪ್​​ನ ಚಂದಾದಾರರಾದರೆ ಮಾತ್ರ ‘ಬಿಗ್ ಬಾಸ್ ಒಟಿಟಿ’ ವೀಕ್ಷಣೆ ಸಾಧ್ಯ. ಇಲ್ಲವಾದರೆ, ನೀವು ‘ಬಿಗ್ ಬಾಸ್’ ನೋಡಲು ಆಗುವುದಿಲ್ಲ. ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ. ಈ ಮಧ್ಯೆ ಒಂದೊಂದಾಗಿ ಬಿಗ್​ ಬಾಸ್ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೋಲುವ ಮೂರ್ತಿ; ಪ್ರತಿ ವಿಚಾರಕ್ಕೂ ವಿವರಣೆ ನೀಡಿದ ಕಿಚ್ಚ
Image
Bigg Boss OTT: ‘ಬಿಗ್ ಬಾಸ್​ ಒಟಿಟಿ’ಗೆ ವಾಸುಕಿ ವೈಭವ್ ಎಂಟ್ರಿ; ಮಾಜಿ ಸ್ಪರ್ಧಿ ಕಂಡು ಫ್ಯಾನ್ಸ್ ಖುಷ್
Image
Bigg Boss OTT Kannada: ಈ ಬಾರಿಯ ‘ಬಿಗ್ ಬಾಸ್ ಒಟಿಟಿ’ ಪ್ರಸಾರ ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
View this post on Instagram

A post shared by Voot Select (@vootselect)

ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ. ಸೋನು ಅವರ ಕೆಲ ಖಾಸಗಿ ಫೋಟೋಗಳು ಲೀಕ್ ಆಗಿದ್ದವು. ಆ ಫೋಟೋಗಳು ತಮ್ಮದಲ್ಲ ಎಂದೇ ಅವರು ಹೇಳಿದ್ದರು.

ಇದನ್ನೂ ಓದಿ: Aryavardhan Guruji: ‘ಬಿಗ್ ಬಾಸ್ ಒಟಿಟಿ’ಯ ಮೊದಲ ಸ್ಪರ್ಧಿಯಾಗಿ ಮನೆ ಸೇರಿದ ಆರ್ಯವರ್ಧನ್​ ಗುರೂಜಿ

ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುವ ಮೂಲಕ ಸೋನು ಅವರು ಸಾಕಷ್ಟು ಹಿಂಬಾಲಕರನ್ನು ಹೊಂದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 7.7 ಲಕ್ಷ ಫಾಲೋವರ್ಸ್​ ಇದ್ದಾರೆ.  ಕೆಲ ಕಿರುಚಿತ್ರ, ಮ್ಯೂಸಿಕ್​ ವಿಡಿಯೋದಲ್ಲಿ ಸೋನು ನಟಿಸಿದ್ದಾರೆ. ಅವರಿಗೆ ಬಿಗ್ ಬಾಸ್ ಮೂಲಕ ಮತ್ತಷ್ಟು ಜನಪ್ರಿಯತೆ ಸಿಗುವ ಸಾಧ್ಯತೆ ಇದೆ.

Published On - 3:45 pm, Sat, 6 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ