AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ

Sonu Srinivas Gowda | Kiccha Sudeep: ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
ಸೋನು ಶ್ರೀನಿವಾಸ್ ಗೌಡ-ಸುದೀಪ್
TV9 Web
| Updated By: ಮದನ್​ ಕುಮಾರ್​|

Updated on: Aug 07, 2022 | 4:42 PM

Share

ಪ್ರತಿ ಬಾರಿ ಬಿಗ್​ ಬಾಸ್​ ಆರಂಭ ಆದಾಗಲೂ ಒಂದಷ್ಟು ಪರ-ವಿರೋಧಗಳು ಹುಟ್ಟಿಕೊಳ್ಳುತ್ತವೆ. ಸ್ಪರ್ಧಿಗಳ ಆಯ್ಕೆ ಬಗ್ಗೆ ಸಹಜವಾಗಿಯೇ ವೀಕ್ಷಕರು ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಸಾಧ್ಯವಾದಷ್ಟು ಅರ್ಹ ವ್ಯಕ್ತಿಗಳಿಗೆ ಅವಕಾಶ ಸಿಗಲಿ ಎಂಬುದು ಜನರ ಆಶಯ. ಬೇರೆ ಬೇರೆ ಕಾರಣದಿಂದ ವಿವಾದ ಮಾಡಿಕೊಂಡು ವೈರಲ್​ ಆದವರಿಗೆ ಚಾನ್ಸ್​ ಸಿಕ್ಕರೆ ವೀಕ್ಷಕರಿಗೆ ಬೇಸರ ಆಗುತ್ತದೆ. ಈ ಬಾರಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಬಿಗ್​ ಬಾಸ್​ ಮನೆಗೆ ಹೋಗಿರುವುದು ಅನೇಕರಿಗೆ ಇಷ್ಟ ಆಗಿಲ್ಲ. ಕಮೆಂಟ್​ಗಳ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಿಚ್ಚ ಸುದೀಪ್ (Kiccha Sudeep)​ ಅವರು ನಡೆಸಿಕೊಡುತ್ತಿರುವ ಈ ಕಾರ್ಯಕ್ರಮದಲ್ಲಿ ಇಂಥ ಸ್ಪರ್ಧಿಗಳು ಬಂದಿದ್ದು ಸರಿಯಲ್ಲ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಬಿಗ್ ಬಾಸ್​ ಕನ್ನಡ ಒಟಿಟಿ ಸೀಸನ್​ 1’ಕ್ಕೆ (Bigg Boss OTT Kannada) ಸ್ಪರ್ಧಿಗಳನ್ನು ಆಯ್ಕೆ ಮಾಡಿದರ ವಿರುದ್ಧ ಜನರು ಗರಂ ಆಗಿದ್ದಾರೆ.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ವ್ಯಕ್ತಿಗಳಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಗುತ್ತದೆ. ಕಿಚ್ಚ ಸುದೀಪ್​ ಜೊತೆ ಒಡನಾಡುವ ಅವಕಾಶ ಸಿಗುತ್ತದೆ. ಒಂದೇ ವೇದಿಕೆಯಲ್ಲಿ ಸುದೀಪ್​ ಮತ್ತು ಸ್ಪರ್ಧಿಗಳು ನಿಂತುಕೊಳ್ಳುವಂತಹ ಸಂದರ್ಭಗಳು ಇರುತ್ತವೆ. ಯೋಗ್ಯವಲ್ಲದ ವ್ಯಕ್ತಿಗಳು ಈ ಶೋಗೆ ಬಂದರೆ ಅಂಥವರಿಂದ ಸುದೀಪ್​ ಅವರ ಘನತೆಗೆ ಧಕ್ಕೆ ಆಗುತ್ತದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು
Image
‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
Image
Rakesh Adiga: ‘ಬಿಗ್​ ಬಾಸ್​’ ಮನೆಗೆ ರಾಕೇಶ್ ಅಡಿಗ ಎಂಟ್ರಿ; ಆರಂಭ ಆಗುತ್ತಾ ಸೆಕೆಂಡ್ ಇನ್ನಿಂಗ್ಸ್​?
Image
ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

ಕರ್ನಾಟಕದಲ್ಲಿ ಕೋಟ್ಯಂತರ ಜನರು ಬಿಗ್​ ಬಾಸ್​ಗೆ ಬರಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ನಲ್ಲಿ ಸಾಧನೆ ಮಾಡಿದವರು ಬೇಕಾದಷ್ಟು ಮಂದಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಒಳ್ಳೆಯ ರೀತಿಯಲ್ಲಿ ಗುರುತಿಸಿಕೊಂಡವರೂ ಬಹಳಷ್ಟು ಜನರು ಇದ್ದಾರೆ. ಅಂಥವರಿಗೆ ಬಿಗ್​ ಬಾಸ್​ನಲ್ಲಿ ಚಾನ್ಸ್ ಸಿಕ್ಕಿರೆ ಅವರ ಬದುಕು ಬದಲಾಗುತ್ತದೆ. ಕಾರ್ಯಕ್ರಮಕ್ಕೂ ಒಂದು ಗೌರವ ಹೆಚ್ಚುತ್ತದೆ. ಆದರೆ ಕೆಲವು ಸ್ಪರ್ಧಿಗಳ ಆಯ್ಕೆಯಿಂದ ತಮಗೆ ಬೇಸರ ಆಗಿದೆ ಎಂದು ವೀಕ್ಷಕರು ಕಮೆಂಟ್​ ಮಾಡುತ್ತಿದ್ದಾರೆ.

ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿರುವುದಕ್ಕೆ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಈ ವಿಚಾರದ ಕುರಿತಂತೆ ಬಗೆಬಗೆಯ ಮೀವ್ಸ್​ ವೈರಲ್​ ಆಗಿವೆ. ಆದಷ್ಟು ಬೇಗ ಸೋನು ಎಲಿಮಿನೇಟ್​ ಆಗಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಇನ್ನು, ಬಿಗ್​ ಬಾಸ್​ ಮನೆಯೊಳಗೆ ಸೋನು ಶ್ರೀನಿವಾಸ್​ ಗೌಡ ಏನೆಲ್ಲ ಮಾಡಲಿದ್ದಾರೆ ಎಂಬ ಬಗ್ಗೆಯೂ ವೀಕ್ಷಕರಿಗೆ ಕುತೂಹಲ ಇದೆ. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ