AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಖಾಸಗಿ ವಿಡಿಯೋ ಲೀಕ್​ ಆಗಿದ್ದು ಹೇಗೆ? ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ ಸೋನು ಶ್ರೀನಿವಾಸ್​ ಗೌಡ

Bigg Boss OTT | Sonu Gowda: ‘ಇಲ್ಲಿ ಯಾರೂ ಸಾಚಾ ಅಲ್ಲ. ಎಲ್ಲರೂ ಇದನ್ನು ಮಾಡಿಕೊಂಡಿರುತ್ತಾರೆ. ಆದರೆ ನನ್ನ ವಿಡಿಯೋ ಹೊರಗೆ ಬಂತು’ ಎಂದು ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.

Sonu Srinivas Gowda: ಖಾಸಗಿ ವಿಡಿಯೋ ಲೀಕ್​ ಆಗಿದ್ದು ಹೇಗೆ? ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ ಸೋನು ಶ್ರೀನಿವಾಸ್​ ಗೌಡ
ಸೋನು ಶ್ರೀನಿವಾಸ್ ಗೌಡ
TV9 Web
| Updated By: ಮದನ್​ ಕುಮಾರ್​|

Updated on:Aug 08, 2022 | 9:51 AM

Share

ಈ ಬಾರಿ ಬಿಗ್​ ಬಾಸ್​ ಮನೆಯೊಳಗೆ ಕಾಲಿಟ್ಟಿರುವ ಸ್ಪರ್ಧಿಗಳ ಪೈಕಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಅವರನ್ನು ಈ ಶೋಗೆ ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಬಹುತೇಕರು ಆರೋಪಿಸುತ್ತಿದ್ದಾರೆ. ಅದಕ್ಕೆ ಕಾರಣ ಇಷ್ಟೇ.. ಕೆಲವೇ ತಿಂಗಳ ಹಿಂದೆ ಸೋನು ಗೌಡ ಅವರ ಖಾಸಗಿ ವಿಡಿಯೋ ಲೀಕ್​ ಆಗಿತ್ತು. ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು. ಖಾಸಗಿ ಅಂಗಗಳನ್ನು ಪ್ರದರ್ಶನ ಮಾಡಿದ ಇಂಥವರಿಗೆಲ್ಲ ‘ಬಿಗ್​​ ಬಾಸ್​ ಕನ್ನಡ ಒಟಿಟಿ’ (Bigg Boss OTT Kannada) ವೇದಿಕೆಯಲ್ಲಿ ಅವಕಾಶ ನೀಡಿದ್ದು ಸರಿಯಲ್ಲ ಎಂದು ಕಮೆಂಟ್​ಗಳ ಮೂಲಕ ಜನರು ಅಸಮಾಧಾನ ಹೊರಹಾಕುತ್ತಿದ್ದಾರೆ. ಈಗ ಅದೇ ವಿಚಾರದ ಬಗ್ಗೆ ಸೋನು ಶ್ರೀನಿವಾಸ್​ ಗೌಡ ಮಾತನಾಡಿದ್ದಾರೆ. ತಮ್ಮ ಖಾಸಗಿ ವಿಡಿಯೋ (Sonu Srinivas Gowda Viral Video) ಲೀಕ್​ ಆಗಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಎಲ್ಲವನ್ನೂ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ಒಬ್ಬ ಹುಡುಗನನ್ನು ಸೋನು ಶ್ರೀನಿವಾಸ್​ ಗೌಡ ಲವ್​ ಮಾಡುತ್ತಿದ್ದರು. ಇಬ್ಬರ ನಡುವಿನ ವಿಡಿಯೋ ಕಾಲ್​ ರೆಕಾರ್ಡ್​ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಈ ರೀತಿ ಆಗಿದ್ದಕ್ಕೆ ಬಾಯ್​ ಫ್ರೆಂಡ್​ ಕಾರಣ ಎಂದು ಹೇಳಿದ್ದಾರೆ ಸೋನು. ಹಳೇ ಘಟನೆಯನ್ನು ನೆನಪಿಸಿಕೊಂಡು ದುಃಖ ಹೊರಹಾಕಿದ ಅವರನ್ನು ದೊಡ್ಮೆನೆಯೊಳಗೆ ಎಲ್ಲರೂ ಸಂತೈಸಿದ್ದಾರೆ. ಅವರನ್ನು ತಬ್ಬಿಕೊಂಡು ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ ನಟ ರಾಕೇಶ್​ ಅಡಿಗ.

‘ಅವನು ಮೊದಲಿನಿಂದ ನನಗೆ ಗೊತ್ತಿದ್ದ ಹುಡುಗ. ನಮ್ಮ ಜಾತಿಯವನು. ಅವರನ್ನು ಮದುವೆ ಆಗ್ತೀನಿ ಅಂತ ಮನೆಯಲ್ಲಿ ಹೇಳಿದ್ದೆ. ಒಂದು ದಿನ ವಿಡಿಯೋ ಕಾಲ್​ ಮಾಡು ಅಂದ. ಹೇಗೂ ಮದುವೆ ಆಗುತ್ತೇವಲ್ಲ ಅಂತ ನಾನು ವಿಡಿಯೋ ಕಾಲ್​ನಲ್ಲಿ ಹಾಗೆ ಮಾಡಿದೆ. ಅದನ್ನು ಅವನು ರೆಕಾರ್ಡ್​ ಮಾಡಿಕೊಂಡ. ಒಂದು ವಾರದ ನಂತರ ಅವನು ರೂಡ್​ ಆಗಿ ನಡೆದುಕೊಳ್ಳಲು ಶುರು ಮಾಡಿದ’ ಎಂದು ಆತನ ಬಗ್ಗೆ ಸೂನು ಗೌಡ ವಿವರಿಸಿದ್ದಾರೆ.

ಇದನ್ನೂ ಓದಿ
Image
Sanya Iyer: ಅಪ್ಪನೇ ಮಗಳ ಖಾಸಗಿ ವಿಡಿಯೋ ರೆಕಾರ್ಡ್​ ಮಾಡಿದ್ದ; ಸಾನ್ಯಾ ಅಯ್ಯರ್​ ತಾಯಿ ಹೇಳಿದ ಕರಾಳ ಸತ್ಯಗಳು
Image
Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು

‘ಆ ವಿಡಿಯೋ ಇಟ್ಟುಕೊಂಡು ಬ್ಲಾಕ್​ ಮೇಲ್​ ಮಾಡುತ್ತಿದ್ದ. ಆಗಲೇ ನಾನು ಅಮ್ಮನ ಬಳಿಕ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದೆ. ಒಂದೂವರೆ ವರ್ಷದ ಬಳಿಕ ಮೆಸೇಜ್​ ಮಾಡಿ ಹೆದರಿಸಿದ. ವಿಡಿಯೋ ಲೀಕ್​ ಮಾಡ್ತೀನಿ ಅಂತ ಬೆದರಿಸಿದ. ಅಳುತ್ತಾ ನಾನು ಡಿಪ್ರೆಷನ್​ಗೆ ಹೋದೆ. ಆ ವಿಡಿಯೋ ಲೀಕ್​ ಆದ ಬಳಿಕ ನಾನು ನಮ್ಮ ಊರಿಗೆ ಹೋಗಿಲ್ಲ’ ಎಂದು ಸೋನು ಗೌಡ ಕಣ್ಣೀರು ಹಾಕಿದ್ದಾರೆ.

‘ನನ್ನ ನಂಬಿಕೆಗೆ ಮೋಸ ಆಯ್ತು. ನಾನು ಇದುವರೆಗೆ ಯಾವ ಹುಡುಗನನ್ನೂ ಕೈ ಹಿಡಿದುಕೊಂಡು ಮಾತನಾಡಿಸಿಲ್ಲ. ಇಲ್ಲಿ ಯಾರೂ ಸಾಚಾ ಅಲ್ಲ. ಎಲ್ಲರೂ ಇದನ್ನು ಮಾಡಿಕೊಂಡಿರುತ್ತಾರೆ. ಆದರೆ ನಂದು ಹೊರಗೆ ಬಂತು. ನಾನು ಪಬ್​ಗೆ ಹೋಗುತ್ತೇನೆ. ಎಲ್ಲ ಕಡೆ ಎಂಜಾಯ್​ ಮಾಡ್ತೀನಿ. ಆದರೆ ನಮ್ಮ ಅಮ್ಮ ಹಳ್ಳಿ ಕಡೆಯಿಂದ ಬಂದೋರು. ಅವರು ಅಷ್ಟು ದುಡ್ಡು ಮಾಡಿಟ್ಟಿರುವುದು ನಮಗೋಸ್ಕರ. ನಾನು ಅವರ ಮಾನ ಮರ್ಯಾದೆ ತೆಗೆದೆ ಎಂಬ ಫೀಲ್​ ನನ್ನನ್ನು ತುಂಬ ಕಾಡುತ್ತಿದೆ’ ಎಂದಿದ್ದಾರೆ ಸೋನು ಶ್ರೀನಿವಾಸ್​ ಗೌಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:51 am, Mon, 8 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ