ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ (SSE Side B) ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ವಿಮರ್ಶಕರಿಂದ ಈ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. 2023ರ ನವೆಂಬರ್ 17ರಂದು ತೆರೆಕಂಡಿದ್ದ ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಫ್ಯಾನ್ಸ್ ಕಾಯುತ್ತಿದ್ದರು. ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್ ಪ್ರೈಂ ವಿಡಿಯೋ’ (Amazon Prime Video) ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಥಿಯೇಟರ್ನಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್ ಮಾಡಬಹುದು. ರಕ್ಷಿತ್ ಶೆಟ್ಟಿ (Rakshit Shetty) ಜೊತೆ ರುಕ್ಮಿಣಿ ವಸಂತ್ ಮತ್ತು ಚೈತ್ರಾ ಆಚಾರ್ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಪಾರ್ಟ್ನಲ್ಲಿ ಮೂಡಿಬಂತು. ಮೊದಲ ಭಾಗವನ್ನು ‘ಸೈಡ್ ಎ’ ಹಾಗೂ ಎರಡನೇ ಭಾಗವನ್ನು ‘ಸೈಡ್ ಬಿ’ ಎಂದು ಕರೆಯಲಾಯಿತು. ಒಂದು ಗಾಢವಾದ ಪ್ರೇಮಕಥೆ ಈ ಸಿನಿಮಾದಲ್ಲಿ ಇದೆ. ಹೇಮಂತ್ ಎಂ. ರಾವ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ‘ಸೈಡ್ ಎ’ ನೋಡಿ ಮೆಚ್ಚಿಕೊಂಡವರು ಈಗ ಒಟಿಟಿಯಲ್ಲಿ ‘ಸೈಡ್ ಬಿ’ ನೋಡಿ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: SSE Side B: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ತಂಡಕ್ಕೆ ‘ಕತ್ತೆ’ ಎಂದು ಹೊಗಳಿದ ಕಿಚ್ಚ ಸುದೀಪ್
ಜನವರಿ 25ರ ರಾತ್ರಿಯಿಂದಲೇ ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದೆ. ಈ ಬಗ್ಗೆ ಹೆಚ್ಚೇನೂ ಪ್ರಚಾರ ನೀಡಿಲ್ಲ. ಬಹುನಿರೀಕ್ಷಿತ ಸಿನಿಮಾದ ಒಟಿಟಿ ರಿಲೀಸ್ ವೇಳೆ ಚಿತ್ರತಂಡದವರು ಒಂದಷ್ಟು ಪ್ರಚಾರ ಮಾಡುವುದು ವಾಡಿಕೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಒಟಿಟಿ ರಿಲೀಸ್ ಕುರಿತು ಅಷ್ಟೇನೂ ಪ್ರಚಾರ ಮಾಡಲಾಗಿಲ್ಲ.
ಇದನ್ನೂ ಓದಿ: ಗಣರಾಜ್ಯೋತ್ಸವದ ಪ್ರಯುಕ್ತ ಒಟಿಟಿಯಲ್ಲಿ ‘ಅನಿಮಲ್’ ಸಿನಿಮಾ ಬಿಡುಗಡೆ
ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡಿದ್ದಾರೆ. ಪ್ರೀತಿಗಾಗಿ ಮತ್ತು ಪ್ರೀತಿಸಿದವಳಿಗಾಗಿ ಜೀವನದಲ್ಲಿ ಸಾಕಷ್ಟು ರಿಸ್ಕ್ಗಳನ್ನು ತೆಗೆದುಕೊಳ್ಳುವ ಆ ಪಾತ್ರವನ್ನು ರಕ್ಷಿತ್ ಶೆಟ್ಟಿ ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ನಾಯಕಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗೋಪಾಲಕೃಷ್ಣ ದೇಶಪಾಂಡೆ ಅವರು ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ್ ಗುರುಮೂರ್ತಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ