
‘ಸು ಫ್ರಮ್ ಸೋ’ ಸಿನಿಮಾ (Su From So) ಥಿಯೇಟರ್ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈಗ ಈ ಚಿತ್ರ ಸೆಪ್ಟೆಂಬರ್ 5ರಂದು ಒಟಿಟಿಗೆ ಬರಲಿದೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಆಗಲೇ ಇಲ್ಲ. ಸಿನಿಮಾ ಸದ್ಯ (ಸೆಪ್ಟೆಂಬರ್ 5 ಬೆಳಿಗ್ಗೆ 7 ಗಂಟೆ) ಒಟಿಟಿಗೆ ಇನ್ನೂ ಕಾಲಿಟ್ಟಿಲ್ಲ. ಜಿಯೋ ಹಾಟ್‌ಸ್ಟಾರ್ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಹೀಗಾಗಿ, ಸಿನಿಮಾ ರಿಲೀಸ್ ಮತ್ತಷ್ಟು ವಿಳಂಬ ಆಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.
‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಗಿತ್ತು. ಈ ಚಿತ್ರ ಸೂಪರ್ ಹಿಟ್ ಆಯಿತು. ಸಿನಿಮಾಗೆ ಬಾಯ್ಮಾತಿನ ಪ್ರಚಾರ ಸಾಕಾಯಿತು. ಈ ಚಿತ್ರವನ್ನು ಪ್ರೇಕ್ಷಕರು ದೊಡ್ಡ ಮಟ್ಟದಲ್ಲಿ ಗೆಲ್ಲಿಸಿದರು. ಈ ಕಾರಣದಿಂದಲೇ ಒಟಿಟಿ ಹಾಗೂ ಟಿವಿ ಪ್ರಸಾರ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟ ಆಗಿದೆ. ಇಂದು ಸಿನಿಮಾ ಒಟಿಟಿಗೆ ಬರಲಿದೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ.
ಯಾವುದೇ ಸಿನಿಮಾ ಒಟಿಟಿಗೆ ರಿಲೀಸ್ ಆಗುತ್ತದೆ ಎಂದಾದರೆ ಆ ಬಗ್ಗೆ ಒಟಿಟಿ ಪ್ಲಾಟ್ಫಾರ್ಮ್ ಮೊದಲೇ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಮಾಹಿತಿ ನೀಡಲಾಗುತ್ತದೆ. ‘ಸು ಫ್ರಮ್ ಸೋ’ ಸಿನಿಮಾ ವಿಚಾರದಲ್ಲಿ ಜಿಯೋ ಹಾಟ್‌ಸ್ಟಾರ್ ಆ ಬಗ್ಗೆ ಯಾವುದೇ ಅಪ್ಡೇಟ್ ನೀಡಿಲ್ಲ. ಇನ್ನು ಜೀಯೋ ಹಾಟ್‌ಸ್ಟಾರ್ ಪೋಸ್ಟ್ ಒಂದು ಅನುಮಾನ ಹುಟ್ಟಿಸುವಂತಿದೆ.
A new month, a fresh lineup of entertainment! What are you watching first? pic.twitter.com/b8yArOHd6O
— JioHotstar (@JioHotstar) September 1, 2025
ಸೆಪ್ಟೆಂಬರ್ನಲ್ಲಿ ಯಾವೆಲ್ಲ ಸಿನಿಮಾ, ಸೀರಿಸ್ ಹಾಗೂ ಶೋಗಳು ಬಿಡುಗಡೆ ಆಗುತ್ತಿವೆ ಎಂಬ ಬಗ್ಗೆ ಹಾಟ್‌ಸ್ಟಾರ್ ಮಾಹಿತಿ ನೀಡಿದೆ. ಆದರೆ, ಇದರಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ, ಇದು ಕೂಡ ಅನುಮಾನ ಮೂಡಿಸಿದೆ.
ಇದನ್ನೂ ಓದಿ: ‘ಸು ಫ್ರಮ್ ಸೋ’ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾತುಕತೆ ನಡೆದಿದೆಯಾ?
ಇನ್ನೂ ಕೆಲವು ವರದಿಗಳು ಸೆಪ್ಟೆಂಬರ್ 8ರಂದು ‘ಸು ಫ್ರಮ್ ಸೋ’ ಒಟಿಟಿಗೆ ಬರಲಿದೆ ಎಂದು ಹೇಳುತ್ತಿವೆ. ಆದರೆ, ಜಿಯೋ ಹಾಟ್‌ಸ್ಟಾರ್ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆದ ಬಳಿಕವೇ ಈ ವಿಚಾರ ತಿಳಿಯಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:57 am, Fri, 5 September 25