AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರುಪ್ಪು’ ಒಟಿಟಿ ಎಂಟ್ರಿಗೆ ಸಿಕ್ತು ದಿನಾಂಕ; ಡೇಟ್ ರಿವೀಲ್

ಸೂರ್ಯ ಅವರ ಬ್ಲಾಕ್‌ಬಸ್ಟರ್ 'ಕರುಪ್ಪು' ಸಿನಿಮಾ ಚಿತ್ರಮಂದಿರಗಳಲ್ಲಿ 300 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಅಬ್ಬರಿಸಿದೆ. ಇದೀಗ ಡಿಜಿಟಲ್ ಪ್ರೇಕ್ಷಕರ ಕಾಯುವಿಕೆ ಮುಗಿದಿದ್ದು, ಜೂನ್ 12 ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಈ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸ್ಟ್ರೀಮಿಂಗ್ ಆಗಲಿದೆ. ತಮಿಳು, ತೆಲುಗು ಜೊತೆಗೆ ಹಿಂದಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಮನೆಯಲ್ಲೇ ವೀಕ್ಷಿಸಿ ಆನಂದಿಸಬಹುದು.

‘ಕರುಪ್ಪು’ ಒಟಿಟಿ ಎಂಟ್ರಿಗೆ ಸಿಕ್ತು ದಿನಾಂಕ; ಡೇಟ್ ರಿವೀಲ್
ಕರುಪ್ಪು
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 08, 2026 | 11:50 AM

Share

ಕಾಲಿವುಡ್ ಸ್ಟಾರ್ ನಟ ಸೂರ್ಯ ಅವರ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುವ ಮೂಲಕ ದೀರ್ಘ ದಿನಗಳ ನಂತರ ಅವರಿಗೆ ಒಂದು ಅದ್ಭುತ ಸೂಪರ್ ಹಿಟ್ ತಂದುಕೊಟ್ಟಿದೆ. ಕಳೆದ ಮೇ 15 ರಂದು ತಮಿಳಿನಲ್ಲಿ ‘ಕರುಪ್ಪು’ ಹಾಗೂ ತೆಲುಗಿನಲ್ಲಿ ‘ವೀರಭದ್ರಡು’ ಹೆಸರಿನಲ್ಲಿ ಬಿಡುಗಡೆಯಾದ ಈ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ. ಇದು ನಟ ಸೂರ್ಯ ಅವರ ಇಡೀ ಚಿತ್ರಜೀವನದಲ್ಲೇ ಅತಿ ದೊಡ್ಡ ಹಿಟ್ ಸಿನಿಮಾವಾಗಿ ಹೊರಹೊಮ್ಮಿದ್ದು, ಬರೋಬ್ಬರಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಬಿಡುಗಡೆಯಾಗಿ ಮೂರು ವಾರಗಳು ಕಳೆದಿದ್ದರೂ ಸಹ ತಮಿಳುನಾಡಿನ ಪ್ರಮುಖ ಚಿತ್ರಮಂದಿರಗಳಲ್ಲಿ ಇಂದಿಗೂ ಉತ್ತಮ ಕಲೆಕ್ಷನ್‌ನೊಂದಿಗೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ ಈ ಸಿನಿಮಾವನ್ನು ಒಟಿಟಿಯಲ್ಲಿ ವೀಕ್ಷಿಸಲು ಡಿಜಿಟಲ್ ಪ್ರೇಕ್ಷಕರು ಮತ್ತು ಸೂರ್ಯ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಇದೀಗ ಅವರ ಕಾಯುವಿಕೆಗೆ ತೆರೆ ಬಿದ್ದಿದ್ದು, ‘ಕರುಪ್ಪು’ ಚಿತ್ರದ ಒಟಿಟಿ ಸ್ಟ್ರೀಮಿಂಗ್ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ವಿಶ್ವದ ಜನಪ್ರಿಯ ಒಟಿಟಿ ಸಂಸ್ಥೆಯಾದ ಅಮೆಜಾನ್ ಪ್ರೈಮ್ ವಿಡಿಯೋ (Amazon Prime Video) ಈ ಚಿತ್ರದ ಡಿಜಿಟಲ್ ಪ್ರಸಾರ ಹಕ್ಕುಗಳನ್ನು ಭಾರಿ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ. ಇತ್ತೀಚೆಗೆ ತನ್ನ ಆ್ಯಪ್‌ನಲ್ಲಿ ಈ ಬಗ್ಗೆ ಅಪ್ಡೇಟ್ ನೀಡಿರುವ ಅಮೆಜಾನ್ ಪ್ರೈಮ್, ಜೂನ್ 12 ರಿಂದ ಚಿತ್ರವನ್ನು ಪ್ರಸಾರ ಮಾಡುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ.

ಚಿತ್ರಮಂದಿರಗಳಲ್ಲಿ ಕೇವಲ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತ್ರ ಬಿಡುಗಡೆಯಾಗಿದ್ದ ಈ ಚಿತ್ರ, ಒಟಿಟಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಬಿಗ್ ಸರ್ಪ್ರೈಸ್ ನೀಡುತ್ತಿದೆ. ಚಿತ್ರಮಂದಿರಕ್ಕೆ ಬರಲು ಸಾಧ್ಯವಾಗದ ಬೇರೆ ಭಾಷೆಯ ಪ್ರೇಕ್ಷಕರನ್ನು ತಲುಪುವ ಉದ್ದೇಶದಿಂದ, ಒಟಿಟಿಯಲ್ಲಿ ತಮಿಳು ಮತ್ತು ತೆಲುಗು ಭಾಷೆಗಳ ಜೊತೆಗೆ ಹಿಂದಿಯಲ್ಲೂ ಈ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ ಎಂದು ವರದಿಯಾಗಿದೆ. ಹೀಗಾಗಿ ಜೂನ್ 12 ರಿಂದ ಮೂರೂ ಭಾಷೆಗಳ ಪ್ರೇಕ್ಷಕರು ಒಟ್ಟಿಗೆ ಮನೆಯಲ್ಲೇ ಕುಳಿತು ಈ ಅದ್ಭುತ ಆಕ್ಷನ್ ಥ್ರಿಲ್ಲರ್ ಸಿನಿಮಾವನ್ನು ಕಣ್ಣುಂಬಿಕೊಳ್ಳಬಹುದಾಗಿದೆ.

ಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅತ್ಯಂತ ಯಶಸ್ವಿ ನಿರ್ದೇಶಕ ಆರ್.ಜೆ. ಬಾಲಾಜಿ ಈ ‘ಕರುಪ್ಪು’ ಚಿತ್ರವನ್ನು ಅದ್ಧೂರಿಯಾಗಿ ನಿರ್ದೇಶಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಈ ಚಿತ್ರದಲ್ಲಿ ಸೂರ್ಯ ಅವರಿಗೆ ನಾಯಕಿಯಾಗಿ ಜೋಡಿಯಾಗಿದ್ದು, ಸ್ವತಃ ನಿರ್ದೇಶಕ ಆರ್.ಜೆ. ಬಾಲಾಜಿ ಅವರೇ ಚಿತ್ರದಲ್ಲಿ ಮುಖ್ಯ ಖಳನಾಯಕನ ಪಾತ್ರದಲ್ಲಿ ಅಬ್ಬರಿಸಿದ್ದಾರೆ.

ಇದನ್ನೂ ಓದಿ: 300 ಕೋಟಿ ಗಳಿಸಿದ ಮೇಲೆ ‘ಕರುಪ್ಪು’ ವಿವಾದ; ಸೂರ್ಯಗೆ ಅವಮಾನ

ಇವರ ಜೊತೆಗೆ ಇಂದ್ರನ್ಸ್, ಅನಘಾ, ಮನ್ಸೂರ್ ಅಲಿ ಖಾನ್, ಜಾರ್ಜ್ ಮರಿಯನ್ ಹಾಗೂ ಆಡುಕಲಂ ನರೇನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ಸಂಗೀತ ನಿರ್ದೇಶಕ ಸಾಯಿ ಅಭ್ಯಂಕರ್ ಅವರ ಹಿನ್ನೆಲೆ ಸಂಗೀತ ಚಿತ್ರದ ತೂಕವನ್ನು ಹೆಚ್ಚಿಸಿದೆ. ಒಂದು ವೇಳೆ ನೀವು ಈ ಚಿತ್ರವನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡಿದ್ದರೆ ಅಥವಾ ಮತ್ತೊಮ್ಮೆ ನೋಡಲು ಬಯಸಿದ್ದರೆ, ಇನ್ನು ಕೇವಲ ಮೂರೇ ದಿನ ಕಾಯಬೇಕಾಗಿದ್ದು, ಅಮೆಜಾನ್ ಪ್ರೈಮ್‌ನಲ್ಲಿ ನೋಡಿ ಆನಂದಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​