ಒಟಿಟಿಯಲ್ಲಿ ‘ಹನುಮಾನ್​’ ಸಿನಿಮಾ ನೋಡಲು ಕಾದಿದ್ದ ಪ್ರೇಕ್ಷಕರಿಗೆ ನಿರಾಸೆ

ಥಿಯೇಟರ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ ‘ಹನುಮಾನ್​’ ಸಿನಿಮಾವನ್ನು ಒಟಿಟಿಯಲ್ಲಿ ನೋಡಲು ಸಿನಿಪ್ರಿಯರು ಕಾಯುತ್ತಿದ್ದಾರೆ. ಆದರೆ ಅಂಥ ಪ್ರೇಕ್ಷಕರಿಗೆ ನಿರಾಸೆ ಆಗಿದೆ. ಮಾ.8ರಂದು ಈ ಸಿನಿಮಾ ಒಟಿಟಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ಬಗ್ಗೆ ಯಾವುದೇ ಅಪ್​ಡೇಟ್​ ಇಲ್ಲದ ಕಾರಣ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.

ಒಟಿಟಿಯಲ್ಲಿ ‘ಹನುಮಾನ್​’ ಸಿನಿಮಾ ನೋಡಲು ಕಾದಿದ್ದ ಪ್ರೇಕ್ಷಕರಿಗೆ ನಿರಾಸೆ
ತೇಜ ಸಜ್ಜಾ
Follow us
ಮದನ್​ ಕುಮಾರ್​
|

Updated on: Mar 07, 2024 | 4:12 PM

2024ರಲ್ಲಿ ಗೆಲುವು ಕಂಡಿರುವ ಕೆಲವೇ ಸಿನಿಮಾಗಳ ಪಟ್ಟಿಯಲ್ಲಿ ‘ಹನುಮಾನ್​’ ಸಿನಿಮಾ (Hanu Man Movie) ಕೂಡ ಇದೆ. ಈ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಲವು ಭಾಷೆಯಲ್ಲಿ ತೆರೆಕಂಡ ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಕಹಾನಿ ಇದೆ. ಕೆಲವರು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ಮಿಸ್​ ಮಾಡಿಕೊಂಡಿದ್ದಾರೆ. ಅನೇಕರು ಮತ್ತೊಮ್ಮೆ ಒಟಿಟಿಯಲ್ಲಿ (OTT) ನೋಡಲು ಬಯಸಿದ್ದಾರೆ. ಆದರೆ ಒಟಿಟಿಯಲ್ಲಿ ‘ಹನುಮಾನ್​’ ಸಿನಿಮಾವನ್ನು ನೋಡಬೇಕು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ಸಿನಿಮಾದ ಒಟಿಟಿ ರಿಲೀಸ್ (Hanu Man OTT Release)​ ತಡವಾಗಿದೆ.

ತೇಜ ಸಜ್ಜಾ ಅವರು ‘ಹನುಮಾನ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದು, ಪ್ರಶಾಂತ್​ ವರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ 50 ಡೇಸ್​ ಪೂರೈಸಿದೆ. ಈ ಕಾಲದಲ್ಲಿ ಯಾವುದೇ ಸಿನಿಮಾ 50 ದಿನ ಪ್ರದರ್ಶನ ಕಾಣುತ್ತದೆ ಎಂದರೆ ಅದು ನಿಜಕ್ಕೂ ಸಾಧನೆ. ಜನರಿಂದ ಇಷ್ಟೊಂದು ಮೆಚ್ಚುಗೆ ಪಡೆದ ಈ ಸಿನಿಮಾವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ವಿಘ್ನ ಎದುರಾದಂತಿದೆ.

ಇದನ್ನೂ ಓದಿ: 25 ದಿನಗಳಲ್ಲಿ 300 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’ ಸಿನಿಮಾ

‘ಹನುಮಾನ್​’ ಸಿನಿಮಾದ ಒಟಿಟಿ ರಿಲೀಸ್​ ಬಗ್ಗೆ ಕೆಲವೇ ದಿನಗಳ ಹಿಂದೆ ಒಂದು ಸುದ್ದಿ ಹರಿದಾಡಿತ್ತು. ಮಾರ್ಚ್​ 8ರಂದು ಈ ಸಿನಿಮಾದ ಸ್ಟ್ರೀಮಿಂಗ್​ ಆರಂಭ ಆಗಲಿದೆ ಎಂದು ಹೇಳಲಾಗಿತ್ತು. ವರದಿಗಳ ಪ್ರಕಾರ, ‘ಜೀ5’ ಬಳಿ ‘ಹನುಮಾನ್​’ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳು ಇವೆ. ಆದರೆ ಅಂದುಕೊಂಡ ದಿನಾಂಕ ಸಮೀಪಿಸಿದರೂ ಕೂಡ ಒಟಿಟಿ ರಿಲೀಸ್​ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಸೋಶಿಯಲ್​ ಮೀಡಿಯಾ ಬಳಕೆದಾರರೊಬ್ಬರು ‘ಹನುಮಾನ್​’ ಸಿನಿಮಾದ ಒಟಿಟಿ ರಿಲೀಸ್​ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ‘ಹನುಮಾನ್​ ಚಿತ್ರ ಒಟಿಟಿಯಲ್ಲಿ ಯಾವಾಗ ರಿಲೀಸ್​ ಆಗಲಿದೆ? ದಯವಿಟ್ಟು ಕನ್ಫರ್ಮ್​ ಮಾಡಿ’ ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ. ಅದಕ್ಕೆ ಉತ್ತರಿಸಿದ ‘ಜೀ5’ ಸಂಸ್ಥೆಯು ‘ಈ ಬಗ್ಗೆ ನಮಗೆ ಯಾವುದೇ ಅಪ್​ಡೇಟ್​ ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಮ್ಮ ಸೋಶಿಯಲ್​ ಮೀಡಿಯಾ ಖಾತೆ ಮತ್ತು ವೆಬ್​ಸೈಟ್​ ನೋಡುತ್ತಿರಿ’ ಎಂದು ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಹಿಂದಿಯಲ್ಲಿ ‘ಕೆಜಿಎಫ್​’ ಮಾಡಿದ್ದ ದಾಖಲೆ ಮುರಿದ ‘ಹನುಮಾನ್​’ ಸಿನಿಮಾ

‘ಹನುಮಾನ್​’ ಸಿನಿಮಾ ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಕನ್ನಡದ ನಟಿ ಅಮೃತಾ ಅಯ್ಯರ್​, ರಾಜ್​ ದೀಪಕ್​ ಶೆಟ್ಟಿ, ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಸೀಕ್ವೆಲ್​ ಕೂಡ ಸಿದ್ಧವಾಗುತ್ತಿದೆ. ಸೀಕ್ವೆಲ್​ಗೆ ‘ಜೈ ಹನುಮಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಸೀಕ್ವೆಲ್​ ಮೂಡಿಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್