ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಒಟಿಟಿ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ಜೀ5 ಮೂಲಕ ಈ ಸಿನಿಮಾ ಪ್ರಸಾರ ಆಗಲಿದೆ.

ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕಲಾವಿದರು
Follow us
TV9 Web
| Updated By: ಮದನ್​ ಕುಮಾರ್​

Updated on: Apr 19, 2022 | 9:50 AM

ಈ ವರ್ಷ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ ಸಿನಿಮಾಗಳಲ್ಲಿ ಒಂದಾದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಈಗ ಒಟಿಟಿಗೆ ಬರಲು ಸಜ್ಜಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡುವ ಕಾಲ ಹತ್ತಿರ ಆಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ (Vivek Agnihotri) ನಿರ್ದೇಶನ ಮಾಡಿದ್ದಾರೆ. ಕೊವಿಡ್​ ಬಳಿಕ ಮಂಕಾಗಿದ್ದ ಚಿತ್ರರಂಗಕ್ಕೆ ಈ ಸಿನಿಮಾದಿಂದ ದೊಡ್ಡ ಬೂಸ್ಟ್​ ಸಿಕ್ಕಿತು. ಮೊದಲ ದಿನ ಕೇವಲ 3.5 ಕೋಟಿ ರೂಪಾಯಿ ಸಂಪಾದನೆ ಮಾಡಿದ ಈ ಚಿತ್ರ ಅಂತಿಮವಾಗಿ 251 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವಲ್ಲಿ ಯಶಸ್ವಿ ಆಯಿತು. ಶೀಘ್ರದಲ್ಲೇ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಜೀ5 (Zee5) ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ವಿಶೇಷ ಏನೆಂದರೆ ಈ ಬಾರಿ ಬೇರೆ ಬೇರೆ ಭಾಷೆಗಳಿಗೆ ಡಬ್​ ಮಾಡಿ ಒಟಿಟಿಯಲ್ಲಿ ರಿಲೀಸ್​ ಮಾಡಲಾಗುತ್ತಿದೆ. ಮೂಲ ಹಿಂದಿಯಲ್ಲಿ ತಯಾರಾದ ಈ ಚಿತ್ರ ಕನ್ನಡ, ತಮಿಳು, ತೆಲುಗು ಭಾಷೆಗಳಿಗೆ ಡಬ್​ ಆಗಿದೆ.

ಒಂದು ಕಮರ್ಷಿಯಲ್​ ಸಿನಿಮಾದ ರೀತಿಯಲ್ಲೇ ಈ ಚಿತ್ರ ಗೆಲುವು ಕಂಡಿದೆ. ಈ ಸಿನಿಮಾದಲ್ಲಿ ಯಾವುದೇ ಸ್ಟಾರ್​ ಹೀರೋಗಳು ಅಭಿನಯಿಸಿಲ್ಲ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ಪ್ರಕಾಶ್​ ಬೆಳವಾಡಿ, ವಿಥುನ್​ ಚಕ್ರವರ್ತಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ತೆರೆಕಂಡಾಗ ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ರಾಜಕಾರಣಿಗಳು ಹೊಗಳಿದರು. ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಯಿತು. ಇದರಿಂದ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಯಿತು.

ಮಚ್ಚುಗೆ ಪಡೆಯುವುದರ ಜೊತೆಗೆ ಹಲವರಿಂದ ಈ ಸಿನಿಮಾದ ಬಗ್ಗೆ ಟೀಕೆ ಕೂಡ ವ್ಯಕ್ತವಾಯಿತು. ಇದರಲ್ಲಿ ಹಿಂಸೆಯ ವೈಭವೀಕರಣ ಆಗಿದೆ, ಕೋಮು ಭಾವನೆ ಮೂಡಿಸುತ್ತೆ ಎಂಬಿತ್ಯಾದಿ ಅಭಿಪ್ರಾಯಗಳು ಕೆಲವರಿಂದ ವ್ಯಕ್ತವಾದವು. ಈ ಎಲ್ಲ ಕಾರಣಗಳಿಂದಾಗಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅನೇಕರಿಗೆ ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಸಾಧ್ಯವಾಗಿಲ್ಲ. ಅವರೆಲ್ಲರೂ ಜೀ5 ಒಟಿಟಿ ಮೂಲಕ ವೀಕ್ಷಿಸಬಹುದು. ಯಾವ ದಿನಾಂಕದಲ್ಲಿ ಒಟಿಟಿ ಪ್ರೀಮಿಯರ್ ಆಗಲಿದೆ ಎಂಬ ಮಾಹಿತಿಯನ್ನು ಜೀ5 ಶೀಘ್ರದಲ್ಲೇ ಹಂಚಿಕೊಳ್ಳಲಿದೆ.

View this post on Instagram

A post shared by ZEE5 (@zee5)

ಸಿನಿಮಾ ನೋಡಿದ ಬಳಿಕ ‘ಇದು ನಮ್ಮ ಭಾಷೆಗೂ ಡಬ್​ ಆಗಬೇಕು’ ಎಂದು ಕನ್ನಡದ ಕೆಲವು ಪ್ರೇಕ್ಷಕರು ಅಪೇಕ್ಷಿಸಿದ್ದರು. ಡಬ್​ ಮಾಡಿದರೆ ಎಲ್ಲರಿಗೂ ಸುಲಭವಾಗಿ ಅರ್ಥ ಆಗುತ್ತದೆ ಹಾಗೂ ಹೆಚ್ಚು ಜನರನ್ನು ತಲುಪಬಹುದು ಎಂಬ ಕಾರಣದಿಂದ ಕನ್ನಡ ಮತ್ತು ಇತರೆ ಭಾಷೆಗಳಿಗೆ ಸಿನಿಮಾವನ್ನು ಡಬ್​ ಮಾಡಲಾಗಿದೆ. ಕನ್ನಡದಲ್ಲೇ ಈ ಚಿತ್ರವನ್ನು ನೋಡಬೇಕು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಈ ಗುಡ್​ ನ್ಯೂಸ್​ ಸಿಕ್ಕಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ

‘ಉರಿ’ ಚಿತ್ರವನ್ನೂ ಬೀಟ್​ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’; ಈವರೆಗೂ ಆಗಿರುವ ಕಲೆಕ್ಷನ್​ ಎಷ್ಟು?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ