‘ಕಾಂತಾರ 1’ ಇನ್ನೂ ಹಲವು, ಈ ವಾರ ಒಟಿಟಿಯಲ್ಲಿ ಭರ್ಜರಿ ಸಿನಿಮಾಗಳು
Ott release this week: ಈ ವಾರ ಒಟಿಟಿಯಲ್ಲಿ ಸಿನಿಮಾ ವೀಕ್ಷಿಸುವವರಿಗೆ ಹಬ್ಬವೋ ಹಬ್ಬ. ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳು ಈ ವಾರ ಒಟಿಟಿಗೆ ಬಂದಿವೆ. ‘ಕಾಂತಾರ: ಚಾಪ್ಟರ್ 1’, ‘ಲೋಕಃ’ ಸೇರಿದಂತೆ ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಸೂಪರ್ ಹಿಟ್ ಆದ ಸಿನಿಮಾಗಳು ಒಟಿಟಿಗೆ ಲಗ್ಗೆ ಇಟ್ಟಿವೆ. ಈ ವಾರದಿಂದ ಸ್ಟ್ರೀಮಿಂಗ್ ಆರಂಭಿಸಿದ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...
Updated on: Nov 01, 2025 | 8:51 AM

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವಾಗಲೇ ಏಕಾ-ಏಕಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಒಟಿಟಿಗೆ ಬಂದಿದೆ. ಅಕ್ಟೋಬರ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾ ತಿಂಗಳು ಕಳೆಯುವ ಮುಂಚೆ ಅಂದರೆ ನಿನ್ನೆ (ಅಕ್ಟೋಬರ್ 3) ಒಟಿಟಿ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಅನ್ನು ವೀಕ್ಷಿಸಬಹುದಾಗಿದೆ.

ಕನ್ನಡದಲ್ಲಿ ವೆಬ್ ಸರಣಿಗಳ ಕೊರತೆ ಇದೆ ಎನ್ನುವ ದೂರಿನ ನಡುವೆ ಈಗಾಗಲೇ ‘ಅಯ್ಯನ ಮನೆ’ ಗಮನ ಸೆಳೆದಿದೆ. ಇದೀಗ ‘ಮಾರುಗಲ್ಲು’ ಹೆಸರಿನ ಮತ್ತೊಂದು ಕನ್ನಡ ವೆಬ್ ಸರಣಿ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ ನಿರ್ಮಿಸಿರುವ ಈ ವೆಬ್ ಸರಣಿ ಜೀ 5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

‘ಲೋಕಃ’ ಇತ್ತೀಚೆಗೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆದ ಮಲಯಾಳಂ ಸಿನಿಮಾಗಳು. ಕಲ್ಯಾಣಿ ಪ್ರಿಯದರ್ಶನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಲೇಡಿ ಸೂಪರ್ ಹೀರೋ ಸಿನಿಮಾ. ಸಿನಿಮಾದ ಕತೆ ನಡೆಯುವುದು ಬೆಂಗಳೂರಿನಲ್ಲಿ. ಮಲಯಾಳಂ ಚಿತ್ರರಂಗದಲ್ಲಿ ದಾಖಲೆಗಳನ್ನು ಬರೆದ ಈ ಸಿನಿಮಾವನ್ನು ಹಾಟ್ಸ್ಟಾರ್ನಲ್ಲಿ ಹಲವು ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್ ನಟಿಸಿ ನಿರ್ದೇಶನವನ್ನೂ ಮಾಡಿರುವ ‘ಇಡ್ಲಿ ಕಡೈ’ ಸಿನಿಮಾ ಅಕ್ಟೋಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ‘ಕಾಂತಾರ’ ಎದುರು ಚಿತ್ರಮಂದಿರಗಳಲ್ಲಿ ಮಂಕಾದರೂ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಒಳ್ಳೆಯ ಫೀಲ್ ಗುಡ್ ಸಿನಿಮಾ ಆಗಿ ಗಮನ ಸೆಳೆದ ಈ ಸಿನಿಮಾವನ್ನು ಈಗ ನೆಟ್ಫ್ಲಿಕ್ಸ್ನಲ್ಲಿ ವೀಕ್ಷಿಸಬಹುದಾಗಿದೆ.

ಟೈಗರ್ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸಿ ಕನ್ನಡಿಗ ಹರ್ಷ ನಿರ್ದೇಶನ ಮಾಡಿರುವ ‘ಭಾಗಿ 4’ ಸಿನಿಮಾ ಸೆಪ್ಟೆಂಬರ್ 05 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಸಿನಿಮಾ ನಿರೀಕ್ಷಿತ ಪ್ರದರ್ಶನ ಕಂಡಿರಲಿಲ್ಲ. ಇದೀಗ ಸಿನಿಮಾ ಒಟಿಟಿಗೆ ಬಂದಿದ್ದು ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಹಾಲಿವುಡ್ನ ಬಲು ಭಯಾನಕ ಹಾರರ್ ಸಿನಿಮಾ ಸರಣಿಗಳಲ್ಲಿ ಒಂದಾದ ‘ಐಟಿ’ಯ ಹೊಸ ಸಿನಿಮಾ ‘ಐಟಿ: ವೆಲ್ಕಮ್ ಟು ಡೆರ್ರಿ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಈ ಸಿನಿಮಾ ಜಿಯೋ ಹಾಟ್ಸ್ಟಾರ್ನಲ್ಲಿ ಈ ವಾರದಿಂದ ವೀಕ್ಷಣೆಗೆ ಲಭ್ಯವಿದೆ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More




