AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ

Tollywood news: ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ
Ott Theater
ಮಂಜುನಾಥ ಸಿ.
|

Updated on: Feb 26, 2026 | 1:54 PM

Share

ಚಿತ್ರಮಂದಿರಕ್ಕೆ (Theater) ಜನ ಬರುತ್ತಿಲ್ಲ, ಸಿನಿಮಾಗಳ ಬಜೆಟ್ ಹೆಚ್ಚಾಗಿದೆ, ನಿರ್ಮಾಪಕರು ನಷ್ಟದಲ್ಲಿದ್ದಾರೆ ಎಂಬ ದೂರುಗಳು ಎಲ್ಲ ಚಿತ್ರರಂಗಗಳಿಂದಲೂ ಕೇಳಿ ಬರುತ್ತಿದೆ. ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಇನ್ನು ಮುಂದೆ ನಿರ್ಮಾಣ ಆಗುವ ಯಾವುದೇ ತೆಲುಗು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಎಂಟು ವಾರಗಳ ಬಳಿಕವಷ್ಟೆ ಒಟಿಟಿಯಲ್ಲಿ ಬಿಡುಗಡೆ ಆಗಬೇಕು ಎಂಬ ಶಿಸ್ತಿನ ಷರತ್ತನ್ನು ತೆಲುಗು ಸಿನಿಮಾ ಚೇಂಬರ್, ನಿರ್ಮಾಪಕರ ಸಂಘ ತೆಗೆದುಕೊಂಡಿದೆ. ಸುಮಾರು 40 ಮಂದಿ ಸಿನಿಮಾ ವಿತರಕರು, ಪ್ರದರ್ಶಕರು ಮತ್ತು ನಿರ್ಮಾಪಕರು ಸಭೆ ನಡೆಸಿ ಸಿನಿಮಾಗಳ ಒಟಿಟಿ ಬಿಡುಗಡೆ ಮೇಲೆ ನಿಯಂತ್ರಣ ಹೇರುವ ನಿರ್ಧಾರ ತೆಗೆದುಕೊಂಡಿದ್ದಾರೆ.

ತೆಲುಗು ಫಿಲಂ ಚೇಂಬರ್​​ನ ಎಕ್ಸಿಕ್ಯೂಟಿವ್ ಕಮಿಟಿ ಮುಂದೆ ನಿರ್ಧಾರವನ್ನು ಪ್ರಕಟಿಸಿದ್ದು, ಕಮಿಟಿಯಲ್ಲಿರುವ ನಿರ್ಮಾಪಕರು ಇತರೆ ಸದಸ್ಯರು ಸಹ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದು, ಇನ್ನು ಮುಂದೆ ನಿರ್ಮಾಣ ಆಗುವ ತೆಲುಗು ಸಿನಿಮಾಗಳು ಕಡ್ಡಾಯವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಎಂಟು ವಾರಗಳ ಬಳಿಕವೇ ಒಟಿಟಿಯಲ್ಲಿ ಬಿಡುಗಡೆ ಆಗಬೇಕು ಎಂದು ಆದೇಶಿಸಿದೆ. ಈ ಸಭೆಯಲ್ಲಿ ತೆಲುಗು ಚಿತ್ರರಂಗದ ಪ್ರಮುಖ ನಿರ್ಮಾಪಕರುಗಳಾದ ದಿಲ್ ರಾಜು, ಸುರೇಶ್ ಬಾಬು, ಸುನಿಲ್ ನಾರಂಗ್, ಠಾಗೂರ್ ಮಧು ಇನ್ನೂ ಹಲವರು ಭಾಗಿ ಆಗಿದ್ದರು.

ಇದನ್ನೂ ಓದಿ:ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ

ಈಗ ನಿರ್ಮಾಣ ಆಗಿರುವ ಸಿನಿಮಾಗಳು, ಈಗ ಶೇಕಡ 60% ಚಿತ್ರೀಕರಣ ಪೂರೈಸಿರುವ ಸಿನಿಮಾಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಆದರೆ ಈ ಮುಂದೆ ನಿರ್ಮಾಣಗೊಳ್ಳುವ ತೆಲುಗು ಸಿನಿಮಾಗಳಿಗೆ ಈ ನಿಯಮ ಅನ್ವಯಿಸಲಿದೆ. ಬಾಲಿವುಡ್​​ನಲ್ಲಿ ಈ ನಿಯಮ ಈಗಾಗಲೇ ಜಾರಿಯಲ್ಲಿದೆ. ತಮಿಳುನಾಡಿನಲ್ಲಿ ನಾಲ್ಕು ವಾರಗಳ ನಿಯಮ ಇದೆಯಾದರೂ ಕೆಲವು ಸಿನಿಮಾಗಳನ್ನು ಈ ನಿಯಮವನ್ನು ಮುರಿದ ಉದಾಹರಣೆಯೂ ಇದೆ. ಮಲಯಾಳಂ ಚಿತ್ರರಂಗದಲ್ಲಿ ಆರು ವಾರಗಳ ಬಳಿಕವಷ್ಟೆ ಒಟಿಟಿಯಲ್ಲಿ ಬಿಡುಗಡೆ ಮಾಡಬಹುದಾಗಿದೆ. ಕನ್ನಡದಲ್ಲಿ ನಿರ್ದಿಷ್ಟ ನಿಯಮ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!