AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಒಟಿಟಿ ರಿಲೀಸ್ ಬಗ್ಗೆ ಇಲ್ಲ ಅಪ್​ಡೇಟ್​; ಕಾಯುವಿಕೆಗೆ ಕೊನೆ ಯಾವಾಗ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಚಿತ್ರಮಂದಿರಗಳ ಪ್ರದರ್ಶನ ಮುಗಿಸಿ ಒಟಿಟಿ ಪ್ರವೇಶಕ್ಕೆ ಸಿದ್ಧವಾಗಿದೆ. ಆದರೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಲೈನ್‌ಅಪ್‌ನಲ್ಲಿ ಸಿನಿಮಾ ಇಲ್ಲದಿರುವುದರಿಂದ ಅಭಿಮಾನಿಗಳ ಕಾಯುವಿಕೆ ಮುಂದುವರಿದಿದೆ. ಪ್ರೇಕ್ಷಕರು ಈಗ ಅಧಿಕೃತ ಪ್ರಕಟಣೆಗಾಗಿ ಕಾಯುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಟಾಕ್ಸಿಕ್’ ಒಟಿಟಿ ರಿಲೀಸ್ ಬಗ್ಗೆ ಇಲ್ಲ ಅಪ್​ಡೇಟ್​; ಕಾಯುವಿಕೆಗೆ ಕೊನೆ ಯಾವಾಗ?
ಯಶ್
ರಾಜೇಶ್ ದುಗ್ಗುಮನೆ
|

Updated on:Oct 09, 2026 | 2:55 PM

Share

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ನಂತರ ಒಟಿಟಿಗೆ ಬರಲು ರೆಡಿ ಆಗಿದೆ. ‘ಕೆಜಿಎಫ್ 2’ ಸಕ್ಸಸ್ ನಂತರ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾದಿದ್ದರು. ಆದರೆ ಚಿತ್ರಮಂದಿರಗಳಲ್ಲಿ ಈ ಸಿನಿಮಾ ನಿರೀಕ್ಷೆ ತಲುಪಲು ವಿಫಲವಾಯಿತು. ಇದೀಗ ಚಿತ್ರದ ಒಟಿಟಿ ಬಿಡುಗಡೆ ಕುರಿತು ಮಹತ್ವದ ಅಪ್‌ಡೇಟ್ ಬಂದಿದೆ.

ಆರಂಭದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪ್ರಸಾರವಾಗಲಿದೆ ಎನ್ನಲಾಗಿತ್ತು. ಜೀ 5 ಪ್ಲಾಟ್‌ಫಾರ್ಮ್‌ನಲ್ಲಿ ಈ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ ಎಂಬ ವದಂತಿಗಳು ಬಲವಾಗಿದ್ದವು. ಆದರೆ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಪ್ರಸಾರ ಪಟ್ಟಿಯಲ್ಲಿ ಈ ಚಿತ್ರದ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಅಭಿಮಾನಿಗಳು ಡಿಜಿಟಲ್ ಪ್ರದರ್ಶನಕ್ಕಾಗಿ ಇನ್ನೂ ಕೆಲವು ದಿನ ಕಾಯುವುದು ಅನಿವಾರ್ಯವಾಗಿದೆ.

ಚಿತ್ರತಂಡವಾಗಲಿ ಅಥವಾ ಒಟಿಟಿ ಸಂಸ್ಥೆಯಾಗಲಿ ಅಧಿಕೃತ ಬಿಡುಗಡೆ ದಿನಾಂಕವನ್ನು ಇನ್ನು ಪ್ರಕಟಿಸಿಲ್ಲ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ನಯನತಾರಾ ಮತ್ತು ಕಿಯಾರಾ ಅಡ್ವಾಣಿ ಮುಖ್ಯ ಪಾತ್ರಗಳಲ್ಲಿದ್ದಾರೆ. ಜೊತೆಗೆ ತಾರಾ ಸುತಾರಿಯಾ, ಹುಮಾ ಖುರೇಷಿ ಹಾಗೂ ರುಕ್ಮಿಣಿ ವಸಂತ್ ಅವರಂತಹ ದೊಡ್ಡ ತಾರಾಗಣವೇ ಸಿನಿಮಾದಲ್ಲಿದೆ. ಭಾರಿ ಬಜೆಟ್‌ನಲ್ಲಿ ಕೆವಿಎನ್‌ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸಿತ್ತು. ಚಿತ್ರಕ್ಕೆ ರವಿಬಸ್ರೂರು ಹಿನ್ನೆಲೆ ಸಂಗೀತ ನೀಡಿದ್ದರು. ಈ ವಿಷಯದಲ್ಲಿ ಕೆಜಿಎಫ್ ಫ್ಯಾನ್ಸ್‌ಗೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ, ಇಲ್ಲಿಯೂ ನಿರೀಕ್ಷೆ ತಲುಪಿಲ್ಲ.

ಇನ್ನು ವೈಯಕ್ತಿಕ ವಿಚಾರಕ್ಕೆ ಬಂದರೆ ನಟಿ ಕಿಯಾರಾ ಅಡ್ವಾಣಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ದಂಪತಿ ಈ ಸಂತಸದ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ‘ಟಾಕ್ಸಿಕ್’ ಚೆಲುವೆ ಕಿಯಾರಾ ಅಡ್ವಾಣಿ

ಒಟ್ಟಾರೆಯಾಗಿ ಹೇಳುವುದಾದರೆ ‘ಟಾಕ್ಸಿಕ್’ ಒಟಿಟಿಗೆ ಯಾವಾಗ ಬರಲಿದೆ ಎಂಬ ಕುತೂಹಲ ಮುಂದುವರಿದಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಮಿಸ್ ಮಾಡಿಕೊಂಡ ಪ್ರೇಕ್ಷಕರು ಒಟಿಟಿ ಪ್ರಸಾರಕ್ಕಾಗಿ ಕಾಯುತ್ತಿದ್ದಾರೆ. ಅಧಿಕೃತ ದಿನಾಂಕ ಘೋಷಣೆಯಾದ ನಂತರವೇ ಸ್ಟ್ರೀಮಿಂಗ್ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ. ಯಶ್ ಅಭಿಮಾನಿಗಳು ಈಗ ಚಿತ್ರತಂಡದಿಂದ ಬರುವ ಅಧಿಕೃತ ಪ್ರಕಟಣೆಯ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Fri, 9 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More