UI Movie: ಒಟಿಟಿಗೆ ಬರಲಿದೆ ‘ಯುಐ’ ಸಿನಿಮಾ, ಎಲ್ಲಿ? ಯಾವಾಗ?

Upendra: ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಬಿಡುಗಡೆ ಆಗಿ ಎರಡು ವಾರವಾಗುತ್ತಾ ಬಂದಿದೆ. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಒಳ್ಳೆಯ ಅಭಿಪ್ರಾಯವೂ ವ್ಯಕ್ತವಾಗಿತ್ತು. ಆದರೆ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಇಂದಾಗಿ ಸಿನಿಮಾಕ್ಕೆ ಸಣ್ಣ ಹೊಡೆತ ಬಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ ಎನ್ನಲಾಗುತ್ತಿದೆ. ಎಲ್ಲಿ? ಯಾವಾಗ?

UI Movie: ಒಟಿಟಿಗೆ ಬರಲಿದೆ ‘ಯುಐ’ ಸಿನಿಮಾ, ಎಲ್ಲಿ? ಯಾವಾಗ?
Upendra Movie
Follow us
ಮಂಜುನಾಥ ಸಿ.
|

Updated on: Jan 02, 2025 | 1:06 PM

ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಡಿಸೆಂಬರ್ 20 ರಂದು ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ತೆರೆಗೆ ಬಂದಿದೆ. ಕನ್ನಡ ಪಾತ್ರವೇ ಅಲ್ಲದೆ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನಿರೀಕ್ಷೆಗೆ ತಕ್ಕಂತೆ ಉತ್ತಮ ಕಲೆಕ್ಷನ್ ಅನ್ನೇ ಮಾಡಿದ್ದು, ಕೆಲವೇ ದಿನಗಳ ಅಂತರದಲ್ಲಿ ಬಂದ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಿಂದಾಗಿ ಹೊಡೆತ ತಿಂದಿದೆ. ಇದೀಗ ‘ಯುಐ’ ಸಿನಿಮಾ ಒಟಿಟಿಗೆ ಬರುತ್ತಿದ್ದು, ಚಿತ್ರಮಂದಿರದಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

‘ಯುಐ’ ಸಿನಿಮಾ ಸನ್ ನೆಕ್ಟ್ಸ್ ಒಟಿಟಿಯಲ್ಲಿ ತೆರೆಗೆ ಬರಲಿದೆ ಎಂದು ವರದಿಯಾಗಿದೆ. ಸನ್ ನೆಕ್ಸ್ಟ್​, ‘ಯುಐ’ ಸಿನಿಮಾ ಸ್ಟ್ರೀಮ್ ಮಾಡುತ್ತಿರುವ ಬಗ್ಗೆ ಯಾವುದೇ ಸೋಷಿಯಲ್ ಮೀಡಿಯಾ ಪೋಸ್ಟ್​ಗಳನ್ನು ಹಂಚಿಕೊಂಡಿಲ್ಲವಾದರೂ ‘ಯುಐ’ ಸಿನಿಮಾ ಸನ್ ನೆಕ್ಟ್ಸ್ ನಲ್ಲಿ ಕೆಲವೇ ದಿನಗಳಲ್ಲಿ ಸ್ಟ್ರೀಂ ಆಗಲಿದೆ ಎಂಬ ಸುದ್ದಿಗಳು ಈಗಾಗಲೇ ಪ್ರಕಟವಾಗಿವೆ. ಉಪೇಂದ್ರ ನಟನೆಯ ‘ಮುಕುಂದ ಮುರಾರಿ’ ಸಹ ಸನ್ ನೆಕ್ಟ್ಸ್​ನಲ್ಲಿ ವೀಕ್ಷಣೆಗೆ ಈಗಾಗಲೇ ಲಭ್ಯವಿದೆ. ಇದೀಗ ‘ಯುಐ’ ಸಿನಿಮಾ ಸಹ ಸನ್ ನೆಕ್ಸ್ಟ್​ನಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಇದನ್ನೂ ಓದಿ:ಉಪೇಂದ್ರಗೆ ತಮ್ಮ ಈ ಸಿನಿಮಾವನ್ನು ಹಿಂದಿಗೆ ರೀಮೇಕ್ ಮಾಡುವಾಸೆ

ಸನ್ ನೆಕ್ಸ್ಟ್​, ತೆಲುಗು ಹಾಗೂ ತಮಿಳು ಪ್ರೇಕ್ಷಕರಿಗೆ ಮೆಚ್ಚಿನ ಒಟಿಟಿ ಆಗಿದ್ದು, ತಮಿಳು ಹಾಗೂ ತೆಲುಗಿನ ಹಲವು ಉತ್ತಮ ಸಿನಿಮಾಗಳು ಈ ಒಟಿಟಿಯಲ್ಲಿ ಬಿಡುಗಡೆ ಆಗಿವೆ. ಹಿಂದಿ ಮತ್ತು ಇಂಗ್ಲೀಷ್ ಸಿನಿಮಾಗಳು ಸಹ ಈ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿವೆ. ಇನ್ನು ‘ಯುಐ’ ಸನ್ ನೆಕ್ಟ್ಸ್ ಯಾವ ದಿನಾಂಕದಂದು ಬಿಡುಗಡೆ ಆಗಲಿದೆ ಎಂಬ ಬಗ್ಗೆ ಖಾತ್ರಿ ಇಲ್ಲ. ಪ್ರಕಟವಾಗಿರುವ ವರದಿಗಳ ಪ್ರಕಾರ ಇದೇ ತಿಂಗಳ 15ನೇ ತಾರೀಖಿನ ನಂತರ ‘ಯುಐ’ ಸಿನಿಮಾ ಸನ್ ನೆಕ್ಟ್ಸ್ ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ ಎನ್ನಲಾಗುತ್ತಿದೆ.

ಉಪೇಂದ್ರ ವರ್ಷಗಳ ಬಳಿಕ ಮತ್ತೆ ನಿರ್ದೇಶಕನ ಕ್ಯಾಪ್ ಧರಿಸಿದ ಸಿನಿಮಾ ‘ಯುಐ’. ಆಮಿರ್ ಖಾನ್, ತೆಲುಗಿನ ನಾಗಾರ್ಜುನ, ಅಲ್ಲು ಅರ್ಜುನ್ ಸೇರಿದಂತೆ ಇನ್ನೂ ಕೆಲವರು ಸಿನಿಮಾಕ್ಕೆ ಶುಭ ಹಾರೈಸಿದ್ದರು. ಬಿಡುಗಡೆ ಆದ ಮೊದಲ ದಿನವೇ ಅಂದಾಜು ಏಳು ಕೋಟಿ ರೂಪಾಯಿ ಗಳಿಸಿದ್ದ ಈ ಸಿನಿಮಾ ಈಗಲೂ ಉತ್ತಮ ಪ್ರದರ್ಶನವನ್ನೇ ಕಾಣುತ್ತಿದೆ. ತೆಲುಗು ಪ್ರೇಕ್ಷಕರಿಗೂ ಸಹ ‘ಯುಐ’ ಸಿನಿಮಾ ಇಷ್ಟವಾಗಿದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ರೀಶ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದರು. ಲಹರಿ ವೇಲು, ಕೆಪಿ ಶ್ರೀಕಾಂತ್ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.