AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್

ಉಪೇಂದ್ರ ನಟನೆಯ ಹಾಗೂ ನಿರ್ದೇಶನದ ‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿತು. ಈಗ ಒಟಿಟಿ ರಿಲೀಸ್ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಮಾರ್ಚ್ ಅಂತ್ಯಕ್ಕೆ ಜೀ5 ನಲ್ಲಿ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ, ಆದರೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.

ಒಟಿಟಿಯಲ್ಲಿ ‘ಯುಐ’ ಚಿತ್ರಕ್ಕಾಗಿ ಕಾದವರಿಗೆ ಸಿಹಿ ಸುದ್ದಿ? ಇಲ್ಲಿದೆ ಅಪ್​ಡೇಟ್
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Mar 06, 2025 | 12:39 PM

Share

ಉಪೇಂದ್ರ ನಟನೆಯ ಸಿನಿಮಾಗಳು ತಲೆಗೆ ಹುಳ ಬಿಡೋದು ಜಾಸ್ತಿ. ಅದೇ ರೀತಿ ಕಳೆದ ವರ್ಷ ಡಿಸೆಂಬರ್ 20ರಂದು ಥಿಯೇಟರ್​​ನಲ್ಲಿ ರಿಲೀಸ್ ಆದ ‘ಯುಐ’ ಸಿನಿಮಾ (UI Movie) ಸಾಕಷ್ಟು ಸದ್ದು ಮಾಡಿತು. ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಕಾದವರಿಗೆ ನಿರಾಸೆ ಉಂಟಾಗಿದೆ. ಈಗ ಕೊನೆಗೂ ಈ ವಿಚಾರದಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ‘ಯುಐ’ ಒಟಿಟಿಯಲ್ಲಿ ಬರಲಿದೆ ಎನ್ನಲಾಗುತ್ತಿದೆ.

ಜಗತ್ತು ಯಾವ ರೀತಿ ಆಗಿದೆ ಹಾಗೂ ಮುಂದೆ ಯಾವ ರೀತಿ ಆಗಬಹುದು ಎಂಬುದರ ಝಲಕ್ ‘ಯುಐ’ನಲ್ಲಿ ಇತ್ತು. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡರು. ಈ ಸಿನಿಮಾ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದಾರೆ. ಆದರೆ, ಸಿನಿಮಾ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈಗ ಈ ಬಗ್ಗೆ ವರದಿಗಳು ಹುಟ್ಟಿಕೊಂಡಿವೆ.

‘ಯುಐ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರ ಮಾರ್ಚ್ 30ರ ಸಮಯದಲ್ಲಿ ಜೀ5 ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಇಂಗ್ಲಿಷ್ ವೆಬ್​ಸೈಟ್​ಗಳಲ್ಲಿ ವರದಿ ಆಗಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಮೊದಲು ಕೂಡ ಇದೇ ರೀತಿಯ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ತಂಡ ಅಲ್ಲ ಗಳೆದಿತ್ತು.

ಇದನ್ನೂ ಓದಿ
Image
ಉಪೇಂದ್ರ ಮೆಚ್ಚಿದ ‘ಸೂರಿ ಲವ್ಸ್ ಸಂಧ್ಯಾ’ ಸಿನಿಮಾ ಮಾರ್ಚ್​ 6ಕ್ಕೆ ಬಿಡುಗಡೆ
Image
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
Image
ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
Image
ಟೆಲಿವಿಷನ್ ಪ್ರೀಮೀಯರ್​ಗೆ ‘ಮ್ಯಾಕ್ಸ್’ ಹಾಗೂ ‘ಯುಐ’ ರೆಡಿ; TRP ಕ್ಲ್ಯಾಶ್

‘ಯುಐ’ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರವನ್ನು ಜೀ ಕನ್ನಡ ವಾಹಿನಿಯವರು ಅಧಿಕೃತವಾಗಿ ಹಂಚಿಕೊಂಡಿದ್ದರು. ಆದರೆ, ಈವರೆಗೆ ಸಿನಿಮಾ ಟಿವಿಯಲ್ಲಿ ಪ್ರಸಾರ ಕಂಡಿಲ್ಲ. ಯುಗಾದಿ ಸಂದರ್ಭದಲ್ಲಿ ‘ಯುಐ’ ಚಿತ್ರ ಟಿವಿಯಲ್ಲಿ ಪ್ರಸಾರ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕಾಶಿನಾಥ್​ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ

ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪೇಂದ್ರ ಅವರದ್ದೇ ನಿರ್ದೇಶನ ಚಿತ್ರಕ್ಕೆ ಇದೆ. ಜಿ.ಮನೋಹರನ್, ಕೆಪಿ ಶ್ರೀಕಾಂತ್ ಮತ್ತು ಭೂಮಿಕಾ ಗೊಂಡಾಲಿಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಚ್​ಸಿ ವೇಣುಗೋಪಾಲ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಚಿತ್ರದ ಹಾಡುಗಳು ಹಿಟ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Thu, 6 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್