ಉಪೇಂದ್ರ ನಟನೆಯ ಸಿನಿಮಾಗಳು ತಲೆಗೆ ಹುಳ ಬಿಡೋದು ಜಾಸ್ತಿ. ಅದೇ ರೀತಿ ಕಳೆದ ವರ್ಷ ಡಿಸೆಂಬರ್ 20ರಂದು ಥಿಯೇಟರ್ನಲ್ಲಿ ರಿಲೀಸ್ ಆದ ‘ಯುಐ’ ಸಿನಿಮಾ (UI Movie) ಸಾಕಷ್ಟು ಸದ್ದು ಮಾಡಿತು. ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಕಾದವರಿಗೆ ನಿರಾಸೆ ಉಂಟಾಗಿದೆ. ಈಗ ಕೊನೆಗೂ ಈ ವಿಚಾರದಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರವೇ ‘ಯುಐ’ ಒಟಿಟಿಯಲ್ಲಿ ಬರಲಿದೆ ಎನ್ನಲಾಗುತ್ತಿದೆ.
ಜಗತ್ತು ಯಾವ ರೀತಿ ಆಗಿದೆ ಹಾಗೂ ಮುಂದೆ ಯಾವ ರೀತಿ ಆಗಬಹುದು ಎಂಬುದರ ಝಲಕ್ ‘ಯುಐ’ನಲ್ಲಿ ಇತ್ತು. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡರು. ಈ ಸಿನಿಮಾ ರಿಲೀಸ್ಗೆ ಅಭಿಮಾನಿಗಳು ಕಾದಿದ್ದಾರೆ. ಆದರೆ, ಸಿನಿಮಾ ತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈಗ ಈ ಬಗ್ಗೆ ವರದಿಗಳು ಹುಟ್ಟಿಕೊಂಡಿವೆ.
‘ಯುಐ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರ ಮಾರ್ಚ್ 30ರ ಸಮಯದಲ್ಲಿ ಜೀ5 ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಇಂಗ್ಲಿಷ್ ವೆಬ್ಸೈಟ್ಗಳಲ್ಲಿ ವರದಿ ಆಗಿದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಮೊದಲು ಕೂಡ ಇದೇ ರೀತಿಯ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ತಂಡ ಅಲ್ಲ ಗಳೆದಿತ್ತು.
‘ಯುಐ’ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರವನ್ನು ಜೀ ಕನ್ನಡ ವಾಹಿನಿಯವರು ಅಧಿಕೃತವಾಗಿ ಹಂಚಿಕೊಂಡಿದ್ದರು. ಆದರೆ, ಈವರೆಗೆ ಸಿನಿಮಾ ಟಿವಿಯಲ್ಲಿ ಪ್ರಸಾರ ಕಂಡಿಲ್ಲ. ಯುಗಾದಿ ಸಂದರ್ಭದಲ್ಲಿ ‘ಯುಐ’ ಚಿತ್ರ ಟಿವಿಯಲ್ಲಿ ಪ್ರಸಾರ ಕಾಣುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕಾಶಿನಾಥ್ಗೆ ಆ್ಯಸಿಡ್ ಹಾಕಲು ಬಂದಿದ್ದರು: ಭಯಾನಕ ಘಟನೆ ನೆನೆದ ಉಪೇಂದ್ರ
ಈ ಚಿತ್ರದಲ್ಲಿ ಉಪೇಂದ್ರ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಪೇಂದ್ರ ಅವರದ್ದೇ ನಿರ್ದೇಶನ ಚಿತ್ರಕ್ಕೆ ಇದೆ. ಜಿ.ಮನೋಹರನ್, ಕೆಪಿ ಶ್ರೀಕಾಂತ್ ಮತ್ತು ಭೂಮಿಕಾ ಗೊಂಡಾಲಿಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಚ್ಸಿ ವೇಣುಗೋಪಾಲ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಚಿತ್ರದ ಹಾಡುಗಳು ಹಿಟ್ ಆಗಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 12:39 pm, Thu, 6 March 25