AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ‘ವಲಿಮೈ’ ದಾಖಲೆ; ಒಂದೇ ನಿಮಿಷಕ್ಕೆ 10 ಕೋಟಿ ಸ್ಟ್ರೀಮಿಂಗ್

‘ವಲಿಮೈ’ ಚಿತ್ರದಲ್ಲಿ ಅಜಿತ್ ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಗ್ಸ್​ಗಾಗಿ ಯುವಕರು ಯಾವೆಲ್ಲಾ ಕೃತ್ಯಕ್ಕೆ ಇಳಿಯುತ್ತಾರೆ, ಅದನ್ನು ಹೀರೋ ಹೇಗೆ ಮೆಟ್ಟಿ ನಿಲ್ಲುತ್ತಾನೆ ಎಂಬ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ.

ಒಟಿಟಿಯಲ್ಲಿ ‘ವಲಿಮೈ’ ದಾಖಲೆ; ಒಂದೇ ನಿಮಿಷಕ್ಕೆ 10 ಕೋಟಿ ಸ್ಟ್ರೀಮಿಂಗ್
ವಲಿಮೈ
TV9 Web
| Edited By: |

Updated on: Mar 28, 2022 | 7:00 AM

Share

ಅಜಿತ್​ (Ajith) ನಟನೆಯ ‘ವಲಿಮೈ’ ಸಿನಿಮಾ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಜಿತ್​ ಬೈಕ್​ ಸ್ಟಂಟ್ಸ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು. ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಮಾರ್ಚ್​ 25ರಂದು ಚಿತ್ರ ಒಟಿಟಿಗೆ ಲಗ್ಗೆ ಇಟ್ಟಿದೆ. ಈ ಸಿನಿಮಾ ಒಟಿಟಿಗೆ ಬಂದ ಒಂದೇ ನಿಮಿಷಕ್ಕೆ ಹೊಸ ದಾಖಲೆ ಒಂದನ್ನು ಈ ಸಿನಿಮಾ ಬರೆದಿದೆ. ಒಂದೇ ನಿಮಿಷದಲ್ಲಿ ಬರೋಬ್ಬರಿ 10 ಕೋಟಿ ಸ್ಟ್ರೀಮಿಂಗ್ ಪಡೆದುಕೊಂಡಿದೆ. ಥಿಯೇಟರ್​ನಲ್ಲಿ ಅಜಿತ್​​ ಆ್ಯಕ್ಷನ್​ ಮಿಸ್ ಮಾಡಿಕೊಂಡವರು ಈ ಸಿನಿಮಾವನ್ನು ಜೀ5 ಆ್ಯಪ್​ನಲ್ಲಿ (Zee5 App) ಕಣ್ತುಂಬಿಕೊಳ್ಳುತ್ತಿದ್ದಾರೆ.

‘ವಲಿಮೈ’ ಚಿತ್ರದಲ್ಲಿ ಅಜಿತ್ ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಗ್ಸ್​ಗಾಗಿ ಯುವಕರು ಯಾವೆಲ್ಲಾ ಕೃತ್ಯಕ್ಕೆ ಇಳಿಯುತ್ತಾರೆ, ಅದನ್ನು ಹೀರೋ ಹೇಗೆ ಮೆಟ್ಟಿ ನಿಲ್ಲುತ್ತಾನೆ ಎಂಬ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ವಿಶೇಷ ಎಂದರೆ, ಈ ಚಿತ್ರಕ್ಕಾಗಿ ಅಜಿತ್​ ಡೂಪ್​ ಬಳಸದೆ, ತಾವೇ ಬೈಕ್​​ ಸ್ಟಂಟ್ಸ್​ ಮಾಡಿದ್ದಾರೆ. ಈ ​ ದೃಶ್ಯಗಳು ಮೈನವಿರೇಳಿಸುವಂತಿದೆ.

‘ವಲಿಮೈ’ ಸಿನಿಮಾದಲ್ಲಿ ಕೆಲವು ದೃಶ್ಯಗಳನ್ನು ಡಿಲೀಟ್ ಮಾಡಲಾಗಿತ್ತು. ಅದರ ಒಂದಷ್ಟು ದೃಶ್ಯಗಳನ್ನು ಜೀ5ನಲ್ಲಿ ಬಿಡುಗಡೆ ಮಾಡಲಾಗಿದೆ.  ಒಟಿಟಿಯಲ್ಲಿ ರಿಲೀಸ್ ಮಾಡಲು ಚಿತ್ರಕ್ಕೆ ಅದ್ದೂರಿಯಾಗಿ ಪ್ರಚಾರ ನೀಡಲಾಗಿತ್ತು. ಈ ಚಿತ್ರದ ಪ್ರಮೋಷನ್​ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ವಲಿಮೈ’ ಪೋಸ್ಟರ್​ಅನ್ನು ಜೀ5 ಬಿಡುಗಡೆ ಮಾಡಿತ್ತು. ಈ ಮೂಲಕ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗಿತ್ತು. ಸಿನಿಮಾ ಇತಿಹಾಸದಲ್ಲಿ ಇಲ್ಲಿಯವರೆಗೆ ಇಷ್ಟು ದೊಡ್ಡ ಪೋಸ್ಟರ್​ಅನ್ನು ಯಾರೂ ಬಿಡುಗಡೆ ಮಾಡಿರಲಿಲ್ಲ.

ಕನ್ನಡದಲ್ಲೂ ವೀಕ್ಷಿಸಬಹುದು

ಅಜಿತ್ ನಟನೆಯ ‘ವಲಿಮೈ’ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ. ತಮಿಳು ಮಾತ್ರವಲ್ಲದೆ, ತೆಲುಗು, ಹಿಂದಿ, ಕನ್ನಡ ಭಾಷೆಯಲ್ಲಿ ರಿಲೀಸ್ ಆಗಿತ್ತು. ಈಗ ಜೀ5 ನಲ್ಲಿ ನಾಲ್ಕೂ ಭಾಷೆಗಳಲ್ಲಿ ಸಿನಿಮಾ ಏಕಕಾಲಕ್ಕೆ ರಿಲೀಸ್​ ಆಗಿದೆ. ಹೀಗಾಗಿ, ನೀವು ಕನ್ನಡದಲ್ಲೇ ಸಿನಿಮಾ ವೀಕ್ಷಿಸಬಹುದು.

‘ವಲಿಮೈ’ ಚಿತ್ರದಲ್ಲಿ ಅಜಿತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಎಚ್. ವಿನೋದ್ ನಿರ್ದೇಶನ ಇದೆ. ಬೋನಿ ಕಪೂರ್ ಬಂಡವಾಳ ಹೂಡಿದ್ದಾರೆ. ಸುಮಾರು 150 ಕೋಟಿ ರೂ. ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಅಜಿತ್‌ ಜೊತೆಗೆ ಹುಮಾ ಖುರೇಷಿ, ಕಾರ್ತಿಕೇಯ ಗುಮ್ಮಕೊಂಡ, ಕನ್ನಡದ ನಟ ಅಚ್ಯುತ್ ಕುಮಾರ್ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ‘ವಲಿಮೈ’; ಅಜಿತ್​ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?

Box Office: ಗಳಿಕೆಯಲ್ಲಿ ಆಲಿಯಾ ಚಿತ್ರದ ಹೊಸ ಮೈಲಿಗಲ್ಲು; ‘ಏಕ್ ಲವ್ ಯಾ’, ‘ವಲಿಮೈ’, ‘ಭೀಮ್ಲಾ ನಾಯಕ್’ ಕಲೆಕ್ಷನ್ ಎಷ್ಟು? 

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?