AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drushyam 2 Teaser: ಬಿಡುಗಡೆಯಾಯ್ತು ವೆಂಕಟೇಶ್ ನಟನೆಯ ದೃಶ್ಯಂ 2 ಟೀಸರ್; ಚಿತ್ರದ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ

Venkatesh Daggubati: ಟಾಲಿವುಡ್​ನ ಖ್ಯಾತ ನಟ ವೆಂಕಟೇಶ್ ಕಾಣಿಸಿಕೊಂಡಿರುವ ‘ದೃಶ್ಯಂ 2’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಕುತೂಹಲ ಕೆರಳಿಸಿದೆ. ಚಿತ್ರದ ಬಿಡುಗಡೆಯ ಕುರಿತ ಮಾಹಿತಿ ಇಲ್ಲಿದೆ.

Drushyam 2 Teaser: ಬಿಡುಗಡೆಯಾಯ್ತು ವೆಂಕಟೇಶ್ ನಟನೆಯ ದೃಶ್ಯಂ 2 ಟೀಸರ್; ಚಿತ್ರದ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ
‘ದೃಶ್ಯಂ 2’ ಚಿತ್ರದಲ್ಲಿ ವೆಂಕಟೇಶ್
TV9 Web
| Updated By: shivaprasad.hs|

Updated on: Nov 12, 2021 | 3:44 PM

Share

ಮೋಹನ್​ಲಾಲ್ ನಟನೆಯ ‘ದೃಶ್ಯಂ’ ಚಿತ್ರ ಭಾರತದ ಹಲವು ಭಾಷೆಗಳಿಗೆ ರಿಮೇಕ್ ಆಗಿ ಭರ್ಜರಿ ಯಶಸ್ಸು ಗಳಿಸಿತ್ತು. ಅದರ ಮುಂದುವರೆದ ಭಾಗವಾಗಿ ಈಗಾಗಲೇ ಮಲಯಾಳಂನಲ್ಲಿ ‘ದೃಶ್ಯಂ 2’ ಬಿಡುಗಡೆಯಾಗಿ ಯಶಸ್ಸು ಗಳಿಸಿದೆ. ಇದೀಗ ಭಾರತದ ಇತರ ಭಾಷೆಗಳಿಗೂ ಚಿತ್ರ ರಿಮೇಕ್ ಆಗುತ್ತಿದ್ದು, ತೆಲುಗಿನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರತಂಡ ಈ ನಿಟ್ಟಿನಲ್ಲಿ ಬಹುದೊಡ್ಡ ನಿರ್ಧಾರ ಕೈಗೊಂಡು ನೇರವಾಗಿ ಒಟಿಟಿ ಮೂಲಕ ತೆರೆಗೆ ತರಲು ಯೋಚಿಸಿದೆ. ಇದೀಗ ಚಿತ್ರದ ಬಿಡುಗಡೆಯ ದಿನಾಂಕವೂ ಘೋಷಣೆಯಾಗಿದ್ದು, ನವೆಂಬರ್ 25ರಂದು ಆಮೆಜಾನ್ ಪ್ರೈಮ್ ವಿಡಿಯೋ ಮೂಲಕ ತೆರೆಗೆ ಬರಲಿದೆ. ಮಲಯಾಳಂನಲ್ಲಿ ‘ದೃಶ್ಯಂ 2’ ನಿರ್ದೇಶಿಸಿದ ಜೀತು ಜೋಸೆಫ್ ತೆಲುಗಿಗೂ ಆಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಟ ವೆಂಕಟೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದ್ದು, ಎಲ್ಲರ ಕುತೂಹಲ ಕೆರಳಿಸಿದೆ.

ತೆಲುಗಿನಲ್ಲಿ ಈ ಹಿಂದೆ ತೆರೆಕಂಡ ‘ದೃಶ್ಯಂ’ ಸೂಪರ್ ಹಿಟ್ ಆಗಿತ್ತು. ವೆಂಕಟೇಶ್ ರಾಂಬಾಬು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ದೃಶ್ಯಂ 2 ತೆರೆಗೆ ಬರಲಿದ್ದು, ಚಿತ್ರವನ್ನು ಡಿ.ಸುರೇಶ್ ಬಾಬು, ರಾಜ್​ಕುಮಾರ್ ಸೇತುಪತಿ ಮತ್ತು ಆಂಟೋನಿ ಪೆರುವಾಂಬೂರ್ ನಿರ್ಮಾಣ ಮಾಡಿದ್ದಾರೆ. ದೃಶ್ಯಂ 2 ಚಿತ್ರದ ಮೊದಲ ಮೋಷನ್ ಪೋಸ್ಟರ್ ಸೆಪ್ಟೆಂಬರ್​​ನಲ್ಲಿ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿತ್ತು. ಇದೀಗ ಚಿತ್ರತಂಡ 52 ಸೆಕೆಂಡ್​ಗಳ ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ದೃಶ್ಯಂ 2 ಚಿತ್ರದ ಟೀಸರ್ ಇಲ್ಲಿದೆ:

2021ರ ಏಪ್ರಿಲ್​ನಲ್ಲಿ ದೃಶ್ಯಂ 2 ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿತ್ತು. ಈ ಚಿತ್ರದಲ್ಲಿ ವೆಂಕಟೇಶ್ ಅವರೊಂದಿಗೆ ಮೀನಾ ಸಾಗರ್ ಬಣ್ಣ ಹಚ್ಚಿದ್ದಾರೆ. ಸೆನ್ಸಾರ್ ಸರ್ಟಿಫಿಕೇಟ್ ಈಗಾಗಲೇ ಲಭ್ಯವಾಗಿದ್ದು, ಯು ಪ್ರಮಾಣ ಪತ್ರ ದೊರೆತಿದೆ.

ಚಿತ್ರದ ಕುರಿತು ವೆಂಕಟೇಶ್ ಹಂಚಿಕೊಂಡ ಟ್ವೀಟ್:

ಮೂಲ ಮಲಯಾಳಂ ಚಿತ್ರದಲ್ಲಿ ಮೋಹನ್​ಲಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅಂಜಲಿ ನಾಯರ್ ಹಾಗೂ ಮೀನಾ ಕಾಣಿಸಿಕೊಂಡಿದ್ದರು. ಮಲಯಾಳಂನ ‘ದೃಶ್ಯಂ 2’ ಕೂಡ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಗಳಿಸಿತ್ತು.

ಇದನ್ನೂ ಓದಿ:

Marakkar: Lion of the Arabian Sea: ‘ಮರಕ್ಕರ್’ ಚಿತ್ರತಂಡದಿಂದ ಬಹುದೊಡ್ಡ ನಿರ್ಧಾರ; ಮೋಹನ್​ಲಾಲ್ ಅಭಿಮಾನಿಗಳಿಗೆ ಖುಷಿ ಸುದ್ದಿ

ಹಾಟ್ ಫೋಟೋದಲ್ಲಿ ಜಾನ್ವಿ ಕಪೂರ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ