AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ‘ಕಾಫಿ ವಿತ್​ ಕರಣ್​’ ಶೋ ಮೆರುಗು ಹೆಚ್ಚಿಸಿದ ವಿಜಯ್​ ದೇವರಕೊಂಡ; ಈ ಸಂಚಿಕೆ​ ಎಲ್ಲಕ್ಕಿಂತ ಇಂಟರೆಸ್ಟಿಂಗ್​

Vijay Devarakonda | Koffee With Karan 7: ‘ಕಾಫಿ ವಿತ್​ ಕರಣ್​’ ಲೇಟೆಸ್ಟ್​ ಸಂಚಿಕೆ ಬಗ್ಗೆ ಭಾರಿ ಹೈಪ್​ ಸೃಷ್ಟಿ ಆಗಿದೆ. ವಿಜಯ್​ ದೇವರಕೊಂಡ ಮತ್ತು ಅನನ್ಯಾ ಪಾಂಡೆಗೆ ಕರಣ್​ ಜೋಹರ್​ ಅವರು ಅನೇಕ ನೇರ ಪ್ರಶ್ನೆಗಳನ್ನು ಕೇಳಿದ್ದಾರೆ.

Vijay Deverakonda: ‘ಕಾಫಿ ವಿತ್​ ಕರಣ್​’ ಶೋ ಮೆರುಗು ಹೆಚ್ಚಿಸಿದ ವಿಜಯ್​ ದೇವರಕೊಂಡ; ಈ ಸಂಚಿಕೆ​ ಎಲ್ಲಕ್ಕಿಂತ ಇಂಟರೆಸ್ಟಿಂಗ್​
ವಿಜಯ್ ದೇವರಕೊಂಡ
TV9 Web
| Edited By: |

Updated on:Jul 27, 2022 | 9:31 AM

Share

ಜನಪ್ರಿಯ ‘ಕಾಫಿ ವಿತ್​ ಕರಣ್​’ (Koffee With Karan) ಟಾಕ್​ ಶೋ ಹೊಸ ರೂಪದಲ್ಲಿ ಬರುತ್ತಿದೆ. ಇಷ್ಟು ವರ್ಷಗಳ ಕಾಲ ಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಈ ಕಾರ್ಯಕ್ರಮ ಈಗ ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಒಟಿಟಿ ಮೂಲಕ ಪ್ರಸಾರ ಆಗುತ್ತಿದೆ. ಈವರೆಗೂ 6 ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿರುವ ಈ ಕಾರ್ಯಕ್ರಮದ 7ನೇ ಸೀಸನ್​ ಭರ್ಜರಿಯಾಗಿ ಮೂಡಿಬರುತ್ತಿದೆ. ನಿರೂಪಕ ಕರಣ್​ ಜೋಹರ್ (Karan Johar)​ ಅವರು ಎಂದಿನ ಜೋಶ್​ನಲ್ಲಿ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಪ್ರತಿ ಎಪಿಸೋಡ್​ನಲ್ಲಿ ಇಬ್ಬರು ಅತಿಥಿಗಳನ್ನು ಆಹ್ವಾನಿಸಲಾಗುತ್ತಿದೆ. 4ನೇ ಸಂಚಿಕೆಯಲ್ಲಿ ವಿಜಯ್​ ದೇವರಕೊಂಡ (Vijay Devarakonda) ಮತ್ತು ಅನನ್ಯಾ ಪಾಂಡೆ ಅವರು ಗೆಸ್ಟ್​ ಆಗಿ ಬಂದಿದ್ದಾರೆ. ಈ ಎಪಿಸೋಡ್​ ಜುಲೈ 28ರಂದು ರಾತ್ರಿ 7 ಗಂಟೆಗೆ ಪ್ರಸಾರ ಆಗಲಿದೆ.

ನೇರ ಪ್ರಶ್ನೆಗಳಿಂದಲೇ ‘ಕಾಫಿ ವಿತ್​ ಕರಣ್​’ ಶೋ ಫೇಮಸ್​ ಆಗಿದೆ. ಸೆಲೆಬ್ರಿಟಿಗಳ ಖಾಸಗಿ ಬದುಕಿನ ಬಗ್ಗೆ ಕರಣ್​ ಜೋಹರ್​ ಅವರು ಪ್ರಶ್ನೆ ಕೇಳುತ್ತಾರೆ. ಅವುಗಳಿಗೆ ಉತ್ತರಿಸಲು ನಟ-ನಟಿಯರು ಕೆಲವೊಮ್ಮೆ ಹಿಂದೇಟು ಹಾಕುತ್ತಾರೆ. ಇನ್ನೂ ಕೆಲವರು ತುಂಬ ಜಾಣತನದಿಂದ ಉತ್ತರಿಸಿ ಗಮನ ಸೆಳೆಯುತ್ತಾರೆ. ಈಗ ಕರಣ್​ ಜೋಹರ್ ಕೇಳಿದ ಅನೇಕ ಡೈರೆಕ್ಟ್​ ಪ್ರಶ್ನೆಗಳಿಗೆ ವಿಜಯ್​ ದೇವರಕೊಂಡ ಅವರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ
Image
‘ಇದು ಕ್ರಾಸ್ ಬ್ರೀಡ್’; ಆ್ಯಕ್ಷನ್​ ಮೂಲಕ ‘ಲೈಗರ್’ ಟ್ರೇಲರ್​ನಲ್ಲಿ ಮಿಂಚಿದ ವಿಜಯ್ ದೇವರಕೊಂಡ
Image
ವಿಜಯ್ ದೇವರಕೊಂಡ ಜತೆ ಡೇಟ್ ಮಾಡಲು ಸಾರಾ-ಜಾನ್ವಿ ನಡುವೆ ಸ್ಪರ್ಧೆ
Image
‘ಅಕ್ಡಿ ಪಕ್ಡಿ’ ಸಾಂಗ್ ಮೂಲಕ ಗಮನ ಸೆಳೆದ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ
Image
Vijay Devarakonda: ಹುಡುಗಿ ಬೆನ್ನಲ್ಲಿ ವಿಜಯ್​ ದೇವರಕೊಂಡ ಟ್ಯಾಟೂ; ನೆಚ್ಚಿನ ಹೀರೋ ಮುಂದೆ ಯುವತಿ ಆನಂದಭಾಷ್ಪ

‘ಲೈಗರ್​’ ಸಿನಿಮಾದಲ್ಲಿ ಅನನ್ಯಾ ಪಾಂಡೆ ಮತ್ತು ವಿಜಯ್​ ದೇವರಕೊಂಡ ಜೊತೆಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಕರಣ್​ ಜೋಹರ್​ ಕೂಡ ನಿರ್ಮಾಪಕರು. ಹಾಗಾಗಿ ತಮ್ಮ ಶೋಗೆ ಇಬ್ಬರನ್ನೂ ಜೋಡಿಯಾಗಿ ಅವರು ಆಹ್ವಾನಿಸಿದ್ದಾರೆ. ಈ ವೇಳೆ ಮದುವೆ, ರಿಲೇಷನ್​ಶಿಪ್​, ಸೆxಕ್ಸ್​ ಮುಂತಾದ ವಿಚಾರಗಳ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಎಪಿಸೋಡ್​ನ ಪ್ರೋಮೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ವಿಜಯ್​ ದೇವರಕೊಂಡ ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

View this post on Instagram

A post shared by Karan Johar (@karanjohar)

ವಿಜಯ್​ ದೇವರಕೊಂಡ ಅವರಿಗೆ ದೇಶಾದ್ಯಂತ ಬೇಡಿಕೆ ಇದೆ. ‘ಲೈಗರ್​’ ಚಿತ್ರದ ಮೂಲಕ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಆಗಸ್ಟ್​ 25ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ಹಿಂದಿ ಸೇರಿ ಹಲವು ಭಾಷೆಗಳಲ್ಲಿ ರಿಲೀಸ್​ ಆಗುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಪುರಿ ಜಗನ್ನಾಥ್​ ನಿರ್ದೇಶನ ಮಾಡಿದ್ದಾರೆ. ವಿಶ್ವವಿಖ್ಯಾತ ಬಾಕ್ಸರ್​ ಮೈಕ್​ ಟೈಸರ್​ ಅವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

Published On - 9:31 am, Wed, 27 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು