ವಿಜಯ್ ಸೇತುಪತಿ-ನಿತ್ಯಾ ಮೆನನ್ ಮಹತ್ವದ ನಿರ್ಧಾರ; ಅಭಿಮಾನಿಗಳಿಗೆ ಅಚ್ಚರಿ ತಂದ ತೀರ್ಮಾನ
Vijay Sethupathi | Nithya Menon: ವಿಜಯ್ ಸೇತುಪತಿ ನಟನೆಯ ಸಿನಿಮಾಗಳ ಬಗ್ಗೆ ಫ್ಯಾನ್ಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದೇ ರೀತಿ ನಿತ್ಯಾ ಮೆನನ್ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

ನಟ ವಿಜಯ್ ಸೇತುಪತಿ (Vijay Sethupathi) ಅವರು ಬಣ್ಣದ ಲೋಕದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ. ಹೀರೋ ಆಗಿ, ಖಳನಟನಾಗಿ, ಪೋಷಕ ಕಲಾವಿದನಾಗಿ ಅವರು ಶೈನ್ ಆಗಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವ ಪ್ರತಿಭೆ ಅವರಲ್ಲಿದೆ. ಹಾಗಾಗಿ ಅವರನ್ನು ಕಂಡರೆ ಅಭಿಮಾನಿಗಳಿಗೆ ಸಖತ್ ಇಷ್ಟ. ವಿಶೇಷವಾದ ಮ್ಯಾನರಿಸಂ ಮೂಲಕ ಅವರು ಪ್ರೇಕ್ಷಕರನ್ನು ಸೆಳೆದುಕೊಂಡಿದ್ದಾರೆ. ವಿಜಯ್ ಸೇತುಪತಿ ಸಿನಿಮಾ ರಿಲೀಸ್ ಆದರೆ ಚಿತ್ರಮಂದಿರಕ್ಕೆ ಜನರು ಮುಗಿಬೀಳುತ್ತಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರು ತೆಗೆದುಕೊಂಡಿರುವ ಒಂದು ನಿರ್ಧಾರದಿಂದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಕರೆತರುವ ಸಾಮರ್ಥ್ಯ ಇದ್ದರೂ ಕೂಡ ವಿಜಯ್ ಸೇತುಪತಿ ಅವರು ತಮ್ಮ ಮುಂದಿನ ಸಿನಿಮಾವನ್ನು ಒಟಿಟಿಯಲ್ಲಿ (OTT) ರಿಲೀಸ್ ಮಾಡಲು ನಿರ್ಧರಿಸಿದ್ದಾರೆ. ಅವರಿಗೆ ನಿತ್ಯಾ ಮೆನನ್ (Nithya Menon) ಸಾಥ್ ನೀಡಿದ್ದಾರೆ.
ವಿಜಯ್ ಸೇತುಪತಿ ಮತ್ತು ನಿತ್ಯಾ ಮೆನನ್ ಅವರು ‘19(1)(ಎ)’ ಸಿನಿಮಾದಲ್ಲಿ ನಟಿಸಿದ್ದಾರೆ. ಶೀರ್ಷಿಕೆ ಕಾರಣದಿಂದಲೇ ಈ ಚಿತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾವನ್ನು ಥಿಯೇಟರ್ನಲ್ಲಿ ರಿಲೀಸ್ ಮಾಡುವ ಬದಲು ನೇರವಾಗಿ ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಲಾಗಿದೆ. ‘ಡಿಸ್ನಿ ಪ್ಲಸ್ ಹಾಟ್ ಸ್ಟಾರ್’ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಸ್ಟ್ರೀಮಿಂಗ್ ಆರಂಭ ಆಗುವ ದಿನಾಂಕದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ವಿಜಯ್ ಸೇತುಪತಿ ತಿಳಿಸಿದ್ದಾರೆ.
ವಿಜಯ್ ಸೇತುಪತಿ ನಟನೆಯ ‘ವಿಕ್ರಮ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಕಮಲ್ ಹಾಸನ್ ಹೀರೋ ಆಗಿ ಅಭಿನಯಿಸಿದ ಆ ಚಿತ್ರದಲ್ಲಿ ವಿಜಯ್ ಸೇತುಪತಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಅವರ ಪಾತ್ರವನ್ನು ಕಂಡು ಫ್ಯಾನ್ಸ್ ಸಖತ್ ಎಂಜಾಯ್ ಮಾಡಿದ್ದಾರೆ. ಅವರ ಹೊಸ ಸಿನಿಮಾ ಕೂಡ ಥಿಯೇಟರ್ನಲ್ಲಿ ರಿಲೀಸ್ ಆಗಲಿ ಎಂದು ಪ್ರೇಕ್ಷಕರು ಬಯಸುವುದು ಸಹಜ. ಆದರೂ ಕೂಡ ‘19(1)(ಎ)’ ಸಿನಿಮಾವನ್ನು ಒಟಿಟಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿರುವುದು ಯಾಕೆ ಎಂದು ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ನಿತ್ಯಾ ಮೆನನ್ ಅವರಿಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಅವರು ‘19(1)(ಎ)’ ಚಿತ್ರದಲ್ಲಿ ಯಾವ ರೀತಿಯ ಪಾತ್ರ ಮಾಡಿದ್ದಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಇಂದೂ ವಿ.ಎಸ್. ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘96’ ಖ್ಯಾತಿಯ ಗೋವಿಂದ್ ವಸಂತ ಅವರ ಸಂಗೀತ ಈ ಸಿನಿಮಾಗಿದೆ.
Published On - 2:15 pm, Sun, 17 July 22