AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಡಿಬಿಯಲ್ಲಿ ಒಳ್ಳೆ ರೇಟಿಂಗ್ ಪಡೆದ ಈ ಹೊಸ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಬೇಡಿ

ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿರುವ ತೆಲುಗು ಕ್ರೈಮ್ ಥ್ರಿಲ್ಲರ್ ಸಿನಿಮಾ ಒಂದು ಉತ್ತಮ ರೇಟಿಂಗ್ ಪಡೆದಿದೆ. ಸರಣಿ ಕೊಲೆಗಳ ಕಥಾವಸ್ತುವನ್ನು ಹೊಂದಿರುವ ಈ ಚಿತ್ರವು ನವೀನ್ ಚಂದ್ರ ಅವರ ಅಭಿನಯವನ್ನು ಒಳಗೊಂಡಿದೆ. IMDB ಯಲ್ಲಿ 7.5 ರೇಟಿಂಗ್ ಪಡೆದ ಈ ಚಿತ್ರವು ವೀಕೆಂಡ್ ನಲ್ಲಿ ವೀಕ್ಷಿಸಲು ಉತ್ತಮ ಆಯ್ಕೆಯಾಗಿದೆ.

ಐಎಂಡಿಬಿಯಲ್ಲಿ ಒಳ್ಳೆ ರೇಟಿಂಗ್ ಪಡೆದ ಈ ಹೊಸ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಬೇಡಿ
ಇಲವೆನ್
ರಾಜೇಶ್ ದುಗ್ಗುಮನೆ
|

Updated on: Jun 20, 2025 | 12:54 PM

Share

ವೀಕೆಂಡ್ ಬಂತೆಂದರೆ ಯಾವ ಸಿನಿಮಾ ನೋಡಬೇಕು ಎಂಬ ಪ್ರಶ್ನೆ ಎಲ್ಲರಲ್ಲೂ ಕೊರೆಯುತ್ತದೆ. ಒಂದು ವರ್ಗದ ಜನರು ರೊಮ್ಯಾಂಟಿಕ್ ಸಿನಿಮಾಗಳನ್ನು ನೋಡಿದರೆ ಇನ್ನೊಂದು ವರ್ಗದ ಜನರಿಗೆ ಕ್ರೈಮ್ ಥ್ರಿಲ್ಲರ್ ಸಿನಿಮಾ ಇಷ್ಟ ಆಗುತ್ತದೆ. ಈಗ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಒಂದೊಳ್ಳೆಯ ಕ್ರೈಮ್ ಥ್ರಿಲ್ಲರ್ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಹೆಸರು ‘ಇಲವೆನ್’ (Eleven Movie). ತೆಲುಗು ಸಿನಿಮಾ ಇದಾಗಿದ್ದು, ಐಎಂಡಿಬಿಯಲ್ಲಿ ಒಳ್ಳೆಯ ರೇಟಿಂಗ್ ಪಡೆದುಕೊಂಡಿದೆ.

ಸಿನಿಮಾ ನೋಡೋದಕ್ಕೂ ಮೊದಲು ಐಎಂಡಿಬಿಯಲ್ಲಿ ಒಮ್ಮೆ ರೇಟಿಂಗ್ ಚೆಕ್ ಮಾಡಿಕೊಳ್ಳೋದನ್ನು ಅನೇಕರು ಮಾಡುತ್ತಾರೆ. 7+ ಇದ್ದರೆ ಸಿನಿಮಾನ ಒಮ್ಮೆ ನೋಡಲು ಯಾವುದೇ ಸಮಸ್ಯೆ ಇಲ್ಲ ಎಂದರ್ಥ. ‘ಇಲವೆನ್’ ಚಿತ್ರಕ್ಕೆ ಐಎಂಡಿಬಿಯಲ್ಲಿ 7.5 ರೇಟಿಂಗ್ ಸಿಕ್ಕಿದೆ. ಇದು ಪಕ್ಕಾ ಕ್ರೈಮ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ. ನವೀನ್ ಚಂದ್ರ ಅವರು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಕಥೆ ಏನು?

ಅದೊಂದು ನಗರ. ಅಲ್ಲಿ ಸರಣಿ ಕೊಲೆಗಳು ಆಗುತ್ತವೆ. ನಡೆದು ಸಾಗುತ್ತಿರುವ ವ್ಯಕ್ತಿಗಳು ಇದ್ದಕ್ಕಿದ್ದಂತೆ ಕಾಣೆ ಆಗಿ ಬಿಡುತ್ತಾರೆ. ಈ ಕೊಲೆ ಜಾಡು ಹಿಡಿದು ಹೋಗುವ ಪೊಲೀಸ್ ಒಬ್ಬನ ಕೊಲೆಯೂ ಆಗುತ್ತದೆ. ಕೊಲೆ  ಮಾಡುವ ವ್ಯಕ್ತಿ ಮುಖಕ್ಕೆ ವಿಚಿತ್ರ ಮುಖವಾಡ ಧರಿಸಿರುತ್ತಾನೆ. ಕೊಲೆ ಮಾಡೋ ವ್ಯಕ್ತಿ ಯಾರು? ಪೊಲೀಸರು ಇದನ್ನು ಹೇಗೆ ಕಂಡು ಹಿಡಿಯುತ್ತಾರೆ ಅನ್ನೋದು ಸಿನಿಮಾದ ಕಥೆ.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಇದನ್ನೂ ಓದಿ: ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ

‘ಇಲವೆನ್’ ಚಿತ್ರವನ್ನು ಲೋಕೇಶ್ ಅಜಿಲ್ಸ್ ನಿರ್ದೇಶನ ಮಾಡಿದ್ದಾರೆ. ಅಜ್ಮಲ್ ಖಾನ್, ರೆಯಾ ಹರಿ, ಮೊದಲಾದವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಜೆಟ್ 4 ಕೋಟಿ ರೂಪಾಯಿ. ಈ ಸಿನಿಮಾದ ಗಳಿಕೆ 6.8 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ತೆಲುಗು ಒಟಿಟಿ ಪ್ಲಾಟ್​ಫಾರ್ಮ್ ‘ಆಹ’ ಹಾಗೂ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿದೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ವೀಕೆಂಡ್​ನಲ್ಲಿ ಟೈಮ್​ಪಾಸ್ ಮಾಡಲು ನಿಮಗೆ ಒಂದೊಳ್ಳೆಯ ಸಿನಿಮಾ ಇದಾಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ