AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ಪಡೆದ ಸಿನಿಮಾಗಳನ್ನು ಎಲ್ಲಿ ನೋಡಬಹುದು? ಇಲ್ಲಿದೆ ಮಾಹಿತಿ

69 National Film Award: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಿನಿಮಾ, ನಟ-ನಟಿ, ತಂತ್ರಜ್ಞರ ಹೆಸರನ್ನು ನಿನ್ನೆ (ಆಗಸ್ಟ್ 25) ಘೋಷಿಸಲಾಗಿದೆ. ಪ್ರಶಸ್ತಿ ಗೆದ್ದ ಸಿನಿಮಾಗಳನ್ನು ಸಿನಿಮಾ ಆಸಕ್ತರು ನೋಡುವುದೆಲ್ಲಿ? ಇಲ್ಲಿದೆ ಮಾಹಿತಿ.

ರಾಷ್ಟ್ರ ಪ್ರಶಸ್ತಿ ಪಡೆದ ಸಿನಿಮಾಗಳನ್ನು ಎಲ್ಲಿ ನೋಡಬಹುದು? ಇಲ್ಲಿದೆ ಮಾಹಿತಿ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ಮಂಜುನಾಥ ಸಿ.
|

Updated on: Aug 25, 2023 | 8:06 PM

Share

ನಿನ್ನೆಯಷ್ಟೆ (ಆಗಸ್ಟ್ 25) 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (National Film Awards) ಘೋಷಣೆಯಾಗಿದೆ. ಕನ್ನಡದ ‘777 ಚಾರ್ಲಿ‘ (777 Charlie) ಸೇರಿದಂತೆ ವಿವಿಧ ಭಾಷೆಯ ಹಲವಾರು ಸಿನಿಮಾಗಳಿಗೆ ಪ್ರಶಸ್ತಿ ಘೋಷಣೆ ಆಗಿದೆ. ಅತ್ಯುತ್ತಮ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿಗಳಿಗೆ ಘೋಷಣೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಿನಿಮಾಗಳನ್ನು ಸಿನಿಮಾ ಆಸಕ್ತರು ಎಲ್ಲಿ ನೋಡಬಹುದು? ಯಾವ ಸಿನಿಮಾ ಯಾವ ಒಟಿಟಿಯಲ್ಲಿದೆ? ಇಲ್ಲಿದೆ ಮಾಹಿತಿ.

ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಜಿಯೋ ಸಿನಿಮಾ ಹಾಗೂ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಸ್ಟ್ರೀಮ್ ಆಗುತ್ತಿದೆ. ಅತ್ಯುತ್ತಮ ಮನೊರಂಜನಾ ಸಿನಿಮಾ ಪ್ರಶಸ್ತಿ ಪಡೆದ ‘ಆರ್​ಆರ್​ಆರ್’ ನೆಟ್​ಫ್ಲಿಕ್ಸ್, ಜೀ5 ಹಾಗೂ ಹಾಟ್​ಸ್ಟಾರ್ ಮೂರೂ ಒಟಿಟಿಗಳಲ್ಲಿ ವಿವಿಧ ಭಾಷೆಗಳಲ್ಲಿ ಸ್ಟ್ರೀಂ ಆಗುತ್ತಿದೆ. ಪ್ರಾದೇಶಿಕ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಪಡೆದ ‘777 ಚಾರ್ಲಿ’ ವೂಟ್​ನಲ್ಲಿ ಸ್ಟ್ರೀಂ ಆಗುತ್ತಿದೆ.

ಇದನ್ನೂ ಓದಿ:ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಗಂಗೂಬಾಯಿ ಕಾಠಿವಾಡಿಗೆ ನಾಲ್ಕು ಪ್ರಶಸ್ತಿ, ಆರ್​ಆರ್​ಆರ್​ಗೆ ಸಿಕ್ಕಿದ್ದೆಷ್ಟು?

ಅಲ್ಲು ಅರ್ಜುನ್​ಗೆ ಅತ್ಯುತ್ತಮ ನಟ ಪ್ರಶಸ್ತಿ ತಂದುಕೊಟ್ಟ ‘ಪುಷ್ಪ’ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೋಡಬಹುದಾಗಿದೆ. ಆಲಿಯಾ ಭಟ್​ಗೆ ಅತ್ಯುತ್ತಮ ನಟಿ ಪ್ರಶಸ್ತಿ ಹಾಗೂ ಇತರೆ ಮೂರು ವಿಭಾಗದಲ್ಲಿ ಪ್ರಶಸ್ತಿ ಗೆದ್ದ ‘ಗಂಗೂಬಾಯಿ ಕಾಠಿಯಾವಾಡಿ’ ನೆಟ್​ಫ್ಲಿಕ್ಸ್​ನಲ್ಲಿದೆ. ಅತ್ಯುತ್ತಮ ನಟಿ ಹಾಗೂ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಗೆದ್ದ ‘ಮಿಮಿ’ ಸಿನಿಮಾ ಸಹ ನೆಟ್​ಫ್ಲಿಕ್ಸ್​ನಲ್ಲಿ ಸ್ಟ್ರೀಂ ಆಗುತ್ತಿದೆ. ಹೆಚ್ಚು ಪ್ರಶಸ್ತಿ ಬಾಚಿಕೊಂಡ ಸಿನಿಮಾಗಳಲ್ಲಿ ಒಂದಾದ ‘ಸರ್ದಾರ್ ಉದ್ಧಮ್’ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತೀರ್ಪುಗಾರರ ವಿಶೇಷ ಮೆಚ್ಚುಗೆ ಪ್ರಶಸ್ತಿ ಪಡೆದ ‘ಶೇರ್ಷಾ’ ಸಿನಿಮಾ ಅಮೆಜಾನ್ ಪ್ರೈಂನಲ್ಲಿದೆ. ನ್ಯಾಷನಲ್ ಇಂಟಿಗ್ರಿಟಿ ಪ್ರಶಸ್ತಿ ಪಡೆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಜೀ5 ನಲ್ಲಿ ಸ್ಟ್ರೀಂ ಆಗುತ್ತಿದೆ. ಅತ್ಯುತ್ತಮ ಬಾಲ ನಟ ಪ್ರಶಸ್ತಿ ಪಡೆದ ‘ಚೆಲ್ಲೊ ಶೋ’ ಗುಜರಾತಿ ಸಿನಿಮಾ ಅಮೆಜಾನ್ ಪ್ರೈಂನಲ್ಲಿದೆ. ಅತ್ಯುತ್ತಮ ತೆಲುಗು ಸಿನಿಮಾ ಪ್ರಶಸ್ತಿ ಪಡೆದ ‘ಉಪ್ಪೆನ’ ನೆಟ್​ಫ್ಲಿಕ್ಸ್, ತಮಿಳು ಸಿನಿಮಾ ‘ಕಡೈಸಿ ವ್ಯವಸಾಯಿ’ ಸೋನಿ ಲಿವ್, ಮಲಯಾಳಂ ಸಿನಿಮಾ ‘ಹೋಮ್’ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಂ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?