AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಕಾಳಜಿಯ ಕನ್ನಡ ಸಿನಿಮಾ ‘ವಿಸ್ಪರ್ಸ್ ಆಫ್ ದಿ ರಿವರ್’ ಸದ್ಯದಲ್ಲೇ ರಿಲೀಸ್

ಸಾಮಾಜಿಕ ಕಳಕಳಿಯ ಹೊಂದಿರುವ ಕನ್ನಡದ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಗ್ರಾಮೀಣ ಬದುಕು, ಕೃಷಿಕರ ದಿನನಿತ್ಯದ ಆಚರಣೆಗಳು, ಜನಪದ ಕಥೆ, ಯಕ್ಷಗಾನ ಮುಂತಾದ ಅಂಶಗಳು ಈ ಸಿನಿಮಾದಲ್ಲಿದೆ. ಹಳ್ಳಿಯ ಸಮೂಹ ಜೀವನದ ಬಗ್ಗೆ ಕೂಡ ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ.

ಪರಿಸರ ಕಾಳಜಿಯ ಕನ್ನಡ ಸಿನಿಮಾ ‘ವಿಸ್ಪರ್ಸ್ ಆಫ್ ದಿ ರಿವರ್’ ಸದ್ಯದಲ್ಲೇ ರಿಲೀಸ್
Whispers Of The River Movie Poster
ಮದನ್​ ಕುಮಾರ್​
|

Updated on: Feb 25, 2026 | 8:21 PM

Share

ಒಂದು ಅಪರೂಪದ ಸಾಮಾಜಿಕ ಚಿತ್ರವಾಗಿ ‘ವಿಸ್ಪರ್ಸ್ ಆಫ್ ದಿ ರಿವರ್’ (Whispers of the River) ಸಿನಿಮಾ ಮೂಡಿಬಂದಿದೆ. ಕನ್ನಡ ಚಿತ್ರರಂಗದಲ್ಲಿ ತರಹೇವಾರಿ ಸಿನಿಮಾಗಳು ಬರುತ್ತಿವೆ. ಲವ್, ಕ್ರೈಮ್, ಸಸ್ಪನ್ಸ್, ಹಾರರ್ ಹೀಗೆ ಅನೇಕ ಪ್ರಕಾರದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಎಲ್ಲಾ ಸಿನಿಮಾಗಳ ನಡುವೆ ವಿಭಿನ್ನ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಸಿದ್ಧವಾಗಿದೆ. ಕೆ. ಪ್ರಭಾಕರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

ಈ ಸಿನಿಮಾದಲ್ಲಿ ಮಂಜುನಾಥ್ ಪೈ ಅವರು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ನಟನೆ ಜೊತೆಗೆ ಮಂಜುನಾಥ್ ಪೈ ಅವರೇ ಚಿತ್ರಕಥೆಯನ್ನು ಬರೆದಿದ್ದಾರೆ. ಈ ಸಿನಿಮಾವನ್ನು ಸ್ನೇಹಿತರಾದ ರಾಧಾಕೃಷ್ಣ ಪೈ, ಶ್ರೀರಾಮ್ ಸಿ, ವಿವೇಕ್ ವಿನ್ಸೆಂಟ್ ಸೇರಿ ‘ಮೀನಾಸ್ ಸ್ಟುಡಿಯೋ’ ಬ್ಯಾನರ್ ಮೂಲಕ ನಿರ್ಮಿಸಿದ್ದಾರೆ. ರೈತರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ವೃತ್ತಿಪರರು, ಸಿನಿಮಾ ತಂತ್ರಜ್ಞರು ಮತ್ತು ನಾಟಕ ಕಲಾವಿದರೆಲ್ಲರು ಒಟ್ಟಿಗೆ ಸೇರಿ ಈ ಸಿನಿಮಾವನ್ನು ರೂಪಿಸಿದ್ದಾರೆ.

ನದಿಗಳೊಂದಿಗೆ ನಮ್ಮ ಸಂಬಂಧವನ್ನು ಮರುಪರಿಶೀಲಿಸುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಾಗಿದೆ. ನದಿಗಳನ್ನು ಉಳಿಸುವ ಬಗ್ಗೆ ಭಾವನಾತ್ಮಕವಾಗಿ ಈ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ಇತ್ತೀಚೆಗೆ ಬಿಡುಗಡೆ ಆಗಿರುವ ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಪ್ರೀಮಿಯರ್ ಶೋಗಳಲ್ಲಿ ಸಿನಿ ಗಣ್ಯರು ಹಾಗೂ ಪ್ರೇಕ್ಷಕರಿಂದ ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ ಎಂದು ಚಿತ್ರತಂಡ ಹೇಳಿದೆ.

‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾದ ಬಗ್ಗೆ ಹೇಳುವುದಾರೆ, ಕೃಷಿಗೆ ಸಂಬಂಧಿತ ವ್ಯವಹಾರವನ್ನು ವಿಸ್ತರಿಸುವ ಕನಸನ್ನು ಹೊಂದಿರುವ ಮಗ ಕೆಲಸ ಬಿಟ್ಟು ಊರಿಗೆ ಮರಳುತ್ತಾನೆ. ಆದರೆ ತಂದೆ-ಮಗನ ನಡುವಿನ ವಿಭಿನ್ನ ದೃಷ್ಟಿಕೋನಗಳು ಸಂಘರ್ಷಕ್ಕೆ ಕಾರಣವಾಗುತ್ತವೆ. ಬಳಿಕ ಮಗ ಮಣ್ಣು, ನದಿ ಹಾಗೂ ಮೂಲ ಮೌಲ್ಯಗಳೊಂದಿಗೆ ಬಾಂಧವ್ಯ ಬೆಳಸಿಕೊಳ್ಳುತ್ತಾನೆ. ಹೀಗೆ ಸಾಗುತ್ತದೆ ಕಥೆ.

ಇದನ್ನೂ ಓದಿ: ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ

ಈ ಸಿನಿಮಾಗೆ ರೋಹಿತ್ ಪೂಜಾರಿ ಸಂಗೀತ ನೀಡಿದ್ದಾರೆ. ಕೆ. ಸತ್ಯರಾಜ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಶಬಾನಾ, ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಮತ್ತು ದಿ. ಪ್ರಭಾಕರ್ ಕಲ್ಯಾಣಿ ನಟಿಸಿದ್ದಾರೆ. ಈ ಸಿನಿಮಾ ಶೀಘ್ರದಲ್ಲೇ ಒಟಿಟಿ ಮೂಲಕ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ