Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?

Bigg Boss OTT kannada: ‘ಜಿಂಗಲಕಾ ಲಕಾ ಲಕಾ..’ ಈ ವಾಕ್ಯ ಕೇಳಿದ ತಕ್ಷಣ ನೆನಪಿಗೆ ಬರೋದು ಆರ್ಯವರ್ಧನ್ ಹೆಸರು. ಈ ಡೈಲಾಗ್ ಮೂಲಕ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ದೊಡ್ಡ ಸಂಖ್ಯೆಯ ಮಂದಿ ಹಿಂಬಾಲಿಸುತ್ತಾರೆ.

Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 06, 2022 | 6:02 PM

Bigg Boss OTT Kannada Season 1: ‘ಬಿಗ್ ಬಾಸ್ ಒಟಿಟಿ’ಗೆ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರ ಎಂಟ್ರಿ ಆಗಿದೆ. ಮೊದಲ ಸ್ಪರ್ಧಿಯಾಗಿ ಅವರು ದೊಡ್ಮನೆ ಸೇರಿದ್ದಾರೆ. ಆರ್ಯವರ್ಧನ್ ಅವರು ಸದಾ ಟ್ರೋಲ್ ಆಗುವ ಮೂಲಕವೇ ಹೆಚ್ಚು ಸುದ್ದಿ ಆಗಿದ್ದಾರೆ. ಅವರು ಜ್ಯೋತಿಷ್ಯ ಶಾಸ್ತ್ರವನ್ನೂ ಹೇಳುತ್ತಾರೆ. ಐಪಿಎಲ್ ಸಂದರ್ಭದಲ್ಲಿ ಅವರು ನೀಡುತ್ತಿದ್ದ ಪ್ರಿಡಿಕ್ಷನ್ ಸಾಕಷ್ಟು ಸುದ್ದಿ ಆಗುತ್ತಿತ್ತು. ಈ ವಿಚಾರದಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದರು. ಈಗ ಆರ್ಯವರ್ಧನ್ ಅವರು ಬಿಗ್ ಬಾಸ್ ಮನೆ ಸೇರಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

‘ಜಿಂಗಲಕಾ ಲಕಾ ಲಕಾ..’ ಈ ವಾಕ್ಯ ಕೇಳಿದ ತಕ್ಷಣ ನೆನಪಿಗೆ ಬರೋದು ಆರ್ಯವರ್ಧನ್ ಹೆಸರು. ಈ ಡೈಲಾಗ್ ಮೂಲಕ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ದೊಡ್ಡ ಸಂಖ್ಯೆಯ ಮಂದಿ ಹಿಂಬಾಲಿಸುತ್ತಾರೆ. ಈಗ ‘ಬಿಗ್ ಬಾಸ್​ ಒಟಿಟಿ’ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಲಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೋಲುವ ಮೂರ್ತಿ; ಪ್ರತಿ ವಿಚಾರಕ್ಕೂ ವಿವರಣೆ ನೀಡಿದ ಕಿಚ್ಚ
Image
Bigg Boss OTT: ‘ಬಿಗ್ ಬಾಸ್​ ಒಟಿಟಿ’ಗೆ ವಾಸುಕಿ ವೈಭವ್ ಎಂಟ್ರಿ; ಮಾಜಿ ಸ್ಪರ್ಧಿ ಕಂಡು ಫ್ಯಾನ್ಸ್ ಖುಷ್
Image
Bigg Boss OTT Kannada: ಈ ಬಾರಿಯ ‘ಬಿಗ್ ಬಾಸ್ ಒಟಿಟಿ’ ಪ್ರಸಾರ ಎಷ್ಟು ಗಂಟೆಗೆ, ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಉತ್ತರ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ

ಐಪಿಎಲ್ ಸಂದರ್ಭದಲ್ಲಿ ಖಾಸಗಿ ವಾಹಿನ ನಡೆಸಿಕೊಡುವ ಶೋಗೆ ಅವರು ತೆರಳುತ್ತಿದ್ದರು. ಐಪಿಎಲ್​ನಲ್ಲಿ ಯಾವ ತಂಡ ಗೆಲ್ಲುತ್ತದೆ, ಯಾರು ಹೆಚ್ಚು ರನ್ ಬಾರಿಸುತ್ತಾರೆ, ಯಾರು ಹೆಚ್ಚು ವಿಕೆಟ್ ಪಡೆಯುತ್ತಾರೆ ಎಂಬಿತ್ಯಾದಿ ವಿಚಾರಗಳನ್ನು ಪ್ರಿಡಿಕ್ಟ್ ಮಾಡುತ್ತಿದ್ದರು. ಆಟಗಾರನ ಜರ್ಸಿ ಸಂಖ್ಯೆ ಆಧಾರದ ಮೇಲೂ ಆ ಆಟಗಾರ ಎಷ್ಟು ರನ್ ಹೊಡೆಯುತ್ತಾನೆ ಎಂಬಿತ್ಯಾದಿ ವಿಚಾರಗಳಲ್ಲಿ ಅವರು ಭವಿಷ್ಯ ನುಡಿಯುತ್ತಿದ್ದರು. ಆದರೆ, ಈ ಭವಿಷ್ಯ ತಪ್ಪಾಗಿದ್ದೇ ಹೆಚ್ಚು. ಈ ಕಾರಣದಿಂದ ಅವರು ಸಾಕಷ್ಟು ಟ್ರೋಲ್ ಆಗುತ್ತಿದ್ದರು.

ಇದನ್ನೂ ಓದಿ: Sonu Srinivas Gouda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಸೋಶಿಯಲ್ ಮೀಡಿಯಾದಲ್ಲಿ ಆರ್ಯವರ್ಧನ್ ಗುರೂಜಿ ಅವರ ಹಲವು ಟ್ರೋಲ್​ಗಳು ಕಾಣ ಸಿಗುತ್ತವೆ. ಈಗ ಅವರು ‘ಬಿಗ್ ಬಾಸ್​’ಗೆ ಎಂಟ್ರಿ ಕೊಡುತ್ತಿರುವುದರಿಂದ ಸಹಜವಾಗಿಯೇ ಒಂದಷ್ಟು ಕುತೂಹಲ ಮೂಡಿದೆ. ಅವರು ಯಾವ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಾರೆ ಎಂಬುದು ಸದ್ಯದ ಕುತೂಹಲ.

Published On - 4:01 pm, Sat, 6 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ