AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?

‘ಕಾಂತಾರ: ಚಾಪ್ಟರ್ 1’ ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?
ರಿಷಬ್
ರಾಜೇಶ್ ದುಗ್ಗುಮನೆ
|

Updated on:Oct 28, 2025 | 10:08 AM

Share

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಕೇವಲ ಒಂದು ತಿಂಗಳಿಗೆ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಹೌದು, ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಚಿತ್ರ ಅಕ್ಟೋಬರ್ 31ಕ್ಕೆ ಒಟಿಟಿಗೆ ಕಾಲಿಡುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಮಧ್ಯೆಯೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾರತದ ಕಲೆಕ್ಷನ್ 592 ಕೋಟಿ ರೂಪಾಯಿ. ಅಕ್ಟೋಬರ್ 27ರಂದು (ನಾಲ್ಕನೇ ಸೋಮವಾರ) ಸಿನಿಮಾ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದರೆ, ವಾರದ ದಿನವೂ ಸಿನಿಮಾ ಉತ್ತಮವಾಗಿಯೇ ಗಳಿಕೆ ಮಾಡುತ್ತಿದೆ. ಮುಂಬರೋ ವೀಕೆಂಡ್​ನಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇತ್ತು. ಆದಾಗ್ಯೂ ಸಿನಿಮಾನ ಒಟಿಟಿಗೆ ತರುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣ ಏನು ಎಂಬುದು ರಿವೀಲ್ ಆಗಿದೆ.

ಇದನ್ನೂ ಓದಿ
Image
ಸಾವಿರ ಕೋಟಿ ತಲುಪಲ್ಲ ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್; ದೊಡ್ಡ ಕನಸು ಭಗ್ನ
Image
‘ಮಿಸ್ ಮಾಡಿಕೊಳ್ತೀನಿ’; ಮನೆಯಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ
Image
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಮಾಯಕಾರನಾಗಲು ಬೇಕಾಯ್ತು 6 ಗಂಟೆ

‘ಕಾಂತಾರ’ ಚಿತ್ರವನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿತ್ತು. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಇದೇ ಒಟಿಟಿ ಸಂಸ್ಥೆ ಖರೀದಿಸಿದೆ. ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ. ಕೇವಲ ಒಂದು ತಿಂಗಳಿಗೆ ಒಟಿಟಿಗೆ ಬರಲು ಕಾರಣ ಪ್ರೈಮ್ ವಿಡಿಯೋ ಹಾಗೂ ಹೊಂಬಾಳೆ ಮಧ್ಯೆ ಆದ ಒಪ್ಪಂದ.

ಅಮೇಜಾನ್ ಪ್ರೈಮ್ ಪೋಸ್ಟ್

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣದಿಂದಲೇ ಅಮೇಜಾನ್ ಪ್ರೈಮ್ ವಿಡಿಯೋದವರು 125 ಕೋಟಿ ರೂಪಾಯಿ ನೀಡಿ ಸಿನಿಮಾನ ಖರೀದಿ ಮಾಡಿದೆ ಎನ್ನಲಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿದ್ದರಿಂದ ಒಂದೇ ತಿಂಗಳಿಗೆ ಚಿತ್ರವನ್ನು ಒಟಿಟಿಗೆ ತರಲು ಒಪ್ಪಿಗೆ ನೀಡಬೇಕು ಎಂಬ ಷರತ್ತು ಇತ್ತು. ಈ ಷರತ್ತಿಗೆ ಹೊಂಬಾಳೆ ಒಪ್ಪಿಗೆ ಸೂಚಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಬರುತ್ತಿದೆ. ಈಗಾಗಲೇ ಚಿತ್ರ ಥಿಯೇಟರ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಅಂದುಕೊಂಡತೆ ಸಿನಿಮಾ ಒಟಿಟಿಯಲ್ಲಿ ಬಂದಿದ್ದಕ್ಕೆ ಅವರ ಕಡೆಯಿಂದಲೂ ದೊಡ್ಡ ಮೊತ್ತದ ಹಣ ಸಿಗಲಿದೆ.

ಇದನ್ನೂ ಓದಿ: ಸಾವಿರ ಕೋಟಿ ತಲುಪಲ್ಲ ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್; ದೊಡ್ಡ ಕನಸು ಭಗ್ನ

‘ಕಾಂತಾರ’ ಸಿನಿಮಾ ಮಾಡುವಾಗ ಅಷ್ಟು ಒಳ್ಳೆಯ ರೆಸ್ಪಾನ್ಸ್ ಪಡೆಯುತ್ತದೆ ಎಂಬ ಕಲ್ಪನೆ ತಂಡದವರಿಗೂ ಇರಲಿಲ್ಲ. ಹೀಗಾಗಿ ಅಮೇಜಾನ್ ಜೊತೆ ಒಪ್ಪಂದ ಮಾಡಿಕೊಂಡು, ಬೇಗನೆ ಸಿನಿಮಾನ ಒಟಿಟಿಗೆ ತರಲು ಒಪ್ಪಂದ ಆಗಿತ್ತು. ನಂತರ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಲ್ಲೂ ಬಿಡುಗಡೆ ಮಾಡಲಾಯಿತು. ಹೀಗಾಗಿ, ಒಟಿಟಿ ರಿಲೀಸ್ ದಿನಾಂಕವನ್ನು ಪ್ರೈಮ್ ವಿಡಿಯೋ ಮುಂದಕ್ಕೆ ಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Tue, 28 October 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ