AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ‘ಆರ್ಟಿಕಲ್​ 370’ ಸಿನಿಮಾ; ಎಲ್ಲಿ ವೀಕ್ಷಣೆಗೆ ಲಭ್ಯ?

‘ಆರ್ಟಿಕಲ್​ 370’ ಚಿತ್ರ ಫೆಬ್ರವರಿ 23ರಂದು ತೆರೆಕಂಡು 50 ದಿನಗಳಿಗೂ ಹೆಚ್ಚು ಕಾಲ ಪ್ರದರ್ಶನವಾಯ್ತು. ಈ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪತ್ರವನ್ನು ಹಿರಿಯ ನಟ ಅರುಣ್​ ಗೋವಿಲ್​ ನಿಭಾಯಿಸಿದ್ದಾರೆ. ಯಾಮಿ ಗೌತಮ್​, ಪ್ರಿಯಾಮಣಿ ಅವರು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಈಗ ‘ಆರ್ಟಿಕಲ್​ 370’ ಒಟಿಟಿಯಲ್ಲಿ ಪ್ರಸಾರ ಆಗುತ್ತಿದೆ.

ಒಟಿಟಿಗೆ ಬಂತು ‘ಆರ್ಟಿಕಲ್​ 370’ ಸಿನಿಮಾ; ಎಲ್ಲಿ ವೀಕ್ಷಣೆಗೆ ಲಭ್ಯ?
ಯಾಮಿ ಗೌತಮ್​
ಮದನ್​ ಕುಮಾರ್​
|

Updated on: Apr 19, 2024 | 4:07 PM

Share

ಚಿತ್ರಮಂದಿರದಲ್ಲಿ ಸದ್ದು ಮಾಡಿದ ‘ಆರ್ಟಿಕಲ್​ 370’ ಸಿನಿಮಾ ಈಗ ಒಟಿಟಿ (OTT) ಅಂಗಳಕ್ಕೆ ಕಾಲಿಟ್ಟಿದೆ. ಇಂದಿನಿಂದ (ಏಪ್ರಿಲ್​ 19) ಈ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿದೆ. ನೆಟ್​ಫ್ಲಿಕ್ಸ್​ (Netflix) ಮೂಲಕ ‘ಆರ್ಟಿಕಲ್​ 370’ ಸಿನಿಮಾವನ್ನು ಪ್ರೇಕ್ಷಕರು ವೀಕ್ಷಿಸಬಹುದು. ಪೊಲಿಟಿಕಲ್​ ಡ್ರಾಮಾ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ನಟಿ ಯಾಮಿ ಗೌತಮ್​ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ನಟಿ ಪ್ರಿಯಾಮಣಿ ಕೂಡ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ‘ಆರ್ಟಿಕಲ್​ 370’ (Article 370 Movie) ಸಿನಿಮಾವನ್ನು ಮಿಸ್​ ಮಾಡಿಕೊಂಡಿದ್ದವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು.

‘ಆರ್ಟಿಕಲ್​ 370’ ಸಿನಿಮಾ ಫೆಬ್ರವರಿ 23ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಆದಿತ್ಯ ಸುಹಾನ್​ ಜಾಂಬಳೆ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ರದ್ದು ಮಾಡಿದ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಬಾಕ್ಸ್​ ಆಫೀಸ್​ನಲ್ಲಿ ಸ್ಲೀಪರ್​ ಹಿಟ್​ ಆದ ಈ ಸಿನಿಮಾ 50 ದಿನಗಳ ಕಾಲ ಪ್ರದರ್ಶನ ಕಂಡಿದೆ.

ಈ ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪತ್ರವನ್ನು ಅರುಣ್​ ಗೋವಿಲ್​ ನಿಭಾಯಿಸಿದ್ದಾರೆ. ಈ ಮೊದಲು ‘ರಾಮಾಯಣ’ ಸೀರಿಯಲ್​ನಲ್ಲಿ ರಾಮನ ಪಾತ್ರ ಮಾಡಿದ್ದ ಅರುಣ್​ ಗೋವಿಲ್​ ಅವರಿಗೆ ಈಗ ಮೋದಿ ಪಾತ್ರ ಮಾಡುವ ಅವಕಾಶ ಸಿಕ್ಕಿತು. ಈಗ ಅವರು ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಮೀರತ್​ ಲೋಕಸಭಾ ಕ್ಷೇತ್ರದಿಂದ ಅವರಿಗೆ ಟಿಕೆಟ್​ ಸಿಕ್ಕಿದೆ.

ಇದನ್ನೂ ಓದಿ: ನಟ ದ್ವಾರಕೀಶ್​ ನಿಧನಕ್ಕೆ ನರೇಂದ್ರ ಮೋದಿ ಸಂತಾಪ; ಪ್ರಧಾನಿ ಹೇಳಿದ್ದೇನು?

ನರೇಂದ್ರ ಮೋದಿ ಅವರು ‘ಆರ್ಟಿಕಲ್​ 370’ ಸಿನಿಮಾದ ರಿಲೀಸ್​ ಸಂದರ್ಭದಲ್ಲಿ ಮಾತನಾಡಿದ್ದರು. ‘ಈ ವಾರ ಆರ್ಟಿಕಲ್​ 370 ಸಿನಿಮಾ ಬಿಡುಗಡೆ ಆಗಲಿದೆ. ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಈ ಸಿನಿಮಾ ಸಹಕಾರಿ ಆಗಲಿದೆ’ ಎಂದು ಅವರು ಹೇಳಿದ್ದರು. ಚಿತ್ರಮಂದಿರದಲ್ಲಿ ನೋಡಿದ ಪ್ರೇಕ್ಷಕರು ಈ ಸಿನಿಮಾಗೆ ಮೆಚ್ಚುಗೆ ನೀಡಿದರು. ಭಾರತದಲ್ಲಿ ಈ ಸಿನಿಮಾ 82 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ತಮ್ಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್