ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯಕ್ಕೆ ಸಂಬಂಧಿಸಿದ ಕೆಲವು ಸಿನಿಮಾಗಳು ಬಿಡುಗಡೆ ಆಗುವುದು ಕಾಮನ್. ಕೆಲವೇ ದಿನಗಳ ಹಿಂದೆ ‘ಆರ್ಟಿಕಲ್ 370’ ಸಿನಿಮಾ (Article 370 Movie) ಬಿಡುಗಡೆ ಆಯಿತು. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ನಟಿ ಯಾಮಿ ಗೌತಮ್ (Yami Gautam) ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್ ಆಗಿದೆ. ಒಟಿಟಿಯಲ್ಲಿ ‘ಆರ್ಟಿಕಲ್ 370’ ನೋಡಬೇಕು ಎಂದು ಅನೇಕರು ಕಾದಿದ್ದಾರೆ. ಒಟಿಟಿ ರಿಲೀಸ್ (Article 370 OTT Release) ದಿನಾಂಕದ ಸಂಭವನೀಯ ದಿನಾಂಕದ ಬಗ್ಗೆ ಸುದ್ದಿ ಹಬ್ಬಿದೆ.
ಆರಂಭದಲ್ಲೇ ‘ಆರ್ಟಿಕಲ್ 370’ ಸಿನಿಮಾಗೆ ಸಾಧಾರಣ ಕಲೆಕ್ಷನ್ ಆಯಿತು. ನಂತರದ ದಿನಗಳಲ್ಲಿ ಅದೇ ಸ್ಥಿತಿ ಮುಂದುವರಿಯಿತು. ಅಚ್ಚರಿ ಏನೆಂದರೆ, ಸತತ ಒಂದು ತಿಂಗಳ ಪ್ರದರ್ಶನದ ಬಳಿಕ ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್ 78.33 ಕೋಟಿ ರೂಪಾಯಿ ಆಗಿದೆ. ಆ ಮೂಲಕ ಇದು ಸ್ಲೀಪರ್ ಹಿಟ್ ಎನಿಸಿಕೊಂಡಿತು. ಇನ್ನೇನು ಒಟಿಟಿಗೆ ಎಂಟ್ರಿ ನೀಡುವ ಸಮಯ ಹತ್ತಿರ ಆಗಿದೆ.
ಇದನ್ನೂ ಓದಿ: 105 ಕೋಟಿ ರೂಪಾಯಿಗೆ ‘ಗೇಮ್ ಚೇಂಜರ್’ ಸಿನಿಮಾದ ಒಟಿಟಿ ಪ್ರಸಾರ ಹಕ್ಕು ಮಾರಾಟ?
ವರದಿಗಳ ಪ್ರಕಾರ, ಏಪ್ರಿಲ್ 19ರಂದು ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ‘ಜಿಯೋ ಸಿನಿಮಾ’ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಸಿನಿಮಾದಲ್ಲಿ ಯಾಮಿ ಗೌತಮ್ ಅವರ ಜೊತೆ ಪ್ರಿಯಾಮಣಿ ಕೂಡ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ನರೇಂದ್ರ ಮೋದಿ ಪಾತ್ರವನ್ನು ಹಿರಿಯ ನಟ ಅರುಣ್ ಗೋವಿಲ್ ಅವರು ನಿಭಾಯಿಸಿದ್ದಾರೆ.
ಇದನ್ನೂ ಓದಿ: ಒಟಿಟಿಗೆ ಬಂತು ‘ಫೈಟರ್’ ಸಿನಿಮಾ; ಸಿಹಿ ಸುದ್ದಿ ನೀಡಿದ ಹೃತಿಕ್ ರೋಷನ್
ಹೊಸ ಹೊಸ ಸಿನಿಮಾಗಳನ್ನು ಜನರಿಗೆ ತಲುಪಿಸುವಲ್ಲಿ ಒಟಿಟಿ ಸಂಸ್ಥೆಗಳ ನಡುವೆ ಭಾರಿ ಪೈಪೋಟಿ ಇದೆ. ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದ ಸಿನಿಮಾಗಳಿಗೆ ಒಟಿಟಿಯಲ್ಲೂ ಭರ್ಜರಿ ಬೇಡಿಕೆ ಇರುತ್ತದೆ. ಈಗ ‘ಆರ್ಟಿಕಲ್ 370’ ಸಿನಿಮಾಗೂ ಸಹ ಒಟಿಟಿಯಲ್ಲಿ ಡಿಮ್ಯಾಂಡ್ ಇದೆ. ಹಾಗಾಗಿ ದಾಖಲೆ ಪ್ರಮಾಣದಲ್ಲಿ ವೀವ್ಸ್ ಪಡೆಯುವ ಸಾಧ್ಯತೆ ಇದೆ. ಈ ಸಿನಿಮಾಗೆ ಆದಿತ್ಯ ಸುಹಾಸ್ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.