AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಒಟಿಟಿ ರಿಲೀಸ್ ದಿನಾಂಕ ಫಿಕ್ಸ್?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ ಈಗ ಒಟಿಟಿಗೆ ಬರಲು ಸಜ್ಜಾಗಿದೆ. 'ಜಿ5' ಪ್ಲಾಟ್‌ಫಾರ್ಮ್‌ನಲ್ಲಿ ಸೆಪ್ಟೆಂಬರ್ 25 ರಿಂದ ಸಿನಿಮಾ ಪ್ರಸಾರವಾಗಲಿದೆ ಎಂಬ ವರದಿಗಳು ಹರಿದಾಡುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆ ಕಂಡ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಒಟಿಟಿ ರಿಲೀಸ್ ದಿನಾಂಕ ಫಿಕ್ಸ್?
ಟಾಕ್ಸಿಕ್ ಸಿನಿಮಾ
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Sep 15, 2026 | 12:01 PM

Share

ಮುಖ್ಯಾಂಶಗಳು

  • ಚಿತ್ರಮಂದಿರಗಳ ಬಳಿಕ ಒಟಿಟಿಗೆ ರಾಕಿ ಭಾಯ್
  • ಸೆಪ್ಟೆಂಬರ್ 25ಕ್ಕೆ ‘ಟಾಕ್ಸಿಕ್’ ಸ್ಟ್ರೀಮಿಂಗ್?
  • ಬಾಕ್ಸ್ ಆಫೀಸ್‌ನಲ್ಲಿ 340 ಕೋಟಿ ದಾಟಿದ ಗಳಿಕೆ 

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26 ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ತೆರೆಕಂಡಿತ್ತು. ಚಿತ್ರಕ್ಕೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತಾದರೂ, ಎರಡನೇ ದಿನದಿಂದ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಭಾರಿ ಕುಸಿತ ಕಂಡುಬಂತು. ಈಗ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡು ಹಲವು ದಿನಗಳು ಕಳೆದಿವೆ. ಈ ಬೆನ್ನಲ್ಲೇ ಚಿತ್ರದ ಒಟಿಟಿ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆರಂಭವಾಗಿವೆ.

ವರದಿಗಳ ಪ್ರಕಾರ, ಈ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ಕೆಲವು ವರದಿಯ ಪ್ರಕಾರ, ‘ಟಾಕ್ಸಿಕ್’ ಸಿನಿಮಾ ಇದೇ ಸೆಪ್ಟೆಂಬರ್ 25 ರಿಂದ ‘ಜಿ5’ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾಗುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಚಿತ್ರತಂಡ ಅಥವಾ ಒಟಿಟಿ ಸಂಸ್ಥೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಸಾಕ್ನಿಲ್ಕ್ ವರದಿ ಪ್ರಕಾರ ‘ಟಾಕ್ಸಿಕ್’ ಪ್ರಪಂಚದಾದ್ಯಂತ ಒಟ್ಟು 340.98 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದಲ್ಲೇ ಬರೋಬ್ಬರಿ 297.23 ಕೋಟಿ ರೂಪಾಯಿ ಗಳಿಕೆಯಾಗಿದ್ದರೆ, ವಿದೇಶಗಳಿಂದ 43.75 ಕೋಟಿ ರೂಪಾಯಿ ಹರಿದುಬಂದಿದೆ. ಪ್ರಪಂಚದಾದ್ಯಂತ 1,61,714 ಶೋಗಳಿಂದ 249.02 ಕೋಟಿ ರೂಪಾಯಿ ನೆಟ್ ಗಳಿಕೆ ಕಂಡಿದೆ. ಮೊದಲ ದಿನವೇ 101.10 ಕೋಟಿ ರೂಪಾಯಿ ಗಳಿಸಿದ್ದ ಚಿತ್ರ, ಎರಡನೇ ದಿನ 45.10 ಕೋಟಿ ರೂಪಾಯಿಗೆ ಕುಸಿದಿತ್ತು.

ಇದನ್ನೂ ಓದಿ: ನಿಮ್ಮ ಬುದ್ಧಿ ಉಪಯೋಗಿಸಿ ಸಿನಿಮಾ ನೋಡಿ ;ಟಾಕ್ಸಿಕ್ ನೆಗೆಟಿವ್ ವಿಮರ್ಶೆಗೆ ಯಶ್ ಸಹನಟ ಖಡಕ್ ಉತ್ತರ

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾದಲ್ಲಿ ಅವರಿಗೆ ಮೂರು ಶೇಡ್​​ಗಳು ಇದ್ದವು. ಗೀತು ಮೋಹನ್‌ದಾಸ್ ನಿರ್ದೇಶನದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಕುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿದ್ದರು. ಒಟಿಟಿಯಲ್ಲಿ ಈ ಸಿನಿಮಾ ಯಾವ ರೀತಿಯ ಮೋಡಿ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:56 am, Tue, 15 September 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ