Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ .

ಒಟಿಟಿಗೆ ಬಂತು ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾ; ಆದರೆ..
ಯುವ
Follow us
ರಾಜೇಶ್ ದುಗ್ಗುಮನೆ
|

Updated on:Apr 20, 2024 | 2:03 PM

ಇತ್ತೀಚೆಗೆ ರಿಲೀಸ್ ಆದ ‘ಯುವ’ ಸಿನಿಮಾ (Yuva Movie) ಹಿಟ್ ಆಗಿದೆ. ಸಂತೋಷ್ ಆನಂದ್​ರಾಮ್ ನಿರ್ದೇಶನದ, ಯುವ ರಾಜ್​ಕುಮಾರ್ ನಟನೆಯ ಈ ಚಿತ್ರವನ್ನು ಜನರು ಥಿಯೇಟರ್​ನಲ್ಲಿ ಮೆಚ್ಚಿಕೊಂಡರು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಮೂಲಕ ಪ್ರಸಾರ ಕಾಣುತ್ತಿದೆ. ಆದರೆ, ಉಚಿತವಾಗಲ್ಲ. ನೀವು ಈ ಸಿನಿಮಾನ ರೆಂಟ್​ಗೆ ಪಡೆಯಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಯುವ ರಾಜ್​ಕುಮಾರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ‘ಯುವ’ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾನ ಜನರು ಮೆಚ್ಚಿಕೊಂಡರು. ಎಲೆಕ್ಷನ್ ಅಬ್ಬರದ ಮಧ್ಯೆಯೂ ಜನರು ಸಿನಿಮಾ ವೀಕ್ಷಿಸಿದರು. ಇತ್ತೀಚೆಗೆ ಸಿನಿಮಾ ತಂಡ ಸಕ್ಸಸ್ ಮೀಟ್ ಆಚರಿಸಿಕೊಂಡಿತ್ತು.

ಸಕಸ್ಸ್​ ಮೀಟ್​ನಲ್ಲಿ ಜನರು ಕೊಟ್ಟ ಪ್ರೀತಿ ಬಗ್ಗೆ ‘ಯುವ’ ತಂಡ ಮಾತನಾಡಿತ್ತು. ‘ಚುನಾವಣೆ ಅಬ್ಬರದ ಮಧ್ಯೆಯೂ ಜನರು ಸಿನಿಮಾನ ಇಷ್ಟಪಟ್ಟಿದ್ದಾರೆ. ಯುವಗೆ ಪ್ರೀತಿ ತೋರಿಸಿದ್ದಾರೆ’ ಎಂದು ತಂಡ ಹೇಳಿತ್ತು. ‘ಯುವ’ ಸಿನಿಮಾದಲ್ಲಿ ಯುವ ರಾಜ್​ಕುಮಾರ್ ಅವರು ಭರ್ಜರಿ ಆ್ಯಕ್ಷನ್ ಮೆರೆದಿದ್ದರು. ಈಗ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಚಿತ್ರವನ್ನು 349 ರೂಪಾಯಿಗೆ ರೆಂಟ್ ಕೊಟ್ಟು ವೀಕ್ಷಿಸಬಹುದು. 30 ದಿನಗಳವರೆಗೆ ಇದರ ವ್ಯಾಲಿಡಿಟಿ ಇರುತ್ತದೆ. ಒಮ್ಮೆ ಸಿನಿಮಾ ವೀಕ್ಷಿಸಲು ಆರಂಭಿಸಿದರೆ 48 ಗಂಟೆಗಳಲ್ಲಿ ಅದನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ

ಇತ್ತೀಚೆಗೆ ನಡೆದ ಸಕಸ್ಸ್​ಮೀಟ್​ನಲ್ಲಿ ಒಟಿಟಿ ಪ್ರಸಾರದ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ್ದ ಸಂತೋಷ್ ಆನಂದ್​ರಾಮ್ ಅವರು, ‘ಆ ಬಗ್ಗೆ ನಮಗೆ ಗೊತ್ತಿಲ್ಲ. ನಿರ್ಮಾಣ ಸಂಸ್ಥೆಯವರು ಯಾವ ರೀತಿಯಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಕಾಣಲಿದೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sat, 20 April 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು