AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು (ಮೇ 25) ಪ್ರದಾನ ಮಾಡಲಾಗುತ್ತದೆ. ಮಮ್ಮುಟ್ಟಿ, ಧರ್ಮೇಂದ್ರ, ಅಲ್ಕಾ ಯಾಗ್ನಿಕ್, ಆರ್. ಮಾಧವನ್ ಮುಂತಾದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಮನರಂಜನಾ ಕ್ಷೇತ್ರದಲ್ಲಿ ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾದ ಪ್ರಮುಖರ ವಿವರ ಇಲ್ಲಿದೆ.

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ
Dharmendra, R. Madhavan, MammoottyImage Credit source: PTI
ಮದನ್​ ಕುಮಾರ್​
|

Updated on:May 25, 2026 | 3:51 PM

Share

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ ಪ್ರಶಸ್ತಿ 2026’ (Padma Awards 2026) ಪ್ರದಾನ ಸಮಾರಂಭವು ರಾಜಧಾನಿ ನವದೆಹಲಿಯಲ್ಲಿ ಇಂದು (ಮೇ 25) ಸಂಜೆ 5 ಗಂಟೆಗೆ ಅದ್ಧೂರಿಯಾಗಿ ಜರುಗಲಿದೆ. ಈ ಬಾರಿ ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಹಲವು ಧೀಮಂತ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಈ ವರ್ಷ ಕೇಂದ್ರ ಸರ್ಕಾರವು ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಹಾಗೂ 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ.

ಹಿರಿಯ ನಟ ಧರ್ಮೇಂದ್ರ ಅವರಿಗೆ ಪದ್ಮವಿಭೂಷಣ: ಹಿಂದಿ ಚಿತ್ರರಂಗದ ದಶಕಗಳ ಇತಿಹಾಸದಲ್ಲಿ ‘ಶೋಲೆ’ ರೀತಿಯ ಗಮನಾರ್ಹ ಸಿನಿಮಾಗಳ ಮೂಲಕ ಕೋಟ್ಯಂತರ ಪ್ರೇಕ್ಷಕರನ್ನು ರಂಜಿಸಿದ ಎವರ್‌ಗ್ರೀನ್ ಸೂಪರ್‌ಸ್ಟಾರ್ ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುತ್ತಿದೆ. ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಿ ಈ ಗೌರವ ಸಲ್ಲಿಕೆ ಆಗುತ್ತಿದೆ.

ಮಮ್ಮುಟ್ಟಿ ಮತ್ತು ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ: ಮಲಯಾಳಂ ಚಿತ್ರರಂಗದ ಹೆಮ್ಮೆಯ ನಟ ಮಮ್ಮುಟ್ಟಿ ಅವರಿಗೆ ಚಿತ್ರರಂಗದಲ್ಲಿನ ಅವರ ಸುದೀರ್ಘ ಹಾಗೂ ಅತ್ಯುತ್ತಮ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಇವರೊಂದಿಗೆ, 90 ಹಾಗೂ 2000ರ ದಶಕದಲ್ಲಿ ತಮ್ಮ ಮಧುರ ಧ್ವನಿಯ ಮೂಲಕ ಬಾಲಿವುಡ್‌ನಲ್ಲಿ ಅಸಂಖ್ಯಾತ ಸೂಪರ್‌ಹಿಟ್ ಗೀತೆಗಳನ್ನು ನೀಡಿದ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೂ ಪದ್ಮಭೂಷಣ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿಗಳಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ; ಆ ಕ್ಷಣದ ವಿಡಿಯೋ ನೋಡಿ

ಆರ್. ಮಾಧವನ್ ಹಾಗೂ ಸತೀಶ್ ಶಾ ಅವರಿಗೆ ಪದ್ಮಶ್ರೀ: ‘ರೆಹನಾ ಹೈ ತೇರೆ ದಿಲ್ ಮೇ’, ‘3 ಇಡಿಯಟ್ಸ್’, ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಮುಂತಾದ ಚಿತ್ರಗಳ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟ ಆರ್. ಮಾಧವನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. ಇದರೊಂದಿಗೆ, ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಹಾಗೂ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ತಮ್ಮ ಅದ್ಭುತ ಹಾಸ್ಯದ ಮೂಲಕ ಮನೆಮಾತಾಗಿದ್ದ ದಿವಂಗತ ನಟ ಸತೀಶ್ ಶಾ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಗೌರವ ಸಮರ್ಪಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:10 pm, Mon, 25 May 26

Follow Us
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ