AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

ಗಾಯಕಿ ಪಲಕ್ ಮುಚ್ಚಲ್ ಅವರ ಕಂಠ ಎಷ್ಟು ಸುಮಧುರ ಆಗಿದೆಯೋ ಅವರ ಹೃದಯವಂತಿಕೆ ಕೂಡ ಅಷ್ಟೇ ವಿಶಾಲ. ಬಾಲ್ಯದಿಂದಲೂ ಜನಪರ ಕಾರ್ಯ ಮಾಡುತ್ತ ಬಂದಿರುವ ಅವರ ಹೆಸರು ಈಗ ಗಿನ್ನೆಸ್ ಹಾಗೂ ಲಿಮ್ಕಾ ಪುಟ ಸೇರಿದೆ. ತಮ್ಮ ಖರ್ಚಿನಿಂದ ಶಸ್ತ್ರಚಿಕಿತ್ಸೆ ಮಾಡಿಸಿ ಈವರೆಗೂ 3800 ಮಕ್ಕಳ ಜೀವವನ್ನು ಪಲಕ್ ಮುಚ್ಚಲ್ ಅವರು ಉಳಿಸಿದ್ದಾರೆ.

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
Palak Muchhal
ಮದನ್​ ಕುಮಾರ್​
|

Updated on: Nov 12, 2025 | 3:14 PM

Share

ಖ್ಯಾತ ಗಾಯಕಿ ಪಲಕ್ ಮುಚ್ಚಲ್ (Palak Muchhal) ಅವರ ಸುಮಧುರ ಕಂಠಕ್ಕೆ ಕೋಟ್ಯಂತರ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೇವಲ ಹಾಡಿನಿಂದ ಮಾತ್ರವಲ್ಲದೇ ಜನಪರ ಕಾರ್ಯಗಳಿಂದಲೂ ಪಲಕ್ ಮುಚ್ಚಲ್ ಅವರು ಜನಮನ ಗೆದ್ದಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಅವರು ಚಾರಿಟಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಈವರೆಗೂ 3800 ಬಡಮಕ್ಕಳ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ (Heart Surgery) ನೆರವಾಗುವ ಮೂಲಕ ಪಲಕ್ ಮುಚ್ಚಲ್ ಅವರು ಗಿನ್ನೆಸ್ ದಾಖಲೆ (Guinness record) ಬರೆದಿದ್ದಾರೆ. ಅವರ ಈ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಬಹುಭಾಷೆಯಲ್ಲಿ ಹಾಡುವ ಮೂಲಕ ಪಲಕ್ ಮುಚ್ಚಲ್ ಅವರು ಅಪಾರ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಲ್ಲಿ ಕೂಡ ಅವರು ಅನೇಕ ಸೂಪರ್ ಹಿಟ್ ಗೀತೆಗಳಿಗೆ ಧ್ವನಿ ಆಗಿದ್ದಾರೆ. ‘ಅಧ್ಯಕ್ಷ’ ಸಿನಿಮಾದ ‘ಸುಮ್ ಸುಮ್ನೇ..’, ‘ಅಯೋಗ್ಯ’ ಚಿತ್ರದ ‘ಏನಮ್ಮಿ ಏನಮ್ಮಿ..’ ಮುಂತಾದ ಹಾಡುಗಳ ಮೂಲಕ ಕನ್ನಡ ಚಿತ್ರರಂಗದಲ್ಲೂ ಪಲಕ್ ಮುಚ್ಚಲ್ ಅವರು ಹೆಸರು ಮಾಡಿದ್ದಾರೆ. ಅವರ ಹೃದಯವಂತಿಕೆ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ಹೆಮ್ಮೆ ಇದೆ.

‘ಪಲಕ್ ಪಲಾಶ್ ಚಾರಿಟೆಬಲ್ ಫೌಂಡೇಶನ್’ ಮೂಲಕ ಪಲಕ್ ಮುಚ್ಚಲ್ ಅವರು ಸಾವಿರ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದಾರೆ. ಭಾರತದ ಹಾಗೂ ವಿದೇಶದಲ್ಲಿ ಇರುವ ಬಡ ಮಕ್ಕಳ ಹಾರ್ಟ್ ಸರ್ಜಿರಿಗೆ ಅವರು ನೆರವಾಗಿದ್ದಾರೆ. ಬಾಲಕಿ ಆಗಿದ್ದಾಗಿನಿಂದಲೂ ಪಲಕ್ ಮುಚ್ಚಲ್ ಅವರು ಈ ಕಾರ್ಯ ಮಾಡುತ್ತಾ ಬಂದಿದ್ದಾರೆ. ಈವರೆಗೂ ಒಟ್ಟು 3800 ಬಡ ಮಕ್ಕಳಿಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಲು ನೆರವಾಗಿರುವುದು ಗಿನ್ನೆಸ್ ದಾಖಲೆ ಆಗಿದೆ.

‘ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್’ ಹಾಗೂ ‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ ಪುಟಗಳಲ್ಲಿ ಪಲಕ್ ಮುಚ್ಚಲ್ ಅವರ ಹೆಸರು ಸೇರ್ಪಡೆ ಆಗಿದೆ. ಪಲಕ್ ಮುಚ್ಚಲ್ ಅವರು ದೇಶ ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾರೆ. ಅದರಿಂದ ಬರುವ ಹಣವನ್ನು ಅವರು ಬಡಮಕ್ಕಳ ಹೃದಯ ಶಸ್ತ್ರಚಿಕಿತ್ಸೆಗಾಗಿ ಮೀಸಲಿಡುತ್ತಾರೆ. ಅವರಿಂದಾಗಿ ಸಾವಿರಾರು ಬಡ ಮಕ್ಕಳ ಜೀವ ಉಳಿದಿದೆ.

ಇದನ್ನೂ ಓದಿ: 3 ದಿನದ ಹಸುಗೂಸಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ: ಶಿವಮೊಗ್ಗದಿಂದ ಬೆಂಗಳೂರಿಗೆ ಶಿಫ್ಟ್

ಇಷ್ಟಕ್ಕೆ ಮಾತ್ರ ಅವರ ಜನಪರ ಕಾರ್ಯಗಳು ಸೀಮಿತವಾಗಿಲ್ಲ. ಕಾರ್ಗಿಲ್ ಹುತಾತ್ಮರ ಕುಟುಂಬಗಳಿಗೆ ಕೂಡ ಅವರು ಸಹಾಯ ಮಾಡಿದ್ದಾರೆ. ಗುಜರಾತ್ ಭೂಕಂಪ ಸಂತ್ರಸ್ತರ ನೆರವಿಗಾಗಿ ಅವರು 10 ಲಕ್ಷ ರೂಪಾಯಿ ನೀಡಿದ್ದರು. ಹಿಂದಿ, ಕನ್ನಡ, ಬೆಂಗಾಲಿ, ತೆಲುಗು, ತಮಿಳು, ಮರಾಠಿ, ಗುಜರಾತಿ ಮುಂತಾದ ಭಾಷೆಗಳ ಚಿತ್ರರಂಗದಲ್ಲಿ ಪಲಕ್ ಮುಚ್ಚಲ್ ಅವರಿಗೆ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ