AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಮಲಯಾಳಂನ ಬಹುನಿರೀಕ್ಷಿತ 'ಪಳ್ಳಿ ಚಟ್ಟಂಬಿ' ಚಿತ್ರವು ಕನ್ನಡ ಮತ್ತು ಕರ್ನಾಟಕದ ನಂಟನ್ನು ಹೊಂದಿದೆ. ಟೊವಿನೋ ಥಾಮಸ್ ನಟನೆಯ ಈ ಸಿನಿಮಾದಲ್ಲಿ ಯಕ್ಷಗಾನ ಕಲೆ ಮತ್ತು ಕನ್ನಡ ಡೈಲಾಗ್‌ಗಳನ್ನು ಬಳಸಲಾಗಿದೆ. ಕಥೆಯ ಬೇಡಿಕೆಗೆ ಅನುಗುಣವಾಗಿ ಇದನ್ನು ಅಳವಡಿಸಲಾಗಿದ್ದು, ಕನ್ನಡ ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆ ಇದೆ. ಹೊಂಬಾಳೆ ಫಿಲ್ಮ್ಸ್ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸುತ್ತಿದೆ, ಏಪ್ರಿಲ್ 15ರಂದು ಬಿಡುಗಡೆ.

ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್
ಪಳ್ಳಿ ಚಟ್ಟಂಬಿ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Apr 08, 2026 | 1:00 PM

Share

ಮಲಯಾಳಂ ಸಿನಿಮಾಗಳು ಮೊದಲಿನಿಂದಲೂ ಬೆಂಗಳೂರು ನಂಟನ್ನು ಹೊಂದಿವೆ. ಅವರ ಅನೇಕ ಸಿನಿಮಾಗಳು ಬೆಂಗಳೂರಿನಲ್ಲಿ ಶೂಟ್ ಆದ ಉದಾಹರಣೆ ಇದೆ. ‘ಬೆಂಗಳೂರು ಡೇಸ್’, ‘ಡಿಯರ್ ಫ್ರೆಂಡ್’, ‘ಲೋಕಃ: ಚಾಪ್ಟರ್ 1’ ಹೀಗೆಯೇ ಅನೇಕ ಚಿತ್ರಗಳು ಬೆಂಗಳೂರು ಕನೆಕ್ಷನ್ ಹೊಂದಿವೆ. ಈಗ ಮುಂಬರುವ ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರಕ್ಕೂ ಕರ್ನಾಟಕದ ಲಿಂಕ್ ಇದೆ ಎಂಬ ವಿಷಯ ರಿವೀಲ್ ಆಗಿದೆ.

‘ಪಳ್ಳಿ ಚಟ್ಟಂಬಿ’ ಸಿನಿಮಾದಲ್ಲಿ ಟುವಿನೋ ಥಾಮಸ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕಯಾದು ಲೋಹರ್ ನಾಯಕಿ. ಈ ಮೊದಲು ಕಯಾದು ಅವರು ‘ಮುಗಿಲ್​​ ಪೇಟೆ’ ಹೆಸರಿನ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರಕ್ಕೆ ಡಿಜೋ ಜೊಸೆ ಆಂಟೋನಿ ನಿರ್ದೇಶನ ಇದೆ. ಈ ಮೊದಲು ‘ಜನ ಗಣ ಮನ’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರದ ಕಥೆ ನಡೆದಿದ್ದು ಕೂಡ ಕರ್ನಾಟಕದ ರಾಮನಗರದಲ್ಲಾಗಿತ್ತು. ಈಗ ಅವರ ನಿರ್ದೇಶನದ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಕನ್ನಡದ ಕಲೆಯ ಕನೆಕ್ಷನ್ ಇರುವ ವಿಷಯ ರಿವೀಲ್ ಆಗಿದೆ.

ಬೆಂಗಳೂರಿನಲ್ಲಿ ‘ಪಳ್ಳಿ ಚಟ್ಟಂಬಿ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟುವಿನೋ, ‘ಈ ಸಿನಿಮಾದಲ್ಲಿ ಯಕ್ಷಗಾನದ ಬಳಕೆ ಆಗಿದೆ. ಅಲ್ಲಿ, ಕನ್ನಡದ ಡೈಲಾಗ್ ಬರುತ್ತದೆ’ ಎಂದು ಟುವಿನೋ ಮಾಹಿತಿ ನೀಡಿದರು. ಇದು ಕುತೂಹಲ ಹೆಚ್ಚಿಸಿದೆ. ಕನ್ನಡ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದಲೇ ಕನ್ನಡವನ್ನು ಮಲಯಾಳಂನಲ್ಲಿ ಸೇರಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿತು. ಇದಕ್ಕೆ ಉತ್ತರಿಸಿದ ಅವರು, ‘ಕಥೆ ಡಿಮ್ಯಾಂಡ್​ ಮಾಡಿದರೆ ಮಾತ್ರ ಅದನ್ನು ಸೇರಿಸೋದಾಗಿ’ ಹೇಳಿದ್ದಾರೆ ಟುವಿನೋ.

‘ಪಳ್ಳಿ ಚಟ್ಟಂಬಿ’ ಸಿನಿಮಾದ ಕಥೆ ಸಾಗೋದು ಹಳ್ಳಿಯಲ್ಲಿ. ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಮಲಯಾಳಂ ಜೊತೆ ಕನ್ನಡದಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಹಂಚಿಕೆ ಮಾಡುತ್ತಿದೆ. ಏಪ್ರಿಲ್ 15ರಂದು ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಲ್ಲಿ ಯಾವ ಪಾತ್ರ? ಕೊನೆಗೂ ಮೌನ ಮುರಿದ ಟೊವಿನೋ ಥಾಮಸ್ ‘ಪಳ್ಳಿ ಚಟ್ಟಂಬಿ’ ಚಿತ್ರವನ್ನು ವರ್ಲ್ಡ್ ವೈಡ್ ಫಿಲಂಸ್, ಸಿ ಕ್ಯೂಬ್ ಬ್ರೋಸ್ ಎಂಟರ್ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ನೌಫಲ, ಬ್ರಿಜೇಶ್, ಚಾಣುಕ್ಯ ಚೈತನ್ಯ, ಚರಣ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಎಸ್ ಸುರೇಶ್ ಬಾಬು ಕಥೆ ಬರೆದಿದ್ದಾರೆ. ಟಿಜೋ ಟಾಮಿ ಛಾಯಾಗ್ರಹಣ, ಶ್ರೀಜಿತ್ ಸಾರಂಗ್ ಸಂಕಲನ, ಜೇಕ್ಸ್ ಬಿಜೋಯ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು