Prabhas: ‘ಆದಿಪುರುಷ್’ ಬಿಡುಗಡೆ ದಿನ ಪ್ರಭಾಸ್ ಭಾರತದಲ್ಲಿ ಇರಲ್ಲ? ಅಮೆರಿಕಕ್ಕೆ ತೆರಳಿದ ಪ್ಯಾನ್ ಇಂಡಿಯಾ ಸ್ಟಾರ್
Adipurush Movie: ಪ್ರಭಾಸ್ ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ಬೇರೆ ದೇಶಗಳಲ್ಲೂ ಅಭಿಮಾನಿಗಳು ಇದ್ದಾರೆ. ಅಮೆರಿಕದ ಹಲವು ಸೆಂಟರ್ಗಳಲ್ಲಿ ‘ಆದಿಪುರುಷ್’ ಬಿಡುಗಡೆ ಆಗುತ್ತಿದೆ.
ನಟ ಪ್ರಭಾಸ್ (Prabhas) ಅವರು ‘ಆದಿಪುರುಷ್’ ಸಿನಿಮಾದಿಂದ ದೊಡ್ಡ ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾಗಾಗಿ ಸಾಕಷ್ಟು ತಿಂಗಳಿಂದ ಕಾದಿದ್ದಾರೆ. ದೊಡ್ಡ ಪರದೆಯಲ್ಲಿ ಈ ಚಿತ್ರವನ್ನು ಕಣ್ತುಂಬಿಕೊಳ್ಳುವ ಸಮಯ ಬಂದಿದೆ. ಜೂನ್ 16ರಂದು ವಿಶ್ವಾದ್ಯಂತ ‘ಆದಿಪುರುಷ್’ ಸಿನಿಮಾ (Adipurush Movie) ಬಿಡುಗಡೆ ಆಗಲಿದೆ. ಆದರೆ ಈ ಸಂದರ್ಭದಲ್ಲಿ ಪ್ರಭಾಸ್ ಅವರು ಭಾರತದಲ್ಲಿ ಇರುವುದಿಲ್ಲ ಎಂಬ ಸುದ್ದಿ ಕೇಳಿಬಂದಿದೆ. ಈಗಾಗಲೇ ಅವರು ಅಮೆರಿಕಕ್ಕೆ (America) ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಸ್ಟಾರ್ ನಟರು ತಮ್ಮ ಸಿನಿಮಾ ಬಿಡುಗಡೆ ಆದಾಗ ಅಭಿಮಾನಿಗಳ ಜೊತೆ ಕುಳಿತು ಫಸ್ಟ್ ಡೇ ಫಸ್ಟ್ ಶೋ ನೋಡಿ ಎಂಜಾಯ್ ಮಾಡುತ್ತಾರೆ. ಆದರೆ ‘ಆದಿಪುರುಷ್’ ರಿಲೀಸ್ ದಿನವೇ ಪ್ರಭಾಸ್ ಅವರು ಭಾರತದಲ್ಲಿ ಇರುವುದಿಲ್ಲ ಎಂಬುದು ಅಚ್ಚರಿ ಮೂಡಿಸಿದೆ.
ಪ್ರಭಾಸ್ ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ಬೇರೆ ದೇಶಗಳಲ್ಲೂ ಅಭಿಮಾನಿಗಳು ಇದ್ದಾರೆ. ‘ಬಾಹುಬಲಿ’ ಸಿನಿಮಾ ರಿಲೀಸ್ ಆದ ನಂತರ ಅವರಿಗೆ ಈ ಪರಿ ಜನಪ್ರಿಯತೆ ಸಿಕ್ಕಿತು. ಅಮೆರಿಕದ ಹಲವು ಸೆಂಟರ್ಗಳಲ್ಲಿ ‘ಆದಿಪುರುಷ್’ ಬಿಡುಗಡೆ ಆಗುತ್ತಿದೆ. ಹಾಗಾಗಿ ಅಲ್ಲಿಯೂ ಕೂಡ ಪ್ರಚಾರ ಮಾಡಬೇಕು ಎಂಬುದು ಚಿತ್ರತಂಡದ ಉದ್ದೇಶ. ಹಾಗಾಗಿ ಪ್ರಭಾಸ್ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಾರೆ ಎನ್ನಲಾಗಿದೆ. ಅಲ್ಲದೇ ಕೆಲವು ಅಭಿಮಾನಿಗಳನ್ನು ಕೂಡ ಭೇಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Ranbir Kapoor: ಬಡ ಮಕ್ಕಳಿಗಾಗಿ ‘ಆದಿಪುರುಷ್’ ಚಿತ್ರದ 10 ಸಾವಿರ ಟಿಕೆಟ್ ಉಚಿತವಾಗಿ ನೀಡಲು ಮುಂದಾದ ನಟ ರಣಬೀರ್ ಕಪೂರ್
‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ಅವರು ರಾಮನಾಗಿ ನಟಿಸಿದ್ದು, ಸೀತೆ ಪಾತ್ರಕ್ಕೆ ಕೃತಿ ಸನೋನ್ ಬಣ್ಣ ಹಚ್ಚಿದ್ದಾರೆ. ಲಕ್ಷ್ಮಣನಾಗಿ ಸನ್ನಿ ಸಿಂಗ್ ಅಭಿನಯಿಸಿದ್ದಾರೆ. ರಾವಣನ ಪಾತ್ರವನ್ನು ಸೈಫ್ ಅಲಿ ಖಾನ್ ಮಾಡಿದ್ದಾರೆ. ಆಂಜನೇಯನ ಪಾತ್ರದಲ್ಲಿ ದೇವದತ್ತ ನಾಗೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ಕೌತುಕ ಎಲ್ಲರ ಮನದಲ್ಲೂ ಮೂಡಿದೆ.
ಇದನ್ನೂ ಓದಿ: Adipurush: ‘ಆದಿಪುರುಷ್’ ಪ್ರದರ್ಶನ ಆಗುವ ಎಲ್ಲ ಚಿತ್ರಮಂದಿರದಲ್ಲಿ ಹನುಮನಿಗೆ ಒಂದು ಸೀಟು ಮೀಸಲು; ಏನಿದು ನಂಬಿಕೆ?
‘ಆದಿಪುರುಷ್’ ಚಿತ್ರದ ಹಿಂದಿ ಅವತರಣಿಕೆಯ ಸೆನ್ಸಾರ್ ಸರ್ಟಿಫಿಕೇಟ್ ಲಭ್ಯವಾಗಿದೆ. ಇದರಲ್ಲಿ ಚಿತ್ರದ ಅವಧಿ ಬಗ್ಗೆ ಮಾಹಿತಿ ಇದೆ. ಆ ಪ್ರಕಾರ, ಈ ಸಿನಿಮಾದ ಅವಧಿ ಬರೋಬ್ಬರು 2 ಗಂಟೆ 59 ನಿಮಿಷಗಳು. ಅಂದರೆ, 3 ಗಂಟೆಗೆ ಒಂದು ನಿಮಿಷ ಮಾತ್ರ ಬಾಕಿ. ಮಧ್ಯಂತರದ ಸಮಯವನ್ನೂ ಸೇರಿಸಿದರೆ ಈ ಸಿನಿಮಾದ ಪ್ರದರ್ಶನಕ್ಕೆ 3 ಗಂಟೆ 15 ನಿಮಿಷ ಬೇಕು. ಇದು ಪ್ರೇಕ್ಷಕರ ತಾಳ್ಮೆ ಪರೀಕ್ಷಿಸಬಹುದು. ಕೆಲವೊಮ್ಮೆ ಇದರಿಂದ ಸಿನಿಮಾಗೆ ಹಿನ್ನಡೆ ಆಗಲೂಬಹುದು. ಹಾಗಂತ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. 3 ಗಂಟೆ ಅವಧಿ ಇರುವ ಸಿನಿಮಾಗಳು ಸೂಪರ್ ಹಿಟ್ ಉದಾಹರಣೆ ಕೂಡ ಇದೆ.
ಇದನ್ನೂ ಓದಿ: Prabhas: ಮೊದಲ ದಿನ ‘ಆದಿಪುರುಷ್’ 100 ಕೋಟಿ ರೂ. ಕಲೆಕ್ಷನ್ ಮಾಡುತ್ತಾ? ಇಲ್ಲಿದೆ ಬಾಕ್ಸ್ ಆಫೀಸ್ ತಜ್ಞರ ಅಂದಾಜು ಲೆಕ್ಕ
ಕರ್ನಾಟಕದಲ್ಲಿ ‘ಆದಿಪುರುಷ್’ ಸಿನಿಮಾದ ವಿತರಣೆ ಹಕ್ಕುಗಳು ‘ಕೆಆರ್ಜಿ ಸ್ಟುಡಿಯೋಸ್’ ಸಂಸ್ಥೆಯ ಪಾಲಾಗಿದೆ. ‘ನಮಗೆ ಆದಿಪುರುಷ್ ಚಿತ್ರದ ಕರ್ನಾಟಕದ ವಿತರಣೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ’ ಎಂದು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.