ಲಾಲು ಬಯೋಪಿಕ್​ನಲ್ಲಿ ನಟಿಸೋಕೆ ಪಂಕಜ್ ತ್ರಿಪಾಠಿ ಸೂಕ್ತ; ಶುರುವಾಗಿದೆ ಚರ್ಚೆ 

‘ಒಎಂಜಿ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ ಪಂಕಜ್ ತ್ರಿಪಾಠಿ. ಅವರು ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಅವರು ನಿರ್ವಹಿಸುವ ಪಾತ್ರ ಅನೇಕರಿಗೆ ಇಷ್ಟ ಆಗುತ್ತದೆ. ಪಂಕಜ್ ಅವರು ಲಾಲು ಪ್ರಸಾದ್ ಯಾದವ್ ಬಯೋಪಿಕ್​ಗೆ ಸೂಕ್ತ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ.

ಲಾಲು ಬಯೋಪಿಕ್​ನಲ್ಲಿ ನಟಿಸೋಕೆ ಪಂಕಜ್ ತ್ರಿಪಾಠಿ ಸೂಕ್ತ; ಶುರುವಾಗಿದೆ ಚರ್ಚೆ 
ಲಾಲು-ಪಂಕಜ್ ತ್ರಿಪಾಠಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Oct 28, 2023 | 8:10 AM

ಬಯೋಪಿಕ್ ಮಾಡುವ ಟ್ರೆಂಡ್ ಇತ್ತೀಚೆಗೆ ಜೋರಾಗಿದೆ. ಹಲವು ಬಯೋಪಿಕ್​ಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ಕ್ರಿಕೆಟರ್, ರಾಜಕಾರಣಿ ಸೇರಿ ಅನೇಕರ ಬಯೋಪಿಕ್ ಸಿದ್ಧಗೊಂಡಿದೆ. ಈಗ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav) ಕುರಿತು ಬಯೋಪಿಕ್ ರೆಡಿ ಆಗಲಿದೆ ಎನ್ನಲಾಗುತ್ತಿದೆ. ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ಝಾ ಅವರು ಈ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಲಾಲು ಪ್ರಸಾದ್ ಯಾದವ್ ಕುಟುಂಬವನ್ನು ಸಂಪರ್ಕಿಸಿ ಈ ಬಗ್ಗೆ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಲಾಲು ಪ್ರಸಾದ್ ಅವರು ಹಲವು ಹಗರಣ ಮಾಡಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಹಲವು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದೆ. ಅವರ ಬಗ್ಗೆ ಸಿನಿಮಾ ರೆಡಿ ಆದರೆ, ಯಾವೆಲ್ಲ ವಿಚಾರಗಳು ಇದರಲ್ಲಿ ಇರುತ್ತವೆ? ಅವರು ಹಗರಣವನ್ನು ಹೇಗೆ ಮಾಡಿದರೂ ಎಂಬುದನ್ನು ತೋರಿಸಲಾಗುತ್ತದೆಯೇ ಅಥವಾ ಅವವರನ್ನು ಒಳ್ಳೆಯವರು ಎಂದು ಬಣ್ಣಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಪಾತ್ರವನ್ನು ಯಾರು ಮಾಡಿದರೆ ಸೂಕ್ತ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಪಂಕಜ್ ತ್ರಿಪಾಠಿ

‘ಒಎಂಜಿ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ ಪಂಕಜ್ ತ್ರಿಪಾಠಿ. ಅವರು ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಅವರು ನಿರ್ವಹಿಸುವ ಪಾತ್ರ ಅನೇಕರಿಗೆ ಇಷ್ಟ ಆಗುತ್ತದೆ. ಪಂಕಜ್ ಅವರು ಲಾಲು ಪ್ರಸಾದ್ ಯಾದವ್ ಬಯೋಪಿಕ್​ಗೆ ಸೂಕ್ತ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ಲಾಲು ಅವರಿಗೆ ವಯಸ್ಸಾದ ನಂತರದ ಕಥೆ ಹೇಳುವಾಗ ಇವರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್​ಕುಮಾರ್ ರಾವ್

ರಾಜ್​​ಕುಮಾರ್ ರಾವ್ ಅವರು ನಟನೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಅವರ ಮಾಡಿರುವ ಪಾತ್ರಗಳಿಗೆ ಅನೇಖರು ಭೇಷ್ ಎಂದಿದ್ದಾರೆ. ಅವರು ಮಾಸ್ ಹಾಗೂ ಕ್ಲಾಸ್ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ. ಅವರು ಲಾಲು ಅವರ ಯಂಗರ್​ ವರ್ಷನ್ ಮಾಡಿದರೆ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಿಕ್ಕಿ ಕೌಶಲ್

ಲಾಲು ಬಯೋಪಿಕ್​ಗೆ ವಿಕ್ಕಿ ಕೌಶಲ್ ಹೆಸರು ಕೂಡ ಓಡಾಡುತ್ತಿದೆ. ಅವರು ಲಾಲು ಪ್ರಸಾದ್ ಯಾದವ್ ಬಯೋಪಿಕ್​​ನಲ್ಲಿ ನಟಿಸಬೇಕು ಎಂದು ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಸಂಜಯ್ ದತ್ ಬಯೋಪಿಕ್ ‘ಸಂಜು’ ಚಿತ್ರದಲ್ಲಿ ಸಂಜಯ್ ದತ್ ಗೆಳೆಯನ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದರು.

ರಣಬೀರ್ ಕಪೂರ್

ರಣಬೀರ್ ಕಪೂರ್ ಅವರು ಸಂಜಯ್ ದತ್ ಬಯೋಪಿಕ್ ‘ಸಂಜು’ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಅವರು ಲಾಲು ಪ್ರಸಾದ್ ಸಿನಿಮಾದ ಬಯೋಪಿಕ್ ಮಾಡಿದರೆ ನ್ಯಾಯ ಒದಗಿಸುತ್ತಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಫ್ಯಾಮಿಲಿ ಮ್ಯಾನ್ 3’ ಸರಣಿಗಾಗಿ ಕಾದು ಕುಳಿತವರಿಗೆ ಬ್ಯಾಡ್ ನ್ಯೂಸ್ ನೀಡಿದ ಮನೋಜ್ ಬಾಜ್​ಪಾಯಿ

ಮನೋಜ್ ಬಾಜ್​ಪಾಯಿ

ಮನೋಜ್ ಬಾಜ್​ಪಾಯಿ ಅವರು ‘ಫ್ಯಾಮಿಲಿ ಮ್ಯಾನ್ 2’ ಮೂಲಕ ತಮ್ಮ ನಟನೆಯನ್ನು ಸಾಬೀತು ಮಾಡಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಇದೆ. ಅವರು ಲಾಲು ಬಯೋಪಿಕ್ ಮಾಡಲಿ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ