AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಲನ’ ಪಾರ್ವತಿ ನಟನೆಯ ಈ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಚಿತ್ರ ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ

ಪಾರ್ವತಿ ತಿರುವೋತು ಅಭಿನಯದ 'ಪ್ರಥಮ ದೃಷ್ಟಿಯ ಕುಟ್ಟಕ್ಕಾರ್' ಮಲಯಾಳಂ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಸಿನಿಮಾವು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಹಾಗೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಶಹಾದ್ ನಿಲಂಬೂರ್ ನಿರ್ದೇಶನದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಗಳಿಕೆ ಕಂಡಿದ್ದು, ಸದ್ಯ ನೆಟ್‌ಫ್ಲಿಕ್ಸ್ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. 

‘ಮಿಲನ’ ಪಾರ್ವತಿ ನಟನೆಯ ಈ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಚಿತ್ರ ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ
ಪಾರ್ವತಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 12, 2026 | 9:26 AM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು
  • ಪ್ರೇಕ್ಷಕರ ಮನಗೆದ್ದ 'ಪ್ರಥಮ ದೃಷ್ಟಿಯ ಕುಟ್ಟಕ್ಕಾರ್' ಸಿನಿಮಾ
  • ಪೊಲೀಸ್ ಅಧಿಕಾರಿಯಾದ ಪಾರ್ವತಿ 

‘ಮಿಲನ’ ಖ್ಯಾತಿಯ ನಟಿ ಪಾರ್ವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂ ಇನ್ವೆಸ್ಟಿಗೇಟಿವ್ ಥ್ರಿಲ್ಲರ್ ಸಿನಿಮಾ ‘ಪ್ರಥಮ ದೃಷ್ಟಿಯ ಕುಟ್ಟಕ್ಕಾರ್’ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಒಟಿಟಿ ಪ್ರೇಕ್ಷಕರಿಂದಲೂ ಸಿನಿಮಾ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.ಓಣಂ ಹಬ್ಬದ ಸಮಯದಲ್ಲಿ ತೆರೆಗೆ ಬಂದ ‘ಪ್ರಥಮ ದೃಷ್ಟಿಯ ಕುಟ್ಟಕ್ಕಾರ್’ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅತ್ಯುತ್ತಮ ಕಲೆಕ್ಷನ್ ಮಾಡಿತ್ತು. ಶಹಾದ್ ನಿಲಂಬೂರ್ ನಿರ್ದೇಶನದ ಈ ಚಿತ್ರದಲ್ಲಿ ಪಾರ್ವತಿ ಅವರು ತಮ್ಮ ವೃತ್ತಿಜೀವನದಲ್ಲೇ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಒಟಿಟಿ ರಿಲೀಸ್ ಬಗ್ಗೆ ಇಲ್ಲ ಅಪ್​ಡೇಟ್​; ಕಾಯುವಿಕೆಗೆ ಕೊನೆ ಯಾವಾಗ?

ಚಿತ್ರದಲ್ಲಿ ಮ್ಯಾಥ್ಯೂ ಥಾಮಸ್, ಸಿದ್ಧಾರ್ಥ್ ಭರತನ್, ಉನ್ನಿಮಯ ಪ್ರಸಾದ್ ಮತ್ತು ವಿಜಯರಾಘವನ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಕಥೆಯ ಕುತೂಹಲಕಾರಿ ಹೆಣಿಕೆ, ಒಂದರ ಹಿಂದೆ ಒಂದರಂತೆ ಎದುರಾಗುವ ಸಸ್ಪೆನ್ಸ್ ತಿರುವುಗಳು ಮತ್ತು ನಾಯಕರ ನೈಜ ಅಭಿನಯವು ಸಿನಿಮಾದ ಯಶಸ್ಸಿಗೆ ಕಾರಣವಾಗಿದೆ. ಕಡಿಮೆ ಬಜೆಟ್‌ನಲ್ಲಿ ತಯಾರಾಗಿದ್ದರೂ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ವಿಶ್ವಾದ್ಯಂತ ಸುಮಾರು 40.93 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು ಎಂಬುದು ವಿಶೇಷ.

ಥಿಯೇಟರ್‌ಗಳಲ್ಲಿ ಸಿನಿಮಾ ವೀಕ್ಷಿಸಲು ತಪ್ಪಿಸಿಕೊಂಡವರಿಗಾಗಿ ಹಾಗೂ ಮತ್ತೊಮ್ಮೆ ಕಥೆಯ ರೋಚಕತೆಯನ್ನು ಸವಿಯಲು ಬಯಸುವವರಿಗಾಗಿ ಈಗ ಒಟಿಟಿಯಲ್ಲಿ ಚಿತ್ರ ಮಂದಿದೆ. ಈ ಸಿನಿಮಾ ಅಕ್ಟೋಬರ್ 9ರಂದು ನೆಟ್​ಫ್ಲಿಕ್ಸ್​​ನಲ್ಲಿ ರಿಲೀಸ್ ಆಗಿದೆ. ಮಲಯಾಳಂ ಮೂಲ ಭಾಷೆಯ ಜೊತೆಗೆ ಇತರ ಭಾಷೆಯಲ್ಲೂ ಸಿನಿಮಾ ಪ್ರಸಾರ ಆರಂಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Mon, 12 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು