Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು.

Paul Ritter: ಹ್ಯಾರಿ ಪಾಟರ್​ ಖ್ಯಾತಿಯ ನಟ ಪೌಲ್​ ರಿಟರ್ ಬ್ರೇನ್​ ಟ್ಯೂಮರ್​ನಿಂದ ನಿಧನ!
ಪೌಲ್​ ರಿಟರ್​
Follow us
ಮದನ್​ ಕುಮಾರ್​
|

Updated on: Apr 07, 2021 | 12:21 PM

ಹಾಲಿವುಡ್​ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಕಲಾವಿದ ಪೌಲ್​ ರಿಟರ್​ ಅವರು ಸೋಮವಾರ (ಏ.5) ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು. ಬಹಳ ಕಾಲದಿಂದ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು. ಕಡೆಗೂ ಚಿಕಿತ್ಸೆ ಫಲಕಾರಿಯಾಗದೇ ಏ.5ರ ರಾತ್ರಿ ನಿಧನರಾದರು ಎಂದು ಪೌಲ್​ ರಿಟರ್​ ಪರ ವಕ್ತಾರರು ತಿಳಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್​ ರಿಟರ್​ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್​ನ ಜನಪ್ರಿಯ ‘ಹ್ಯಾರಿ ಪಾಟರ್​’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು. ಬ್ರಿಟಿಷ್​ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಫೇಮಸ್​ ಆಗಿದ್ದ ಪೌಲ್​ ರಿಟರ್​ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

ಫ್ರೈಡೇ ನೈಟ್​ ಡಿನ್ನರ್​, ಚೆರ್ನೋಬಿಲ್​ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ಹ್ಯಾರಿ ಪಾಟರ್ ಮಾತ್ರವಲ್ಲದೆ, ಜೇಮ್ಸ್​ ಬಾಂಡ್​ ಸರಣಿಯ ‘ಕ್ವಾಂಟಮ್​ ಆಫ್​ ಸೊನೇಸ್​’ ಸಿನಿಮಾ ಮೂಲಕವೂ ಪೌಲ್​ ರಿಟರ್​ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಸಿನಿಮಾ, ಧಾರಾವಾಹಿ ಮತ್ತು ರಂಗಭೂಮಿಯಲ್ಲಿ ಹಲವು ಬಗೆಯ ಪಾತ್ರಗಳನ್ನು ನಿಭಾಯಿಸಿದ ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

‘ಪೌಲ್​ ರಿಟಿರ್​ ನಿಧನರಾದರು ಎಂಬುದನ್ನು ತೀವ್ರ ವಿಷಾದದೊಂದಿಗೆ ತಿಳಿಸುತ್ತಿದ್ದೇವೆ. ಅವರು ಕೊನೆಯುಸಿರೆಳೆದ ವೇಳೆ ಮನೆಯಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳು ಜೊತೆಯಲ್ಲಿ ಇದ್ದರು. 54 ವರ್ಷದ ಪೌಲ್​ ರಿಟರ್​ ಅವರು ಬ್ರೇನ್​ ಟ್ಯೂಮರ್​ನಿಂದ ಬಳಲುತ್ತಿದ್ದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Pratima Devi Passed Away: ಚಂದನವನದ ಹಿರಿಯ ನಟಿ ಪ್ರತಿಮಾ ದೇವಿ ನಿಧನ

ಖ್ಯಾತ ನಿರ್ದೇಶಕ ಎಸ್​.ಪಿ. ಜನನಾಥನ್​ ಹೃದಯಾಘಾತದಿಂದ ನಿಧನ! ಸೆಲೆಬ್ರಿಟಿಗಳ ಸಂತಾಪ

(Paul Ritter Death: Harry Potter actor Paul Ritter dies due to Brain Tumour at 54)

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು